ಕರಿಕೆ : ಭಾರೀ ಗಾಳಿಗೆ ಧರೆಗುರುಳಿದ ಮರ, ವಿದ್ಯುತ್ ಕಂಬಗಳು
02/03/2023

ಮಡಿಕೇರಿ ಮಾ.2 : ಕರಿಕೆ ಗ್ರಾ.ಪಂ ವ್ಯಾಪ್ತಿಯ ವಿವಿಧೆಡೆ ಬೀಸಿದ ಭಾರೀ ಗಾಳಿಗೆ ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಭಾರೀ ಗಾಳಿ ಬೀಸುತ್ತಿದ್ದು, ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಗ್ರಾಮೀಣ ಭಾಗದ ಜನರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಮರ ಮುರಿದು ವಿದ್ಯುತ್ ಲೈನ್ ಮೇಲೆ ಬಿದಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರಿಂದ ಬಾಳೆಬಳಪು ಕುಂಡತ್ತಿಕಾನ ಕಾಲೋನಿಯ ಏಳು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಲಿದ್ದು, ಸೆಸ್ಕ್ ಇಲಾಖೆ ಮರಗಳನ್ನು ತೆರವುಗೊಳಿಸಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
