ಇ-ಶ್ರಮ್ ಯೋಜನೆ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ : ಅಸಂಘಟಿತ ಕಾರ್ಮಿಕರು ಸರ್ಕಾರ ಸೌಲಭ್ಯ ಪಡೆದುಕೊಳ್ಳಬೇಕು : ಕೆ.ಬಿ.ಪ್ರಸಾದ್

ಮಡಿಕೇರಿ ಮಾ.7 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಇ-ಶ್ರಮ್ ಯೋಜನೆಯ ಆಟೋ ಪ್ರಚಾರ (ಸಂಚಾರಿ ರಥ) ಕಾರ್ಯಕ್ರಮಕ್ಕೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ನಂತರ ಮಾತನಾಡಿ ಎಲ್ಲಾ ಅಸಂಘಟಿತ ಕಾರ್ಮಿಕರು ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಾಯಿಸಿಕೊಂಡು ಸರ್ಕಾರದಿಂದ ದೊರೆಯುವ ಸೌಲಭ್ಯ ಪಡೆದುಕೊಳ್ಳಬೇಕು. ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮುಂದಿನ ದಿನಗಳಲ್ಲಿ ಅಸಂಘಟಿತ ಕಾರ್ಮಿಕರಿಗೆ ಇರುವ ಸೌಲಭ್ಯಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಕಟ್ಟಡ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೇರೆ ಬೇರೆ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗಳು, ದಿನಗೂಲಿ ನೌಕರರ ಸಂಘದ ಅಧ್ಯಕ್ಷರಾದ ಜಗದೀಶ ಹಾಗೂ ಕಾರ್ಮಿಕ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
