ಮಾ.16 ಮತ್ತು 17 ರಂದು ಶ್ರೀ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ
04/03/2023

ಮಡಿಕೇರಿ ಮಾ.4 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಮಾ.16 ಮತ್ತು 17 ರಂದು ನಡೆಯಲಿದೆ.
ವಾರ್ಷಿಕೋತ್ಸವದ ಅಂಗವಾಗಿ ಮಾ.16 ರಂದು ಸಂಜೆ 5 ಗಂಟೆಯಿಂದ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ (ದಿಕ್ಷಾಲಕ ಬಲಿ), ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.
ಮಾ.17 ರಂದು ಬೆಳಿಗ್ಗೆ 8 ಗಂಟೆಯಿಂದ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಟ್ರಸ್ಟ್‍ನ ಅಧ್ಯಕ್ಷರು ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.
