ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ : ಸೋಮವಾರಪೇಟೆ ವಿದ್ಯಾರ್ಥಿನಿಯರ ಸಾಧನೆ
02/03/2023

ಸೋಮವಾರಪೇಟೆ ಮಾ.2 : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದಲ್ಲಿ ಏಕಕಾಲಕ್ಕೆ ನಡೆದ ಅನ್‌ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪಿ.ಬಿ.ಸಂಜನ ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ಶಾಲೆಯ ಕೆ.ಸೌಜನ್ಯ ದ್ವಿತೀಯ ಮತ್ತು ಸ್ನೇಹಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.
