Advertisement
3:36 AM Saturday 2-December 2023

ಮಹಿಳಾ ದಿನಾಚರಣೆ : ಸೋಮವಾರಪೇಟೆಯಲ್ಲಿ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿ

08/03/2023

ಸೋಮವಾರಪೇಟೆ ಮಾ.8 : ಕ್ರೀಡಾ ಕ್ಷೇತ್ರದಲ್ಲೂ ಮಹಿಳೆಯರು ಗಮನಾರ್ಹ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವೆಂದು  ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹೇಳಿದರು.
 ಮಹಿಳಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲಾ ಪಂಚಾಯಿತಿ ಹಾಗೂ ಸೋಮವಾರಪೇಟೆ ತಾಲೂಕು ಪಂಚಾಯಿತಿ ಆಶ್ರಯದಲ್ಲಿ  ಪಟ್ಟಣದ ಜಿ.ಎಂ. ಪಿ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಮಹಿಳೆಯರ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತಾಡಿದರು.
ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಗಳಿವೆ ಎಂದ ಅವರು ಮಹಿಳೆಯರು ಸಬಲರಾದರೆ ದೇಶ ಅಭಿವೃದ್ಧಿಯಾಗುತದೆ ಎಂದರು. ಇಂದು ಮಹಿಳೆಯರು ಸಾಮಾಜಿಕ,ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್.ಎನ್.ನರಗುಂದ, ಕ್ಷೇತ್ರಶಿಕ್ಷಾಧಿಕಾರಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.