Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಬಿಜೆಪಿ ರಾಷ್ಟ್ರೀಯ ಚಿಂತನೆಯಡಿ ಚುನಾವಣೆಯನ್ನು ಎದುರಿಸಲಿದೆ : ಕೆ.ಎಸ್.ಈಶ್ವರಪ್ಪ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ : ಬಿಜೆಪಿ ರಾಷ್ಟ್ರೀಯ ಚಿಂತನೆಯಡಿ ಚುನಾವಣೆಯನ್ನು ಎದುರಿಸಲಿದೆ : ಕೆ.ಎಸ್.ಈಶ್ವರಪ್ಪ

ಮಾರ್ಚ್ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.11 : ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಅಭಿವೃದ್ಧಿ ಪರ ಚಿಂತನೆ, ಕಾರ್ಯಕರ್ತರ ಸಂಘಟನಾ ಶಕ್ತಿ, ಭಾರತೀಯ ಸಂಸ್ಕೃತಿಯ ಸಂರಕ್ಷಣೆ ಮತ್ತು ರಾಷ್ಟ್ರೀಯ ಚಿಂತನೆಗಳು, ಈ ನಾಲ್ಕು ಪ್ರಮುಖ ಅಂಶಗಳನ್ನು ಮುಂದಿಟ್ಟುಕೊoಡು ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟು ಮತಯಾಚಿಸುವುದಾಗಿ ಹೇಳಿದರು.
ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ, ಈಗಿನ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಅಭ್ಯುದಯಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸಲಾಗಿದೆ. ಸದಾನಂದ ಗೌಡರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಲೆ, ವಸತಿ ನಿಲಯಗಳಿಗಾಗಿಯೇ ರೂ.108 ಕೋಟಿ ಅನುದಾನವನ್ನು ಒದಗಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ರೂ.117 ಕೋಟಿ ನೆರವು ನೀಡಿದ್ದಾರೆ. ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ 27 ಮಂದಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಮತ್ತು 10 ಮಂದಿ ದಲಿತರಿಗೆ ಸಚಿವ ಸ್ಥಾನವನ್ನು ಒದಗಿಸಲಾಗಿದೆ. ಸ್ವಾತಂತ್ರ್ಯಾ ನಂತರದ ಅವಧಿಯಲ್ಲಿ ಇಷ್ಟು ಸಂಖ್ಯೆಯಲ್ಲಿ ಹಿಂದುಳಿದ ಸಮೂಹಕ್ಕೆ ಅವಕಾಶವನ್ನು ಎಂದಿಗೂ ನೀಡಿದ ನಿದರ್ಶನವಿಲ್ಲವೆಂದು ಅಭಿಪ್ರಾಯಪಟ್ಟರು.
ಬಿಜೆಪಿಯನ್ನು ನಿರಂತರವಾಗಿ ಟೀಕಿಸುತ್ತಾ ಬರುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಗ್ಯ ಕ್ಷೇತ್ರವೇ ಇಲ್ಲ. ಚುನಾವಣಾ ಹಂತದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರವರ ಜಾತಿ ಸಮೂಹದಿಂದ ಮುಖ್ಯಮಂತ್ರಿಯ ಬೇಡಿಕೆಯನ್ನು ಮುಂದಿರಿಸಿಕೊಂಡು ಬರುತ್ತಿದ್ದಾರೆ. ಬಿಜೆಪಿಯನ್ನು ಪುರೋಹಿತ ಶಾಹಿ, ಮನುವಾದಿ ಎಂದು ದೂರುವ ಇವರುಗಳೇ ಜಾತಿವಾದಿಗಳೆಂದು ಟೀಕಿಸಿದರು.
ಬಿಜೆಪಿಯ ಗೋ ಸಂರಕ್ಷಣೆ, ಮತಾಂತರ ನಿಷೇಧಗಳ ವಿರುದ್ಧ ಮಾತನಾಡುವ ಕಾಂಗ್ರೆಸ್ ಮುಖಂಡರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ, ಮತಾಂತರ ಪರವಾಗಿ, ಗೋ ಹತ್ಯೆಯ ಪರವಾಗಿ ನಾವಿದ್ದೇವೆಂದು ತೋರಿಸಲಿ ಎಂದು ಸವಾಲೊಡ್ಡಿದರು.
ಸಿದ್ದರಾಮಯ್ಯ ಅವರದ್ದು ಬಿಜೆಪಿ ವಿರುದ್ಧದ ಟೀಕೆಗಳು ‘ನಾಟಕೀಯ ಬುಡುಬುಡಿಕೆ’ ಯಾಗಿದೆ. ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಪರವಾಗಿ ಕಾಂಗ್ರೆಸ್ ಇರುವುದಾಗಿ ಹೇಳುವ ಅವರು, ಮುಖ್ಯಮಂತ್ರಿಯಾಗಿದ್ದ ಹಿಂದುಳಿದ ವರ್ಗದಿಂದ ಬಂದ ತನಗೆ ಮುಖ್ಯಮಂತ್ರಿ ಸ್ಥಾನ ದೊರಕಿದೆಯೆಂದು ಹೇಳಿಕೊಂಡರೆ ಹೊರತು ಆ ಸಮೂಹಕ್ಕೆ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ ಈಶ್ವರಪ್ಪ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದುಳಿದ, ದಲಿತ ಸೇರಿದಂತೆ ಎಲ್ಲಾ ಸಮೂಹದ ಹಿತ ಕಾಯುವ ಕೆಲಸ ನಡೆದಿದೆಯೆಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಅಧಿಕಾರ ದೊರೆತಾಗ ಅದನ್ನು ಹೇಗೆ ಸದ್ವಿನಿಯೋಗ ಪಡಿಸಬೇಕೆನ್ನುವುದನ್ನು ಕಳೆದ 8 ವರ್ಷಗಳ ಅವಧಿಯಲ್ಲಿ ತೋರಿಸಿಕೊಟ್ಟಿದ್ದಾರೆ. ಚುನಾವಣೆ ಎನ್ನುವುದು ಕೇವಲ ಆಶ್ವಾಸನೆ, ಭರವಸೆಗಳ ಮೇಲೆ ನಡೆಯಕೂಡದೆನ್ನುವುದು ಪಕ್ಷದ ನಿಲುವಾಗಿದೆ. ಅಭಿವೃದ್ಧಿಯನ್ನು ಪರಿಗಣಿಸಿ ಜನತೆ ಮತದಾನ ಮಾಡಿದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ಬರುತ್ತದೆಂದು ಹೇಳಿದರು.
ನಾಲ್ಕು ರಥಯಾತ್ರೆಗಳ ಮೂಲಕ ರಾಜ್ಯದ 224 ಕ್ಷೇತ್ರಗಳ ಜನತೆಯನ್ನು ಬಿಜೆಪಿ ಸಂಪರ್ಕಿಸುತ್ತಿದೆ. ಈ ಸಂದರ್ಭ ದೊರಕುತ್ತಿರುವ ಜನಬೆಂಬಲ ಅಭೂತಪೂರ್ವ, ಚುನಾವಣೆಯಲ್ಲಿ ಬಿಜೆಪಿಯನ್ನು ಜನತೆ ಆಶೀರ್ವದಿಸುವ ಪೂರ್ಣ ವಿಶ್ವಾಸವಿದೆಯೆಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಎಂಎಲ್‌ಸಿ ಸುಜಾ ಕುಶಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ವಿರಾಜಪೇಟೆ ಕ್ಷೇತ್ರದ ಉಸ್ತುವಾರಿ ಪ್ರತಾಪ ಸಿಂಹ ನಾಯಕ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟರು, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಎಂಎಲ್‌ಸಿ ಎಸ್.ಜಿ.ಮೇದಪ್ಪ, ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ರಾಜ್ಯ ಸಂಚಾಲಕ ಉದಯ ಕುಮಾರ್ ಶೆಟ್ಟರು, ಪಕ್ಷದ ಪ್ರಮುಖರಾದ ರಾಜೇಂದ್ರ‍್ರ, ಮಹೇಶ್ ಜೈನಿ ಮೊದಲಾದವರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ವಿರಾಜಪೇಟೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತಾ ಅಧಿಕಾರ…

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.