ವಿಶ್ವ ಮಹಿಳಾ ದಿನಾಚರಣೆ : ಮಾ.8 ರಂದು ಮಡಿಕೇರಿಯಲ್ಲಿ ಸೈಕ್ಲೋಥಾನ್ ಸೈಕಲ್ ಜಾಥ

ಮಡಿಕೇರಿ ಮಾ.6 : ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8 ರಂದು “ಆರೋಗ್ಯವಂತ ಮಹಿಳೆಯರಿಂದ ಆರೋಗ್ಯಕರ ಭಾರತ” ಎನ್ನುವ ಘೋಷವಾಕ್ಯದೊಂದಿಗೆ ಮಡಿಕೇರಿಯಲ್ಲಿ ಸೈಕ್ಲೋಥಾನ್ ಸೈಕಲ್ ಜಾಥ ನಡೆಯಲಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಗ್ರೀನ್ ಸಿಟಿ ಫೋರಂ ನ ಸ್ಥಾಪಕಾಧ್ಯಕ್ಷ ಚೆಯ್ಯಂಡ ಸತ್ಯ, ಜಿಲ್ಲಾಡಳಿತ, ಜಿ.ಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಎನ್‍ಡಿಸಿ ವಿಭಾಗ ಹಾಗೂ ಗ್ರೀನ್ ಸಿಟಿ ಫೋರಂ ಸಹಯೋಗದಲ್ಲಿ ಅಂದು ಬೆಳಿಗ್ಗೆ 7.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಸೈಕಲ್ ಜಾಥಾಕ್ಕೆ ಗಣ್ಯರಿಂದ ಚಾಲನೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.
ನಂತರ ಜಾಥಾ ಜನರಲ್ ತಿಮ್ಮಯ್ಯ ವೃತ್ತ, ಸ್ವಾ.ಲೀ ಅಜ್ಜಮಾಡ ದೇವಯ್ಯ ವೃತ್ತ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ರೇಸ್‍ಕೋರ್ಸ್ ರಸ್ತೆ ಮೂಲಕ ಗ್ರೇಟರ್ ರಾಜಸೀಟು ಗೆ ತಲುಪಲಿದೆ.
ಜಾಥದಲ್ಲಿ ಮತದಾನದ ಮಹತ್ವ ಮತ್ತು ವಾಯು ಮಾಲಿನ್ಯ ತಡೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ಸಾರ್ವಜನಿಕರು ಜಾಗೃತಿ ಜಾಥದಲ್ಲಿ ಭಾಗವಹಿಸಿ ಸಹಕರಿಸುವಂತೆ ಸತ್ಯ ಮನವಿ ಮಾಡಿದರು.
ಹೆಚ್ಚಿನ ಮಾಹಿತಿಗೆ 9448721252, 9449843263, 6363297653 ಸಂಪರ್ಕಿಸಬಹುದಾಗಿದೆ.
