Advertisement
9:57 AM Sunday 3-December 2023

ಸುಂಟಿಕೊಪ್ಪ : ಮಾ.10 ರಂದು ಗ್ರಾ.ಪಂ ನೂತನ ಕಟ್ಟಡ ಉದ್ಘಾಟನೆ

07/03/2023

ಸುಂಟಿಕೊಪ್ಪ,ಮಾ.7: ಸುಂಟಿಕೊಪ್ಪ ಗ್ರಾ.ಪಂ ನೂತನ ಕಚೇರಿ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆಯು ಮಾ.10 ರಂದು ನೆರವೇರಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪಂಚಾಯಿತಿ ಕಟ್ಟಡ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್, ಕೊಡಗು ಮೈಸೂರು ಕ್ಷೇತ್ರದ ಸಂಸದರಾದ ಪ್ರತಾಪ್‍ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕುಶಾಲಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ, ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಸೋಮವಾರಪೇಟೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಬಿ.ವಿ.ಜಯಣ್ಣ, ಸುಂಟಿಕೊಪ್ಪ ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ವಿಶೇಷ ಆಹ್ವಾನಿತರಾದ ಜಿ.ಪಂ.ಮಾಜಿ ಸದಸ್ಯೆ ಕೆ.ಪಿ.ಚಂದ್ರಕಲಾ, ತಾಪಂ. ಮಾಜಿ ಸದಸ್ಯೆ ಓಡಿಯಪ್ಪನ ವಿವiಲಾವತಿ ಆಗಮಿಸಲಿರುವರು, ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ವಹಿಸಲಿರುವರು.