Advertisement
10:43 AM Sunday 3-December 2023

ಅಡುಗೆ ಅನಿಲದ ಬೆಲೆ ಏರಿಕೆ : ಮಾ.10 ರಂದು ಕೊಡಗು ಜೆಡಿಎಸ್ ನಿಂದ ಪ್ರತಿಭಟನೆ

07/03/2023

ಮಡಿಕೇರಿ ಮಾ.7 : ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ವತಿಯಿಂದ ಮಾ.10 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಜೆ ಮೋಹನ್ ಮೌರ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ನೇತೃತ್ವದಲ್ಲಿ ನಗರದ ನಗರದ ಎ.ವಿ ಶಾಲೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದ್ದು, ಪಕ್ಷದ ರಾಜ್ಯ ನಾಯಕರು, ಜಿಲ್ಲೆಯ ವಿವಿಧ ಘಟಕದ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ಹೋಬಳಿ ಅಧ್ಯಕ್ಷರು ಮತ್ತು ಬೂತ್ ಮಟ್ಟದ ನಾಯಕರು, ಪದಾಧಿಕಾರಿಗಳು ಹಾಗೂ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.