Advertisement
3:14 AM Saturday 2-December 2023

ಕಾಜೂರು ಹಿರಿಯ ಪ್ರಾಥಮಿಕ ಶಾಲೆಗೆ ಡಿಜಿಟಲ್ ಧ್ವನಿವರ್ಧಕ ಕೊಡುಗೆ

03/03/2023

ಸೋಮವಾರಪೇಟೆ ಮಾ.3 : ಕಾಜೂರು ಹಿರಿಯ ಪ್ರಾಥಮಿಕ ಶಾಲೆಗೆ, ಐಗೂರು ಗ್ರಾಮದ ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ನಂದಿನಿ ವಿಶ್ವನಾಥ ರಾಜೇ ಅರಸ್ ಡಿಜಿಟಲ್ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ರಾಜೇ ಅರಸ್, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಚಂದ್ರಶೇಖರ್ ಹಾಗು ಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಸರಳಕುಮಾರಿ ಇದ್ದರು.