Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » “ಅಪ್ಪಚೆಟ್ಟೋಳಂಡ ಹಾಕಿ ಉತ್ಸವ”ಕ್ಕೆ ಮಾ.18 ರಂದು ಸಿಎಂ ಚಾಲನೆ : ದಾಖಲೆಯ 336 ತಂಡಗಳ ನಡುವೆ ಹಣಾಹಣಿ
ಇತ್ತೀಚಿನ ಸುದ್ದಿಗಳು

“ಅಪ್ಪಚೆಟ್ಟೋಳಂಡ ಹಾಕಿ ಉತ್ಸವ”ಕ್ಕೆ ಮಾ.18 ರಂದು ಸಿಎಂ ಚಾಲನೆ : ದಾಖಲೆಯ 336 ತಂಡಗಳ ನಡುವೆ ಹಣಾಹಣಿ

March 16, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.16 : ಕೊಡವ ಕುಟುಂಬಗಳ ನಡುವಿನ 23ನೇ ವರ್ಷದ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ-2023’ ಕ್ಕೆ ಮಾ.18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಯಶಸ್ವಿ ಪಂದ್ಯಾವಳಿಗಾಗಿ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹಾಕಿ ಉತ್ಸವ ಸಮಿತಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಕಿ ಉತ್ಸವದ ಉದ್ಘಾಟನಾ ಸಮಾರಂಭ ಮಧ್ಯಾಹ್ನ 2.20 ಗಂಟೆಗೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣ ಗೌಡ, ಸಂಸದ ಪ್ರತಾಪಸಿಂಹ, ಜಿಲ್ಲೆಯ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್ ಸೇರಿದಂತೆ ಹಲ ಗಣ್ಯರು ಪಾಲ್ಗೊಳ್ಳ್ಳಲಿದ್ದಾರೆ. ಅಪ್ಪಚೆಟ್ಟೋಳಂಡ ಕುಟುಂಬದ ಪಟ್ಟೆದಾರರಾದ ಅಪ್ಪಚೆಟ್ಟೋಳಂಡ ಈರಪ್ಪ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು.
ಉದ್ಘಾಟನಾ ದಿನದಂದು ಬೆಳಗ್ಗೆ ನಾಪೋಕ್ಲುವಿನಲ್ಲಿ ಆಕರ್ಷಕ ಬೃಹತ್ ಮೆರವಣಿಗೆ ನಡೆಯಲಿದೆ. ಹಾಕಿ ಉತ್ಸವವನ್ನು ಮೊಟ್ಟ ಮೊದಲು ಆಯೋಜಿಸಿದ ಪಾಂಡಂಡ ಕುಟುಂಬ ಸೇರಿದಂತೆ ಇಲ್ಲಿಯವರೆಗೆ ಪಂದ್ಯಾವಳಿ ಆಯೋಜಿಸಿದ ಕೊಡವ ಕುಟುಂಬಗಳ 23 ಮಂದಿ ಪ್ರತಿನಿಧಿಗಳು ಆಕಾಶಕ್ಕೆ ಗುಂಡು ಹಾರಿಸುವ ಮೂಲಕ ಪಂದ್ಯಾವಳಿಗೆ ಸಾಂಪ್ರದಾಯಿಕ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ಮತ್ತು  ಸಂಸ್ಕೃತಿ  ಇಲಾಖೆಯ ಸಹಕಾರದೊಂದಿಗೆ ಕರ್ನಾಟಕದ ವಿವಿಧ ಕಲಾ ತಂಡಗಳು ಪಾಲ್ಗೊಂಡು ಸಾಂಸ್ಕೃತಿಕ  ವೈವಿಧ್ಯತೆಯನ್ನು ಅನಾವರಣಗೊಳಿಸಲಿದ್ದಾರೆ. ಇದೇ ಸಂದರ್ಭ ಬೆಳಗ್ಗೆ 11.15 ಗಂಟೆಗೆ ಕೊಡವ ಹಾಕಿ ಅಕಾಡೆಮಿ ಮತ್ತು ಅಪ್ಪಚೆಟ್ಟೋಳಂಡ ಹಾಕಿ ಉತ್ಸವದ ಧ್ವಜಾರೋಹಣ ನೆರವೇರಲಿದೆ. ಬೆಳಗ್ಗೆ 11.30 ಗಂಟೆಗೆ 37ನೇ ಕೂರ್ಗ್ ಫೀಲ್ಡ್ ರೆಜಿಮೆಂಟ್ ತಂಡ ಮತ್ತು ಕೊಡವ ಅಕಾಡೆಮಿ ಇಲೆವೆನ್ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಮುಖ್ಯ ಮಂತ್ರಿಗಳಿಂದ ಪಂದ್ಯಾವಳಿ ಉದ್ಘಾಟನೆಯಾದ ಬಳಿಕ ಇಂಡಿಯಾ ಜೂನಿಯರ್ ಇಲೆವೆನ್ ಮತ್ತು ಕರ್ನಾಟಕ ಇಲೆವೆನ್ ತಂಡಗಳ ನಡುವೆ ಮತ್ತೊಂದು ಪ್ರದರ್ಶನ ಪಂದ್ಯವನ್ನು ಆಯೋಜಿಸಲಾಗಿದೆ.
::: ದಾಖಲೆಯ 336 ತಂಡಗಳು :::
ಈ ಬಾರಿಯ ಪಂದ್ಯಾವಳಿಯಲ್ಲಿ ದಾಖಲೆಯ 336 ತಂಡಗಳು ಪಾಲ್ಗೊಳ್ಳಲಿವೆ. ಇದೊಂದು ದಾಖಲೆಯೇ ಆಗಿದೆಯೆಂದು ತಿಳಿಸಿದ ಅವರು, ಒಟ್ಟು ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿನಿತ್ಯ ಮೂರು ಮೈದಾನಗಳಲ್ಲಿ 21 ಪಂದ್ಯಗಳು ನಡೆಯಲಿವೆ. ಪ್ರೀ ಕ್ವಾರ್ಟರ್ ಪಂದ್ಯಗಳ ಬಳಿಕ ಪ್ರಮುಖ ಮೈದಾನ ಒಂದರಲ್ಲೆ ಪಂದ್ಯಗಳನ್ನು ಆಯೋಜಿಸಲಾಗಿದೆ. ಪಂದ್ಯಾವಳಿ ವೀಕ್ಷಣೆಗೆ 25 ಸಾವಿರ ಆಸನ ವ್ಯವಸ್ಥೆಯುಳ್ಳ ಗ್ಯಾಲರಿ ನಿರ್ಮಿಸಲಾಗಿದೆ. ಇದರಲ್ಲಿ 1300 ವಿಐಪಿ ಆಸನಗಳನ್ನು ಸಜ್ಜುಗೊಳಿಸಲಾಗಿದ್ದು, 23 ದಿನಗಳ ಕಾಲ ಪಂದ್ಯಾವಳಿ ಹಾಕಿ ಪ್ರೇಮಿಗಳನ್ನು ತನ್ನೆಡೆಗೆ ಸೆಳೆಯಲಿದೆಯೆಂದು ಮನು ಮುತ್ತಪ್ಪ ಮಾಹಿತಿ ನೀಡಿದರು.
ಹಾಕಿ ಪಂದ್ಯಗಳ ಮಾಹಿತಿ, ಉತ್ಸವದ ವಿವರಗಳನ್ನು ಜನರಿಗೆ ತಲುಪಿಸಲು www.appachettolanda.com  ವೆಬ್ ಆರಂಭಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಪ್ಪಚೆಟ್ಟೋಳಂಡ ಹಾಕಿ ಉತ್ಸವ ಸಮಿತಿಯ ಸದಸ್ಯರಾದ ಎ.ಕೆ. ತಿಮ್ಮಯ್ಯ, ಪ್ರತಿಮಾ ಪೊನ್ನಪ್ಪ, ರೀನಾ ಪೂವಯ್ಯ, ಡೇನ್ ಪೂವಯ್ಯ ಹಾಗೂ ಮೋನಿಷ ಮುತ್ತಪ್ಪ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ ‘ವರ್ಷದ ಗವರ್ನರ್’ ಪ್ರಶಸ್ತಿ
Next Article ಗೋಣಿಕೊಪ್ಪಲಿನಲ್ಲಿ ಡಾ.ಅಂಬೇಡ್ಕರ್ ಗೆ ಅವಮಾನ : ದಸಂಸ ಆರೋಪ

Recommended: Website design development company services in Mangalore Forex Trading Teacher in India

Related Posts

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

ಮಡಿಕೇರಿ NEWS DESK ಫೆ.12 : ಎನ್.ಸತೀಶ್‌ ಕುಮಾರ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಕೇಂದ್ರಸ್ಥಾನ-1, ಬೆಂಗಳೂರು ಇವರು ಇಂದು…

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.