Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಫಲಾನುಭವಿಗಳ ಸಮ್ಮೇಳನ ಯಶಸ್ಸಿಗೆ ಶ್ರಮಿಸಿ: ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫಲಾನುಭವಿಗಳ ಸಮ್ಮೇಳನ ಯಶಸ್ಸಿಗೆ ಶ್ರಮಿಸಿ: ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್

ಮಾರ್ಚ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.15 : ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಸಮ್ಮೇಳನವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಾ.18 ರಂದು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದ್ದು, ಸಮ್ಮೇಳನದ ಯಶಸ್ಸಿಗೆ ಶ್ರಮಿಸುವಂತೆ ಎಲ್ಲಾ ಹಂತದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಬಿ.ಸಿ.ನಾಗೇಶ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಸಿದ್ಧತೆ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು.
ಫಲಾನುಭವಿಗಳ ಸಮ್ಮೇಳನವು ಸರ್ಕಾರದ ಕಾರ್ಯಕ್ರಮವಾಗಿದ್ದು, ಮುಖ್ಯಮಂತ್ರಿ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಫಲಾನುಭವಿಗಳ ಸಮ್ಮೇಳನ ಜೊತೆಗೆ ನಗರದಲ್ಲಿ ನಿರ್ಮಾಣವಾಗಿರುವ ಗಾಂಧಿ ಭವನ, ಗ್ರೇಟರ್ ರಾಜಸೀಟು ಉದ್ಯಾನವನ ಸೇರಿದಂತೆ ಹಲವು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಬಿ.ಸಿ.ನಾಗೇಶ್ ಅವರು ಹೇಳಿದರು.
ಕಾರ್ಯಕ್ರಮ ಸಂಬಂಧ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಹಂತದ ಅಧಿಕಾರಿಗಳು ತೊಡಗಿಸಿಕೊಳ್ಳುವಂತೆ ಸಚಿವರು ನಿರ್ದೇಶನ ನೀಡಿದರು.
ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಹಕಾರ, ಪರಿಶಿಷ್ಟ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಕಾರ್ಮಿಕ, ಅಲ್ಪಸಂಖ್ಯಾತರ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡೆ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಕಲ್ಯಾಣ, ಕಂದಾಯ, ಸಾರ್ವಜನಿಕ ಶಿಕ್ಷಣ, ಪೌರಾಡಳಿತ, ಸೆಸ್ಕ್, ನಗರ ಕುಡಿಯುವ ನೀರು ಪೂರೈಕೆ ಹೀಗೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಸೌಲಭ್ಯ ಪಡೆದಿರುವ ಹಾಗೂ ಪಡೆಯುವ ಫಲಾನುಭವಿಗಳನ್ನು ಆಹ್ವಾನಿಸುವಂತೆ ಸಚಿವರು ಹೇಳಿದರು.
ಫಲಾನುಭವಿಗಳ ಆಹ್ವಾನ, ವೇದಿಕೆ ನಿರ್ಮಾಣ, ಕುಡಿಯುವ ನೀರು, ಮಧ್ಯಾಹ್ನ ಉಪಹಾರ ಮತ್ತಿತರ ಬಗ್ಗೆ ಸಚಿವರು ಮಾಹಿತಿ ಪಡೆದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಇನ್ನೂ ಹಲವು ಕಾಮಗಾರಿಗಳು ಉದ್ಘಾಟನೆಗೆ ಸಿದ್ಧವಾಗಿದ್ದು, ಅವುಗಳನ್ನು ಸೇರಿಸುವಂತೆ ಸಲಹೆ ಮಾಡಿದರು.
ಫಲಾನುಭವಿಗಳ ಸಮ್ಮೇಳನ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಕಾರ್ಯಕ್ರಮವು ಸರ್ಕಾರದ್ದಾಗಿದ್ದು, ಎಲ್ಲಾ ಹಂತದ ಅಧಿಕಾರಿಗಳು ಮುತುವರ್ಜಿ ವಹಿಸಿ, ಸಮ್ಮೇಳನ ಯಶಸ್ಸಿಗೆ ಮುಂದಾಗುವಂತೆ ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪ್ರತಿಯೊಬ್ಬರೂ ಸರ್ಕಾರದ ಸೌಲಭ್ಯಗಳ ಒಂದಲ್ಲ ಒಂದು ಫಲಾನುಭವಿಗಳಾಗಿದ್ದಾರೆ ಎಂದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಜಿಲ್ಲೆಯಲ್ಲಿ 50 ಸೆಂಟ್ ಗಿಂತ ಕಡಿಮೆ ಭೂಮಿ ಹೊಂದಿ ಹಕ್ಕುಪತ್ರಕ್ಕಾಗಿ ಸಲ್ಲಿಸಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ತಾಕೀತು ಮಾಡಿದರು.
ನಂಜರಾಯಪಟ್ಟಣ, ಶಿರಂಗಾಲ, ಹೊಸಪಟ್ಟಣ, ರಂಗಸಮುದ್ರ ಇತರೆ ಅರಣ್ಯ ವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಅಪ್ಪಚ್ಚು ರಂಜನ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು 50 ಸೆಂಟ್‍ಗಿಂತ ಹೆಚ್ಚು ಭೂಮಿ ಹೊಂದಿರುವ ಅರ್ಜಿಗಳ ಸಂಬಂಧ ಮರು ಪರಿಶೀಲನೆ ಮಾಡಲು ಸೂಚಿಸಲಾಗಿದೆ. 50 ಸೆಂಟ್‍ಗಿಂತ ಕಡಿಮೆ ಭೂಮಿ ಹೊಂದಿರುವ ಅರ್ಜಿಗಳ ಸಂಬಂಧ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ಅನುಮೋದನೆ ಆಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ 615 ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ಕುರಿತು ಧ್ವನಿಗೂಡಿಸಿದ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಇತರೆ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧ ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು.
ಜೀವ ವೈವಿದ್ಯ ಮಂಡಳಿ ರಾಜ್ಯ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳು ಹಾಗೂ ಫಲಾನುಭವಿಗಳ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ…

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.