ಬೆಂಗಳೂರು ಮಾ.8 : ಸಿಗರೇಟ್ ತುಂಡುಗಳನ್ನು ಎಲ್ಲೆಂದರಲ್ಲಿ ಹಾಕುವುದಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆಕ್ಷೇಪ ವ್ಯಕ್ತಪಡಿಸಿದೆ.
ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಮತ್ತು ತಂಬಾಕು ತಯಾರಕರು ಸೇರಿದಂತೆ ಮಧ್ಯಸ್ಥಗಾರರ ಸಭೆಯನ್ನು ಮಾರ್ಚ್ 15 ರಂದು ಕರೆಯಲಾಗಿದೆ.
ಸಿಗರೇಟ್ ತುಂಡು ಕಸ ಹಾಕುವುದಕ್ಕೆ ದಂಡ ವಿಧಿಸಲು ನಿಯಮಗಳನ್ನು ಜಾರಿಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಅವಕಾಶ ನೀಡಲಾಗಿದೆ. ಸಿಗರೇಟ್ ತಯಾರಕರು ಸಿಗರೇಟ್ ತುಂಡುಗಳ ಕಸದಿಂದ ಪರಿಸರ ಮತ್ತು ಆರೋಗ್ಯದ ಅಪಾಯ ಕುರಿತು ಮಾಹಿತಿ ನಮೂದಿಸಬೇಕು. ಸಾರ್ವಜನಿಕ ಪ್ರದೇಶ, ಹೊರಾಂಗಣ, ಒಳಾಂಗಣ ಮತ್ತು ಕೆಲಸದ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಸಂಬoಧಪಟ್ಟ ಅಧಿಕಾರಿಗಳು ದಂಡ ಹಾಕಲಿದ್ದು, ದಂಡ ವಿಧಿಸುವ ನಿಬಂಧನೆಯನ್ನು ಸ್ಥಳೀಯ ಅಧಿಕಾರಿಗಳು ತಮ್ಮ ಬೈಲಾಗಳಲ್ಲಿ ಸೇರಿಸಿಕೊಳ್ಳಬಹುದು ಎಂದು ಮಂಡಳಿ ಹೇಳಿದೆ.

















