Advertisement
2:10 AM Thursday 7-December 2023

ಮಡಿಕೇರಿ : ಆಯುಷ್ ಮೊಬೈಲ್ ಮೆಡಿಕಲ್ ಯುನಿಟ್ ಗೆ ಚಾಲನೆ

03/03/2023

ಮಡಿಕೇರಿ ಮಾ.3 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಆಯುಷ್ ಮೊಬೈಲ್ ಮೆಡಿಕಲ್ ಯುನಿಟ್‍ಗೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ ಅವರು ನಗರದ ರಾಜಸೀಟು ಬಳಿ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಕಾರ್ಯಪ್ಪ, ಪ್ರಾಂಶುಪಾಲರಾದ ಡಾ.ವಿಶಾಲ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ ಇತರರು ಇದ್ದರು.