Advertisement
3:06 AM Saturday 2-December 2023

ರಾಜಸೀಟು ಉದ್ಯಾನವನಕ್ಕೆ ಮತ್ತಷ್ಟು ಮೆರುಗು ತಂದ ಮಕ್ಕಳ ಸಾಹಸ ಕ್ರೀಡೆ : ಶಾಸಕರಿಂದ ಉದ್ಘಾಟನೆ

03/03/2023

ಮಡಿಕೇರಿ ಮಾ.3 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಗರದ ರಾಜಸೀಟು ಉದ್ಯಾನವನದಲ್ಲಿ ನಿರ್ಮಾಣವಾದ ಸಾಹಸ ಕ್ರೀಡೆಯನ್ನು ಶಾಸಕ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ವೀಕ್ಷಿಸಿದರು.
ನಂತರ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ರಾಜಸೀಟು ಆಕರ್ಷಣೀಯ ಸ್ಥಳವಾಗಿದೆ. ತೋಟಗಾರಿಕೆ ಮತ್ತು ಜಿಲ್ಲಾಡಳಿತದಿಂದ ಬೇರೆ ಬೇರೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದೊಂದು ವಿನೂತನ ಕಾರ್ಯಕ್ರಮವಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಸಾಹಸ ಕ್ರೀಡೆಗೆ ಚಾಲನೆ ನೀಡಲಾಗಿದೆ ಎಂದರು.
ಮಾ.18 ರಂದು ಮಾನ್ಯ ಮುಖ್ಯಮಂತ್ರಿ ಅವರು ಗ್ರೇಟರ್ ರಾಜಸೀಟು ಉದ್ಯಾನವನ ಉದ್ಘಾಟಿಸಲಿದ್ದಾರೆ. ರಾಜಸೀಟು ಒಳ್ಳೆಯ ಪ್ರೇಕ್ಷಣೀಯ ಸ್ಥಳವಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಈ ರೀತಿಯ ಸಾಹಸ ಕ್ರೀಡೆಗೆ ಸಂಬಂಧಿಸಿದಂತೆ ಕೊಡಗಿನ ಅನೇಕ ಭಾಗಗಳಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ಈಗಾಗಲೇ ಕೊಡಗಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಿದ್ದು, ಪ್ರವಾಸಿಗರು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾಹಸ ಕ್ರೀಡೆಗಳಂತಹ ಅಭಿವೃದ್ಧಿ ಯೋಜನೆಗಳು ಪ್ರವಾಸಿಗರನ್ನು ಆಕರ್ಷಿಸಲಿವೆ ಎಂದು ಅವರು ಹೇಳಿದರು.
ಬಳಿಕ ನಗರದ ರಾಜಸೀಟು ಉದ್ಯಾನವನದಲ್ಲಿ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರ್ಮಾಣವಾದ ಸಾಹಸ ಕ್ರೀಡಾ ವಿಭಾಗವನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ನಾಯಕ್, ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್, ಕೊಡಗು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಇತರರು ಇದ್ದರು.