Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ : ತಿತಿಮತಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ : ತಿತಿಮತಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ*

ಮಾರ್ಚ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.21 :  ಗೋಣಿಕೊಪ್ಪದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿರುವ ಪೋಸ್ಟರ್ ಮೇಲೆ ಚಪ್ಪಲಿ ಚಿತ್ರವನ್ನಿಟ್ಟು ಅವಮಾನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು  ಆಗ್ರಹಿಸಿ  ದಲಿತ ಸಂಘರ್ಷ ಸಮಿತಿ ಕೊಡಗು  ಜಿಲ್ಲಾ ಘಟಕ ಆಗ್ರಹಿಸಿದೆ.

ತಿತಿಮತಿಯ ಬಸ್ ನಿಲ್ದಾಣದಲ್ಲಿ  ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಮಾನವ ಸರಪಳಿ ರಚಿಸಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದರು.

ಬಿಜೆಪಿ ವತಿಯಿಂದ ಗೋಣಿಕೊಪ್ಪದಲ್ಲಿ ಆಯೋಜಿಸಿದ್ದ ವಿಜಯಸಂಕಲ್ಪ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಪೋಸ್ಟರ್ ಮೇಲೆ ಮುಖ್ಯಮಂತ್ರಿಯವರ ಭಾವಚಿತ್ರದ ಪೋಸ್ಟರ್ ಅಳವಡಿಸಿ, ಅವರ ಕಾಲಿನ ಚಪ್ಪಲಿ, ಅಂಬೇಡ್ಕರ್ ಚಿತ್ರದ ತಲೆಯ ಮೇಲೆ ಇರುವಂತೆ ವ್ಯವಸ್ಥಿತವಾಗಿ ಕಟ್ಟಿದ್ದಾರೆ. ಬಿಜೆಪಿ, ಸಂಘಪರಿವಾರದ ಕಿಡಿಕೇಡಿಗಳ ಮನಸ್ಥಿತಿ ಇಂತಹ ಕೃತ್ಯಗಳಿಂದ ತಿಳಿದು ಬರುತ್ತದೆ ಎಂದು ದೂರಿದರು.

ಈ ವಿಷಯವಾಗಿ ಗೋಣಿಕೊಪ್ಪ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಇದುವರೆಗೂ ಬಂದಿಸಿರುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ, ಗಡಿಪಾರು ಮಾಡುವಂತೆ ಸಂಘಟನೆಯ ಪ್ರಮುಖರು ಒತ್ತಾಯಿಸಿದರು.

ಕಳೆದ 6 ವರ್ಷದಿಂದ ಹೈಸೂಡ್ಲುರು  ಗ್ರಾಮದಲ್ಲಿ  ಪರಿಶಿಷ್ಟ ಪಂಗಡ ನಿವಾಸಿಗಳಿಗೆ  ಆಶ್ರಯ ನಿವೇಶನಕ್ಕಾಗಿ ಪೊನ್ನಂಪೇಟೆ ತಾಲೂಕು ಕಾರ್ಯನಿರ್ವಹಣಾ ಅಧಿಕಾರಿಯವರ ಹೆಸರಿನಲ್ಲಿ   ಮಿಸಲಿರಿಸಿದ್ದ  8 ಎಕರೆ ಜಾಗದಲ್ಲಿ 7 ಎಕರೆ  ಜಾಗವನ್ನು ಶ್ರೀಮಂತರು ಒತ್ತುವರಿ ಮಾಡಿಕೊಂಡಿದ್ದು, ಉಳಿದ 1 ಎಕರೆ ಜಾಗದಲ್ಲಿ  ಜೇನು ಕುರುಬ, ಯರವ, ಜನಾಂಗದವರು, ನಿವೇಶನ ರಹಿತರು, ಪ್ಲಾಸ್ಟಿಕ್ ಗುಡಿಸಲು ಕಟ್ಟಿಕೊಂಡು  ವಾಸವಿದ್ದಾರೆ. 

ಅಲ್ಲದೆ  ಕುಡಿಯಲು ನೀರಿಲ್ಲದೆ ಸುಮಾರು 6-7 ಕಿಲೋ ಮೀಟರ್ ದೂರದ ಹೊಳೆಯಿಂದ  ನೀರು ತರುವ ಪರಿಸ್ಥಿತಿ ಉದ್ಭವವಾಗಿದ್ದು, ಕಳೆದ 6 ವರ್ಷಗಳಿಂದ ವಿದ್ಯುತ್ ಇಲ್ಲದೆ ಕತ್ತಲಲ್ಲಿ  ಜೀವನ ನಡೆಸುತ್ತಿದ್ದಾರೆ. ಇಲ್ಲಿ ವಾಸ ಮಾಡುತ್ತಿರುವ  ನಿವಾಸಿಗಳು ಮೂಲಭೂತ ಸೌಲಭ್ಯಗಳಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಈ ಬಗ್ಗೆ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ ಸಮಿತಿಯ ಪ್ರಮುಖರು  ಅಧಿಕಾರಿಗಳು ಉಳ್ಳವರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

 ಸಂಬಂಧಪಟ್ಟ ಅಧಿಕಾರಿಗಳು ಪರಿಶಿಷ್ಟ ಪಂಗಡದವರಿಗಾಗಿ ಮೀಸಲಿಟ್ಟ ಜಾಗವನ್ನು ಸರ್ವೆ ನಡೆಸಿ ಸರ್ಕಾರ ಸುಪರ್ದಿಗೆ ಪಡೆದುಕೊಂಡು ಬಡವರಿಗೆ ಹಂಚಿಕೆ ಮಾಡದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರ ಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

 ಬೇಡಿಕೆಗಳು:
ಹೈಸೂಡ್ಲುರು ಗ್ರಾಮದಲ್ಲಿ ವಾಸವಿರುವವರಿಗೆ ಮೂಲಭೂತ ಸೌಲಭ್ಯ ಹಾಗೂ ಕುಡಿಯುವ ನೀರು ತಕ್ಷಣ ಒದಗಿಸಬೇಕು,  ಕೆ.ಬಾಡಗ ಗ್ರಾ.ಪಂ ವ್ಯಾಪ್ತಿಯ  ಸರ್ಕಾರಿ ಜಾಗದಲ್ಲಿ ಈ ಹಿಂದೆ ವಾಸವಿದ್ದ 50 ಕುಟುಂಬಗಳಿಗೆ ನಿವೇಶನ ಹಂಚಬೇಕು, ಕುಟ್ಟ ಗ್ರಾ.ಪಂ ವ್ಯಾಪ್ತಿಯ ನಾತಂಗಲ ಗ್ರಾಮದಲ್ಲಿ ಪರಿಶಿಷ್ಟ ಪಂಗಡದವರಿಗೆ ಹಕ್ಕು ಪತ್ರ ನೀಡಿದ್ದು, ಇಲ್ಲಿ ವಾಸ ಮಾಡುತ್ತಿರುವವರಿಗೆ ಮನೆ ಮಂಜೂರು ಮಾಡಿ ಇಲ್ಲಿ ವಾಸವಿರುವ ಜನರಿಗೆ ಅನುಕೂಲ ಮಾಡಿಕೊಡಬೇಕು ಮಾಡಬೇಕೆಂದು ಒತ್ತಾಯಿಸಿದರು.

ತಿತಿಮತಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ದಲಿತ ಕಾಲೊನಿಗಳಿಗೆ ಕುಡಿಯುವ ನೀರು ಮತ್ತು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಕೊಡಬೇಕು,  ಜಿಲ್ಲೆಯಲ್ಲಿ ವಾಸಿಸುತ್ತಿರುವ ದಲಿತ ಕಾಲೊನಿಗಳಿಗೆ ಕುಡಿಯುವ ನೀರಿನ ಅಭವಾವಿದ್ದು, ಕಾಲೊನಿಗಳನ್ನು ಪರಿಶೀಲಿಸಿ ನೀರಿನ ವ್ಯವಸ್ಥೆ  ಮಾಡಬೇಕೆಂದು ಆಗ್ರಹಿಸಿದರು.

ಬೇಡಿಕೆಯ ಮನವಿ ಪತ್ರವನ್ನು ತಹಶೀಲ್ದಾರ್ ಮುಖಾಂತರ  ರಾಜ್ಯಪಾಲರಿಗೆ  ಸಲ್ಲಿಸಲಾಯಿತು.

ದಲಿತ ಸಂಘರ್ಷ ಸಮಿತಿಯ ಮುಖಂಡರುಗಳು, ಕಾರ್ಯಕರ್ತರು, ಪ್ರಗತಿಪರ ಚಿಂತಕರು, ಮಹಿಳೆಯರು  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.