ಪೊನ್ನಂಪೇಟೆ : ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ
06/03/2023

ಮಡಿಕೇರಿ ಮಾ.6 : ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯ ಗಳಿಕೆ ತರಬೇತಿ ಯೋಜನೆಯಡಿ ಚರ್ಮ ಕೈಗಾರಿಕೆಗೆ ಸಂಬಂಧಿಸಿದಂತೆ ಪೊನ್ನಂಪೇಟೆಯ ಶಿವ ಕಾಲೋನಿಯ 30 ಪಲಾನುಭವಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಪ್ರಮಾಣಪತ್ರ, ರೂ.6000 ವಿದ್ಯಾರ್ಥಿವೇತನ ಮತ್ತು ಹೊಲಿಗೆ ಯಂತ್ರವನ್ನು ವಿತರಿಸಿ, ಶುಭ ಕೋರಿದರು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಹಾಜರಿದ್ದರು.
