Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಭಾಷಾ ಸಾಮರಸ್ಯದಿಂದ ಉತ್ತಮ ಬದುಕು ಸಾಧ್ಯ : ಶಾಸಕ ಕೆ.ಜಿ.ಬೋಪಯ್ಯ
ಇತ್ತೀಚಿನ ಸುದ್ದಿಗಳು

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಭಾಷಾ ಸಾಮರಸ್ಯದಿಂದ ಉತ್ತಮ ಬದುಕು ಸಾಧ್ಯ : ಶಾಸಕ ಕೆ.ಜಿ.ಬೋಪಯ್ಯ

March 4, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.4 : ಕೊಡಗು ಜಿಲ್ಲೆಯಲ್ಲಿ ಸಾವಿರಾರು ವರ್ಷಗಳಿಂದ ನಮ್ಮ ಹಿರಿಯರು ಭಾಷಾ ಸಾಮರಸ್ಯ ಕಾಪಾಡಿಕೊಂಡು ಬಂದಿದ್ದಾರೆ, ಅದನ್ನು ಉಳಿಸಿಕೊಂಡು ಹೋಗಬೇಕು. ಕನ್ನಡ ಭಾಷೆಯನ್ನು ಪ್ರೀತಿಸಬೇಕು, ಗೌರವಿಸಬೇಕು ಜೊತೆಗೆ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ.
ಗೋಣಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಡಾ.ಐ.ಮಾ.ಮುತ್ತಣ್ಣ ವೇದಿಕೆಯಲ್ಲಿ ಮಾತನಾಡಿದ ಅವರು ಕೊಡಗಿನ ವಿಶಿಷ್ಟ ಸಂಸ್ಕೃತಿ ಎಲ್ಲೆಡೆ ಪಸರಿಸಲಿ ಎಂದರು.
ಕೊಡಗಿನ ಗೌರಮ್ಮ, ಪಂಜೆ ಮಂಗೇಶರಾಯರು ಕನ್ನಡ ಸಾಹಿತ್ಯಕ್ಕೆ ಬಹು ದೊಡ್ಡ ಕೊಡುಗೆ ನೀಡಿದ್ದಾರೆ. ಇಂಥಹ ಹಿರಿಯ ಚೇತನಗಳನ್ನು ನೆನಪಿಸಿಕೊಳ್ಳುವ ಮೂಲಕ ಜಿಲ್ಲೆಯ ಸಾಹಿತ್ಯ ಸಂಸ್ಕೃತಿ ಬೆಳವಣಿಗೆಗೆ ಮುಂದಾಗಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಈಚಿಗೆ ಮುಗಿದ ವಿಧಾನಸಭಾ ಅಧಿವೇಷನದಲ್ಲಿ ಸರ್ಕಾರದ ಸುತ್ತೋಲೆಗಳು ಕನ್ನಡದಲ್ಲೆ ಇರಬೇಕು ಎಂಬ ಮಸೂದೆ ಹೊರಡಿಸಲಾಗಿದೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಸುವ ಕೆಲಸ ಆಗಬೇಕು ಎಂದು ಹೇಳಿದರು.
ಕನ್ನಡದ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಮಾಜಿ ಅಧ್ಯಕ್ಷರಾದ ಡಾ.ಮನು ಬಳಿಗಾರ್ ಅವರು ಕೊಡಗು ಬಹಳ ವಿಶಿಷ್ಟ ಸಂಸ್ಕೃತಿ ಹೊಂದಿರುವ ಪ್ರದೇಶ. ಇಲ್ಲಿನ ಕೃಷಿ, ಸಂಸ್ಕೃತಿ, ಕೌಟುಂಬಿಕ ವ್ಯವಸ್ಥೆ ಮೊದಲಾದವುಗಳನ್ನು ಸಮರ್ಥವಾಗಿ ದಾಖಲಿಸುವ ಕೆಲಸವಾಗಬೇಕು ಎಂದರು.
ಮನುಷ್ಯ ಜಾತಿ ತಾನೊಂದೇ ವಲಂ ಎಂದು ಪಂಪ ಹೇಳಿದರೆ, ಶರಣರು, ಸಂತರು ಧರ್ಮ ಸಾಮರಸ್ಯಕ್ಕಾಗಿ ತಮ್ಮ ಜೀವನದುದ್ದಕ್ಕೂ ದುಡಿದಿದ್ದಾರೆ ಎಂದರು.
ಜ್ಞಾನ ಪೀಠ ಪಡೆದ 8 ಮಂದಿ ಸಾಹಿತಿಗಳು, ಭಾರತ ರತ್ನ ಡಾ.ಸಿ.ಎನ್.ಆರ್ ರಾವ್, ಇನ್ಪೋಸಿಸ್ ಸಂಸ್ಥೆಯ ಸುಧಾ ಮೂರ್ತಿ ಕನ್ನಡದಲ್ಲೇ ಓದಿದವರು. ಇಂಗ್ಲಿಷಿನ ಹುಚ್ಚು ಬಿಡಿ. ಸಾವಿರಾರು ವರ್ಷಗಳ ಇತಿಹಾಸ ವಿರುವ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಕಡೆಗೆ ಗಮನಹರಿಸಿ ಎಂದರು.
ಸಮ್ಮೇಳನ ಧ್ವಜ ಹಸ್ತಾಂತರ: ಸಮ್ಮೇಳನದ ಅಧ್ಯಕ್ಷರಾದ ಡಾ.ಎಂ.ಪಿ.ರೇಖಾ ಅವರಿಗೆ ಕನ್ನಡ ಸಮ್ಮೇಳನದ ಧ್ವಜ ಹಸ್ತಾಂತರಿಸಿದ 15 ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಮಂಡೇಪAಡ ಗೀತಾ ಮಂದಣ್ಣ ಮಾತನಾಡಿ ಸಾಹಿತ್ಯ ಕಮ್ಮಟ ಗಳನ್ನು ಏರ್ಪಡಿಸಿ ಯುವ ಬರಹಗಾರರಿಗೆ ಸಾಹಿತ್ಯ ಕೃಷಿಯ ಬಗ್ಗೆ ಮಾರ್ಗದರ್ಶನ ನೀಡುವುದು ಒಳಿತು. ಸಾಹಿತಿಗಳು ಅರ್ಜಿ ಹಾಕಿ ಪ್ರಶಸ್ತಿ ತೆಗೆದುಕೊಳ್ಳುವುದಕ್ಕಿಂತ ಅವರ ಸಾಧನೆ ಗುರುತಿಸಿ ಪ್ರಶಸ್ತಿ ನೀಡುವಂತಾಗಬೇಕು ಎಂದು ಆಶಿಸಿದರು.
ಪುಸ್ತಕ ಬಿಡುಗಡೆ: ಜಯಪ್ರಕಾಶ್ ಪುತ್ತೂರು ಅವರ ಬದುಕಲು ಬಿಡಿ ಪ್ಲೀಸ್, ಶರ್ಮಿಳಾ ರಮೇಶ್ ಅವರ ಲಹರಿ ಲಲಿತ ಪ್ರಬಂಧ, ಕಿಗ್ಗಾಲು ಗಿರೀಶ್ ಅವರ ಅನಿರೀಕ್ಷಿತ ತಿರುವುಗಳು, ಕೃಪಾ ದೇವರಾಜ್ ಅವರ ಚೌಚೌ ಬಾತ್, ರೆ.ಫಾ.ಪ್ರಾನ್ಸಿಸ್ ಚಿರಯ್ಕಲ್ ಅವರ ಗ್ರಾಮೀಣ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸಬಲೀಕರಣ ಕೃತಿಗಳನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಬಿಡುಗಡೆ ಮಾಡಿದರು.
::: ಸ್ಮರಣ ಸಂಚಿಕೆಯ ಮುಖಪುಟ ಬಿಡುಗಡೆ :::
ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮೇಳನ ಸ್ಮರಣ ಸಂಚಿಕೆ ಡಿಂಡಿಮದ ಮುಖಪುಟ ಬಿಡುಗಡೆ ಮಾಡಿದರು.
ಸಮ್ಮೇಳನದ ಅಧ್ಯಕ್ಷೆ ಎಂ.ಪಿ.ರೇಖಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ, ಶೀಲಾ ಬೋಪಣ್ಣ, ಬಹರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷ ಕೆ.ಬಿ.ಗಿರೀಶ್ ಗಣಪತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನ್ನಕ್ಕಮನೆ ಸೌಮ್ಯ ಬಾಲು, ಜಿಲ್ಲಾ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಎಂಬಿ.ಜೋಯಪ್ಪ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್, ರೇವತಿ ರಮೇಶ್. ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜೇಶ್ ಪದ್ಮನಾಭ ಹಾಜರಿದ್ದರು.
ನಿರ್ಮಲ ಬೋಪಣ್ಣ, ವಿ.ಟಿ.ಶ್ರೀನಿವಾಸ್ ಮತ್ತು ತಂಡದವರಿAದ ಕನ್ನಡ ಗೀತೆಗಳ ಗಾಯನ ನಡೆಯಿತು. ಈ ಕಾರ್ಯಕ್ರಮವನ್ನು ಹಿರಿಯ ಕಲಾವಿದೆ ನಿರ್ಮಲಾ ಬೋಪಣ್ಣ ಉದ್ಘಾಟಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್. ಎನ್. ಕುಮಾರ್ ಹಾಜರಿದ್ದರು.
ಆರಂಭದಲ್ಲಿ ಬಿರುನಾಣಿಯ ಶಿಕ್ಷಕ ನಾಗರಾಜು, ವಿ.ಟಿ.ಶ್ರೀನಿವಾಸ್, ರೇಖಾ ಶ್ರೀಧರ್. ಎಸ್.ಟಿ.ಗಿರೀಶ್ ಹಾಗೂ ತಂಡದವರು ನಾಡಗೀತೆ ಹಾಗೂ ರೈತಗೀತೆ ಹಾಡಿದರು.

Share. Facebook Twitter Pinterest LinkedIn Tumblr Email WhatsApp
Previous Articleಸೋಮವಾರಪೇಟೆ, ಕುಶಾಲನಗರ, ವಿರಾಜಪೇಟೆ ವಕೀಲರ ಭವನ ನಿರ್ಮಾಣಕ್ಕೆ ಭೂಮಿಪೂಜೆ : ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ನ್ಯಾಯ ಸಿಗುವಂತಾಗಬೇಕು
Next Article ಮೇಕೇರಿ : ಸ್ವಾಗತ ಯುವಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.