Advertisement
2:18 AM Thursday 7-December 2023

ವಸತಿ ರಹಿತ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ

06/03/2023

ಮಡಿಕೇರಿ ಮಾ.6 : ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪ್ರವರ್ಗ-1 ಕ್ಕೆ ಸೇರಿದ ಅಲೆಮಾರಿ/ ಅರೆಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ಅರ್ಹ ವಸತಿ ರಹಿತ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಾಗಿದೆ. ಸಂಬಂಧಿಸಿದ ಅರ್ಜಿಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯಲ್ಲಿ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದು.
ವಸತಿ ಸೌಲಭ್ಯದ ಫಲಾಪೇಕ್ಷಿಗಳು ಸರ್ಕಾರದ ಆದೇಶದಂತೆ ಅಲೆಮಾರಿ/ಅರೆಅಲೆಮಾರಿ ಸಮುದಾಯದವರೆಂದು ಗುರುತಿಸಿ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿದಾರರು ಈ ಹಿಂದೆ ಯಾವುದೇ ಯೋಜನೆಗಳಲ್ಲಿ, ವಿವಿಧ ಇಲಾಖೆಗಳು/ ನಿಗಮಗಳಿಂದ ವಸತಿ ಸೌಲಭ್ಯವನ್ನು ಪಡೆದಿರಕೂಡದು. ವಸತಿ ರಹಿತರು ಸ್ವಂತ ನಿವೇಶನ ಹೊಂದಿರಬೇಕು ಹಾಗೂ ನಿವೇಶನವು ಅರ್ಜಿದಾರರಾದ ಮಹಿಳೆ/ ಪುರುಷರ ಹೆಸರಿನಲ್ಲಿ ನೊಂದಣಿಯಾಗಿರಬೇಕು. ಕುಟುಂಬದ ಒಟ್ಟು ವಾರ್ಷಿಕ ವರಮಾನ ರೂ.2 ಲಕ್ಷಗಳ ಮಿತಿಯೊಳಗಿರಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮ್ಯಾನ್ಸ್ ಕಾಂಪೌಂಡ್ ಹತ್ತಿರ ಮಡಿಕೇರಿ ದೂ.ಸಂ.08272-295628, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮ್ಯಾನ್ಸ್ ಕಾಂಪೌಂಡ್ ಹತ್ತಿರ ಮಡಿಕೇರಿ ಮೊ.ಸಂ.8762476790, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ, ವಿರಾಜಪೇಟೆ ಮೊ.ಸಂ.9844531040 ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲ್ಲೂಕು ಮೊ.ಸಂ.9481772143 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.