Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ವಿವಿಧ ಮತಗಟ್ಟೆ ಕೇಂದ್ರಗಳಿಗೆ ರಾಜ್ಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಭೇಟಿ : ಪರಿಶೀಲನೆ
ಇತ್ತೀಚಿನ ಸುದ್ದಿಗಳು

ವಿವಿಧ ಮತಗಟ್ಟೆ ಕೇಂದ್ರಗಳಿಗೆ ರಾಜ್ಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಭೇಟಿ : ಪರಿಶೀಲನೆ

March 20, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.20 : ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ರಾಜ್ಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಸೋಮವಾರ ನಗರದ ಹಿಲ್ ರಸ್ತೆಯಲ್ಲಿ ಇರುವ ನಗರಸಭಾ ಹಿರಿಯ ಪ್ರಾಥಮಿಕ ಶಾಲೆ, ಮಹದೇವಪೇಟೆಯ ನಗರಸಭಾ ಹಿರಿಯ ಪ್ರಾಥಮಿಕ ಶಾಲೆ, ಸಂತ ಜೋಸೆಫರ ಕಾಲೇಜು ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ವೀಕ್ಷಿಸಿದರು.

ರ್ಯಾಂಪ್ ವ್ಯವಸ್ಥೆ ಮಾಡಬೇಕು. ಜೊತೆಗೆ ರೈಲಿಂಗ್ಸ್ ಇರಬೇಕು. ಗಾಲಿ ಕುರ್ಚಿ ವ್ಯವಸ್ಥೆ ಮಾಡಬೇಕು. ಒಂದು ಮತಗಟ್ಟೆಯಲ್ಲಿ 80 ವರ್ಷ ಮೇಲ್ಪಟ್ಟವರು ಎಷ್ಟು ಮಂದಿ ಇದ್ದಾರೆ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಪಿ.ಎಸ್.ವಸ್ತ್ರದ್ ಅವರು ಬಿಎಲ್‍ಒಗಳಿಗೆ ಸೂಚಿಸಿದರು.
ಕಳೆದ ಬಾರಿ ಶೇ.60 ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ತೆರಳಿ ಮಾಹಿತಿ ಪಡೆದ ಸ್ವೀಪ್ ನೋಡಲ್ ಅಧಿಕಾರಿ ಅವರು ವೋಟರ್ ಹೆಲ್ಫ್‍ಲೈನ್ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕೆಲವು ಸಂದರ್ಭದಲ್ಲಿ ಮತದಾರರ ಗುರುತಿನ ಚೀಟಿ ಇದ್ದರೂ ಸಹ, ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಮಾಹಿತಿ ನೀಡುವಂತಾಗಬೇಕು ಎಂದರು.
ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರು ವ್ಯವಸ್ಥೆ ಮಾಡಬೇಕು. ಯಾರೂ ಸಹ ಬಿಸಿಲಿಗೆ ಸಾಲಿನಲ್ಲಿ ಸಾಲಾಗಿ ನಿಲ್ಲದೆ, ನೆರಳಿನಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು ಎಂದು ಪಿ.ಎಸ್.ವಸ್ತ್ರದ್ ಅವರು ಹೇಳಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಎಲ್ಲರೂ ಮತದಾನ ಮಾಡುವಂತಾಗಲು ಮನವರಿಕೆ ಮಾಡಬೇಕು. ಎಷ್ಟೇ ಕೆಲಸದ ಒತ್ತಡ ಇದ್ದರೂ ಸಹ ಪ್ರಜಾಪ್ರಭುತ್ವ ಬಲಪಡಿಸಲು ಅರ್ಹರೆಲ್ಲರೂ ಮತದಾನ ಮಾಡಬೇಕು. ಆ ನಿಟ್ಟಿನಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಅವರು ಸಲಹೆ ಮಾಡಿದರು.
ನಗರದ ಹಿಲ್ ರಸ್ತೆಯಲ್ಲಿರುವ ನಗರಸಭೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನದ ಜಾಗೃತಿ ಕುರಿತು ಚಿತ್ರಿಸಲಾಗಿರುವ ಕಲಾಚಿತ್ರವನ್ನು ಗಮನಿಸಿ ಪಿ.ಎಸ್.ವಸ್ತ್ರದ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
‘ನನ್ನ ದೇಶ ನನ್ನ ಹಕ್ಕು, ಬಳಸಿ ಬಳಸಿ, ವೋಟರ್ ಹೆಲ್ಫ್‍ಲೈನ್ ಆ್ಯಪ್ ಬಳಸಿ, ಬನ್ನಿ ಆಚರಿಸೋಣ ಪ್ರಜಾಪ್ರಭುತ್ವ ಹಬ್ಬ, ನಿಮ್ಮ ಮತ ದೇಶಕ್ಕೆ ಹಿತ, ಹೀಗೆ ಹಲವು ಸಂದೇಶಗಳನ್ನು ಒಳಗೊಂಡ ಚಿತ್ರಕಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಮತದಾನ ಹೆಚ್ಚಳಕ್ಕೆ ಪ್ರತಿಯೊಬ್ಬರೂ ಜಾಗೃತಿ ಮೂಡಿಸುವಂತಾಗಬೇಕು. ಸ್ವೀಪ್ ಚಟುವಟಿಕೆಗಳನ್ನು ಉತ್ತಮವಾಗಿ ಇದುವರೆಗೆ ಕೈಗೊಳ್ಳಲಾಗಿದೆ. ಚುನಾವಣೆ ಹತ್ತಿರ ಬರುತ್ತಿದ್ದು, ಸ್ವೀಪ್ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸುವಂತೆ ರಾಜ್ಯ ನೋಡಲ್ ಅಧಿಕಾರಿ ಅವರು ಸಲಹೆ ಮಾಡಿದರು.
ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಕಡಿಮೆ ಮತದಾನವಾಗಿರುವ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮತಗಟ್ಟೆ ಕೇಂದ್ರಗಳಲ್ಲಿನ ಶೌಚಾಲಯ ಸ್ವಚ್ಛವಾಗಿರಬೇಕು ಎಂದರು.
ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಹಾಲಿನ ಪ್ಯಾಕೇಟ್, ಎಲ್‍ಪಿಜಿ, ಬಸ್ ಟಿಕೆಟ್ ಹಾಗೂ ಇತರೆ ಕಡೆಗಳಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬಹುದಾಗಿದೆ ಎಂದು ಅವರು ಸಲಹೆ ಮಾಡಿದರು.
ಸ್ವೀಪ್ ಸಮಿತಿ ಜಿಲ್ಲಾ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮಾಹಿತಿ ನೀಡಿ ಅಕ್ಟೋಬರ್ ತಿಂಗಳಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ, ನವೆಂಬರ್ ತಿಂಗಳಲ್ಲಿ ವಾಕ್‍ಥಾನ್, ಹಾಡಿಗಳಿಗೆ ಭೇಟಿ, ಡಿಸೆಂಬರ್ ತಿಂಗಳಲ್ಲಿ ರಾಜ್ಯ ಚುನಾವಣಾಧಿಕಾರಿಯ ಭೇಟಿ, ಕಾಫಿ ಮೇಳ ಮತ್ತು ಉದ್ಯೋಗ ಮೇಳ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್ ಮಹತ್ವ ಸಾರುವ ಫಲಪುಷ್ಪ ಪ್ರದರ್ಶನ, ರಾಷ್ಟ್ರೀಯ ಮತದಾರರ ದಿನದಂದು ಮತದಾನದ ಮಹತ್ವ ಕುರಿತು ಜಾಗೃತಿ ಹೀಗೆ ಹಲವು ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಸ್ವೀಪ್ ಸಮಿತಿಯ ರಾಜ್‍ಗೋಪಾಲ್, ನಗರಸಭೆ ಪೌರಾಯುಕ್ತರಾದ ವಿಜಯ್, ತಹಶೀಲ್ದಾರ್ ಕಿರಣ್, ಬಿಎಲ್‍ಒಗಳು, ಹಾಗೆಯೇ ಸಭಾ ಕಾರ್ಯಕ್ರಮ ಸಂದರ್ಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಷೇಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ತಾ.ಪಂ.ಇಒಗಳ ಅಪ್ಪಣ್ಣ, ಜಯಣ್ಣ, ವಿಕಲಚೇತನರ ಅಧಿಕಾರಿ ವಿಮಲ, ಸದಾಶಿವ ಪಲ್ಲೇದ್, ನವೀನ್ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆ ತಾಲ್ಲೂಕು ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳ ಸಂಘ ಅಸ್ತಿತ್ವಕ್ಕೆ*
Next Article ಗೋಣಿಕೊಪ್ಪ : ಮಾ.23 ರಂದು ಅರೆ ಸೇನಾಪಡೆ ನಿವೃತ್ತ (ಮಾಜಿ) ಯೋಧರ ಸಮಾವೇಶ

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.