Advertisement
3:51 AM Friday 8-December 2023

ನಾಪೋಕ್ಲು : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

08/03/2023

ನಾಪೋಕ್ಲು ಮಾ.8 : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಹಾಗೂ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದ ಅಪ್ಪಣ್ಣ, ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆಗಳು ಹಾಗೂ ವಿವಿಧ ಸಂಘಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.
ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿ ಸರ್ ಸಿ.ವಿ ರಾಮನ್ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದರು.
ಶಿಕ್ಷಕಿ ಚಂದ್ರಕಲಾ ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ ಹಾಗೂ ರಾಮನ್ ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಿಕ್ಷಕಿ ಕವಿತಾ ಹಾಗೂ ಶಿಕ್ಷಕ ಕಾಳಯ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕವನ ಮತ್ತು ದೀಪಿಕಾ ಪ್ರಾರ್ಥಿಸಿದರು. ಫ್ರೀಶಾ ಮಾಚಮ್ಮ ಹಾಗೂ ಆಫ್ರಿನ ಕಾರ್ಯಕ್ರಮ ನಿರೂಪಿಸಿದರು. ಪ್ರಾಚೀ ಮುತ್ತಮ್ಮ ಸ್ವಾಗತಿಸಿದರು. ಶಮ್ಲ ಫಿರ್ದೌಸ್ ವಂದಿಸಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವರದಿ : ದುಗ್ಗಳ ಸದಾನಂದ.