Advertisement
2:07 AM Thursday 7-December 2023

ಮಡಿಕೇರಿಯಲ್ಲೊಂದು ಗಾಂಧಿ ಸ್ಮಾರಕ

02/03/2023

ಮಡಿಕೇರಿ ಮಾ.2 : ನಗರದ ಗಾಂಧಿ ಮಂಟಪ ವ್ಯಾಪ್ತಿಯಲ್ಲಿ ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ.
ಕಳೆದ ಹಲವು ವರ್ಷಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಖಜಾನೆ ವಿಭಾಗದಲ್ಲಿಡಲಾಗಿರುವ ಗಾಂಧೀಜಿ ಚಿತಾಭಸ್ಮವನ್ನು ಶಾಶ್ವತವಾದ ಸ್ಮಾರಕದಲ್ಲಿಡಲು ಯೋಜನೆ ರೂಪಿಸಲಾಗಿದೆ. ರೂ.50 ಲಕ್ಷವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಮೂಲಕ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶ ಹೊರಡಿಸಲಾಗಿದೆ.
ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಹಾಗೂ ಶಾಸಕ ಕೆ.ಜಿ.ಬೋಪಯ್ಯ ಅವರು ಗಾಂಧಿ ಸ್ಮಾರಕ ನಿರ್ಮಾಣಕ್ಕೆ ಅನುದಾನ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.