ಇಗ್ಗುತ್ತಪ್ಪ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಬೆಂಕಿ
06/03/2023

ನಾಪೋಕ್ಲು ಮಾ.6 : ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತ್ತಪ್ಪ ಬೆಟ್ಟದಲ್ಲಿ ಕಾಣಿಸಿಕೊಂಡು ವ್ಯಾಪಕವಾಗಿ ಹಬ್ಬಿದ್ದ ಕಡ್ಗಿಚ್ಚನ್ನು ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ತಹಬದಿಗೆ ತಂದರು.
ಮಲ್ಮ ಬೆಟ್ಟ ಶ್ರೇಣಿಯಲ್ಲಿ ಉರಿಯುತ್ತಿದ್ದ ಬೆಂಕಿ ರಾತ್ರಿ ಹೊತ್ತಿಗೆ ಸುತ್ತ ಮುತ್ತಲ ಪ್ರದೇಶಗಳಿಗೆ ಹರಡಿದ್ದು, ನೂರಾರು ಏಕ್ರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಭಾಗಮಂಡಲ ವಲಯ ಅರಣ್ಯಾಧಿಕಾರಿ ಇಲಾಖೆ ಸಿಬ್ಬಂದಿಯೊಂದಿಗೆ ಬೆಂಕಿ ನಂದಿಸಲು ಶ್ರಮಿದ್ದು, ಭಾನುವಾರ ಬೆಂಕಿ ನಿಯಂತ್ರಣಕ್ಕೆ ಬಂತು.
ಭಾಗಮಂಡಲ ವಲಯ ಅರಣ್ಯಾಧಿಕಾರಿ ಟಿ.ಯ0.ರವೀಂದ್ರ ಮತ್ತು ಸಿಬ್ಬಂದಿಗಳು ಶ್ರಮಿಸಿದರು.
ವಾಟೆಕಾಡು ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿನ ನಿವಾಸಿ ಮುಕ್ಕಾಟಿರ ವಿನು ಬೆಳ್ಯಪ್ಪ ಅವರ ಅಡಿಕೆ ತೋಟ ಹಾಗೂ ಕಾಫಿ ತೋಟ ಬೆಂಕಿಗೆ ಆಹುತಿಯಾಗಿ ಸಾಕಷ್ಟು ನಷ್ಟ ಸಂಭವಿಸಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲಾಯಿತು.
ವರದಿ : ದುಗ್ಗಳ ಸದಾನಂದ
