ಅಮೀನ್ ಮೊಹಿಸಿನ್ ಮಡಿಕೇರಿ ಕ್ಷೇತ್ರದ SDPI ಅಭ್ಯರ್ಥಿ : ಕುಶಾಲನಗರದಲ್ಲಿ ಬೆಂಬಲಿತರ ಸಂಭ್ರಮ
02/03/2023

ಮಡಿಕೇರಿ ಮಾ.2 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯನ್ನಾಗಿ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಅವರನ್ನು ಪಕ್ಷದ ವರಿಷ್ಠರು ಘೋಷಿಸಿದ್ದಾರೆ. ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಜಿಲ್ಲೆಗೆ ಆಗಮಿಸುವ ಸಂದರ್ಭ ಕುಶಾಲನಗರದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಅಮೀನ್ ಮೊಹಿಸಿನ್ ಅವರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಪಕ್ಷದ ಪರ ಘೋಷಣೆಗಳನ್ನು ಕೂಗಿದರು. ಮಡಿಕೇರಿ ಕ್ಷೇತ್ರದಲ್ಲಿ ಅಮೀನ್ ಮೊಹಿಸಿನ್ ಸ್ಪರ್ಧೆ ಕುತೂಹಲ ಮೂಡಿಸಿದೆ.
