ಮಾ.3 ರಂದು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ

ಮಡಿಕೇರಿ ಮಾ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವು ಮಾರ್ಚ್, 03 ರಂದು ಬೆಳಗ್ಗೆ 11 ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ.
ಶಾಲಾ ಶಿಕ್ಷಣ, ಸಾಕ್ಷರತೆ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕೊಡಗು ಜಿ.ಪಂ. ಮಾಜಿ ಅಧ್ಯಕ್ಷರು ಹಗೂ ಜಿಲ್ಲಾ ಮರಾಠ ಸಮಾಜದ ಅಧ್ಯಕ್ಷರಾದ ಎಸ್.ಎನ್.ರಾಜಾರಾವ್, ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವೆಂಕಟ ನಾಯಕ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.
