Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಯುವ ಸಂವಾದ ಕಾರ್ಯಕ್ರಮ : ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಯುವ ಸಂವಾದ ಕಾರ್ಯಕ್ರಮ : ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಮಾರ್ಚ್ 14, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.14 :  ಪ್ರಧಾನ ಮಂತ್ರಿಗಳ ಮಾರ್ಗದರ್ಶನ ಮತ್ತು ಸ್ಫೂರ್ತಿ ಯಿಂದ ಭಾರತ 75ನೇ ವರ್ಷದ ಸ್ಮರಣಾರ್ಥವಾಗಿ “ ಆಜಾಧೀ ಕಾ ಅಮೃತ ಮಹೋತ್ಸವ” ವನ್ನು ಆಚರಿಸುತ್ತಿದೆ. ಭಾರತದ ಇತಿಹಾಸದಲ್ಲಿ ಖ್ಯಾತಿ ಪಡೆದ ಗಣ್ಯರ ಸಾಧನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನದೊಂದಿಗೆ,  ನರೇಂದ್ರ ಮೋದೀಜಿ ರವರು ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣದಲ್ಲಿ “ ಪಂಚ ಪ್ರಾಣ್ “ ಎನ್ನುವ ಮಂತ್ರವನ್ನು ಘೋಷಿಸಿದ್ದಾರೆ. ಅಮೃತ ಕಾಲ ಇಂಡಿಯಾ@2047 ಎನ್ನುವ ದೃಷ್ಠಿಕೋನವನ್ನು ಜನತೆಯ ಮುಂದಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆಯು “ ‘ಯುವ ಸಂವಾದ’ ಇಂಡಿಯಾ@2047” ಎನ್ನುವ ಹೊಸ ಕಾರ್ಯಕ್ರಮವನ್ನು ಹೊರ ತಂದಿದ್ದು, ಸಮುದಾಯ ಅಭಿವೃದಿ ಆಧಾರಿತ ಸಂಸ್ಥೆಗಳ ಸಹಯೋಗದಲ್ಲಿ ಭಾರತದ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ 1-4-2023 ರಿಂದ 31-5-2023 ನೇ ದಿನಾಂಕದ ವರೆಗೆ ಈ ಕಾರ್ಯಕ್ರಮವನ್ನು ಆಚರಿಸಲು ಉದ್ದೇಶಿಸಿದೆ.

ಈ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಸಮುದಾಯ ಅಭಿವೃದ್ದಿ ಸಂಸ್ಥೆಗಳ (CBOs) ಸಹಯೋಗದಲ್ಲಿ ಆಚರಿಸಲು ಯೋಜನೆ ರೂಪಿಸಿದ್ದು, ಜಿಲ್ಲಾ ನೆಹರು ಯುವ ಕೇಂದ್ರಗಳ ಕೈಜೋಡಿಸಿ – ದೇಶದ ಭವಿಷ್ಯದ ಬಗ್ಗೆ ಸಕಾರಾತ್ಮಕವಾಗಿ ಚಿಂತಿಸಿ, ಪ್ರಧಾನ ಮಂತ್ರಿಗಳ ಆಶಯದಂತೆ “ ಪಂಚ ಪ್ರಾಣ್ ” ಯೋಜನೆಯನ್ನು ವ್ಯವಸ್ಥಿತ ಗುರಿಯೊಂದಿಗೆ ಸಾಧಿಸಬೇಕಾಗಿದೆ.
ಈ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ತುಂಬಾ ನುರಿತ, ಉತ್ತಮ ಜ್ಞಾನವುಳ್ಳ ಗಣ್ಯರನ್ನು ಸೇರಿಸಿಕೊಂಡು ಈ ಪಂಚ ಪ್ರಾಣ್ ಯೋಜನೆಯನ್ನು ಸುಮಾರು 500 ಕ್ಕೂ ಹೆಚ್ಚು ಯುವಜನರೊಡನೆ ಪ್ರಶ್ನೋತ್ತರದ ಮೂಲಕ ಸಂವಾದ ನಡೆಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ ಮತ್ತು ಪ್ರತಿ ಜಿಲ್ಲೆಯಲ್ಲಿ ಸಮುದಾಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಮೂರು ಕಾರ್ಯಕ್ರಮಗಳನ್ನು ನಡೆಸಲಾಗುವುದು. ಪ್ರತಿಯೊಂದು ಕಾರ್ಯಕ್ರಮಕ್ಕೆ ರೂ. 20,000/- ಸಾವಿರ ಅನುದಾನವನ್ನು ನಿಗದಿಪಡಿಸಲಾಗಿದೆ. ಈ ಅನುದಾನವನ್ನು ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಗೆ ಕೊಡಲಾಗುವುದು.
ಆದುದರಿಂದ ಸಮುದಾಯ ಅಭಿವೃದ್ಧಿ ಸಂಸ್ಥೆಗಳು ಯಾವುದೇ ರಾಜಕೀಯ ಪಕ್ಷವಲ್ಲದ ಪಕ್ಷಪಾತವಿಲ್ಲದ ಮತ್ತು ಜಾತಿ ಬೇಧವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಮತ್ತು ಉತ್ತಮವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಶಕ್ತವಾಗಿರುವ ಕೊಡಗು ಜಿಲ್ಲೆಯ “ ಸಮುದಾಯ ಅಭಿವೃದ್ಧಿ ಸಂಸ್ಥೆಗಳು” ಈ ಯುವ ಸಂವಾದ ಕಾರ್ಯಕ್ರವನ್ನು ನಡೆಸಲು ಮುಂದೆ ಬರಬಹುದು. ಈ ಸಂಸ್ಥೆಗಳ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಅಥವಾ ಸುಸ್ತಿದಾರರಲ್ಲದ 3 ಸಂಸ್ಥೆಗಳನ್ನು ಕೊಡಗು ಜಿಲ್ಲೆಯಿಂದ ಆಯ್ಕೆ ಮಾಡಲಾಗುವುದು.
ಆಸಕ್ತಿ ಇರುವ ಕೊಡಗು ಜಿಲ್ಲೆಯ ಸಮುದಾಯ ಅಭಿವೃದ್ಧಿ ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳು ಜಿಲ್ಲಾ ನೆಹರು ಯುವ ಕೇಂದ್ರ ಕೊಡಗು ಇಲ್ಲಿ ಕೊಡಲಾಗುವುದು. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಕೇಳಿರುವ ಎಲ್ಲಾ ವಿವರಗಳನ್ನು ದಾಖಲೆಗಳ ಸಮೇತ ದಿನಾಂಕ 29-3-2023 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ವಿಳಾಸ: ಜಿಲ್ಲಾ ಯುವ ಅಧಿಕಾರಿ, ನೆಹರು ಯುವ ಕೇಂದ್ರ, ಕೊಡಗು, ನೆಹರು ಯುವ ಕೇಂದ್ರ, ಯಶು ನಿಲಯ, ಬ್ಲಾಕ್ ನಂ: 08, ಕಾವೇರಿ ಲೇಔಟ್,ಮಡಿಕೇರಿ -571201. ಕಛೇರಿ ದೂರವಾಣಿ ಸಂಖ್ಯೆ: 08272-225470 ಮೊ. ಸಂಖ್ಯೆ.9961332968 ಕರೆಮಾಡಬಹುದು.

(ಉಲ್ಲಾಸ್ ಕೆ.ಟಿ.ಕೆ)
ಜಿಲ್ಲಾ ಯುವ ಅಧಿಕಾರಿ
ನೆಹರು ಯುವ ಕೇಂದ್ರ,ಮಡಿಕೇರಿ

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ…

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.