Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮತಗಟ್ಟೆಗೆ ಹೋಗಲು ಆಗದಿರುವವರು ಅಂಚೆ ಮತಪತ್ರ ಮೂಲಕ ಮತ ಚಲಾಯಿಸಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮತಗಟ್ಟೆಗೆ ಹೋಗಲು ಆಗದಿರುವವರು ಅಂಚೆ ಮತಪತ್ರ ಮೂಲಕ ಮತ ಚಲಾಯಿಸಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್

ಮಾರ್ಚ್ 21, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.21 : ಎಂಬತ್ತು ವರ್ಷ ಮೇಲ್ಪಟ್ಟ ಹಿರಿಯರು, ವಿಕಲಚೇತನರು, ಕೋವಿಡ್-19 ಸೋಂಕಿತ/ ಬಾದಿತ ವ್ಯಕ್ತಿಗಳು ಹಾಗೂ ಅಗತ್ಯ ಸೇವೆಯಲ್ಲಿರುವವರು, ಮತಗಟ್ಟೆ ಕೇಂದ್ರಕ್ಕೆ ತೆರಳಲು ಆಗದಿರುವ ಮತದಾರರಿಗೆ ‘ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿದೆ. ಈ ಅವಕಾಶವನ್ನು ಅರ್ಹರು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಸಂಬಂಧ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನರು, ಕೋವಿಡ್-19 ನಿಂದ ಬಾದಿತ ವ್ಯಕ್ತಿಗಳು ಹಾಗೂ ಅಗತ್ಯ ಸೇವೆಯಲ್ಲಿರುವ ವಿದ್ಯುತ್, ಬಿಎಸ್‍ಎನ್‍ಎಲ್, ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ, ವಿಮಾನಯಾನ, ರಾಜ್ಯ ರಸ್ತೆ ಸಾರಿಗೆ ನಿಗಮ, ಅಗ್ನಿಶಾಮಕ, ಮಾಧ್ಯಮ, ಸಂಚಾರಿ ಪೊಲೀಸ್ ಹಾಗೂ ಆಂಬ್ಯುಲೆನ್ಸ್‍ನಲ್ಲಿ ಸೇವೆ ನಿರ್ವಹಿಸುತ್ತಿರುವವರು ‘ಅಂಚೆ ಮತಪತ್ರ’ ಪಡೆದು ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಬೂತ್ ಮಟ್ಟದ ಅಧಿಕಾರಿಗಳು ಮತದಾನ ಕೇಂದ್ರವಿರುವ ಪ್ರದೇಶದಲ್ಲಿ ಚುನಾವಣಾಧಿಕಾರಿಯು ಒದಗಿಸಿದ ವಿವರಗಳ ಅನುಸಾರ ಎವಿಎಸ್‍ಸಿ (Absentee voters of senior citizen category), J«¦r(Absentee Voters belonging to PwD category) ಮತ್ತು ಎವಿಸಿಓ (Absentee Voters bilonging to COVID 19 Category) ಪ್ರವರ್ಗಗಳಲ್ಲಿನ ಗೈರು ಹಾಜರಿ ಮತದಾರರ ಮನೆಗಳಿಗೆ ಭೇಟಿ ನೀಡಿ ಸಂಬಂಧಪಟ್ಟ ಮತದಾರರಿಗೆ ನಮೂನೆ 12 ಡಿ ಯನ್ನು ವಿತರಿಸಿ, ನಂತರ ಮತದಾರರಿಂದ ನಮೂನೆ 12 ಡಿ ಯನ್ನು ಪಡೆಯಲಾಗುವುದು. ಈ ಉದ್ದೇಶಕ್ಕಾಗಿಯೇ ಪ್ರತ್ಯೇಕ ಪಟ್ಟಿ ತಯಾರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸೆಕ್ಟರ್ ಅಧಿಕಾರಿಗಳು ನಮೂನೆ 12 ಡಿ ಅರ್ಜಿಗಳನ್ನು ವಿತರಿಸುವ ಹಾಗೂ ಸಂಗ್ರಹಿಸುವ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ಈ ಎಲ್ಲಾ ಕಾರ್ಯದ ಸಂಪೂರ್ಣ ಮೇಲ್ವಿಚಾರಣೆಯನ್ನು ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದು ಡಾ.ಬಿ.ಸಿ.ಸತೀಶ ಅವರು ನುಡಿದರು.
‘ಅಂಚೆ ಮತದಾರನು ಒಂದು ಬಾರಿ ಅಂಚೆ ಮತಪತ್ರದ ಮೂಲಕ ಮತಚಲಾಯಿಸುವುದಾಗಿ ಆಯ್ಕೆ ಮಾಡಿಕೊಂಡಲ್ಲಿ, ಯಾವುದೇ ಕಾರಣಕ್ಕೂ ಮತಗಟ್ಟೆಗೆ ಹೋಗಿ ಮತಚಲಾಯಿಸಲು ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ಪಷ್ಟಪಡಿಸಿದರು.’
ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕದಂದು, ಆ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ಚುನಾವಣೆಯು ಮುಕ್ತಾಯಗೊಳ್ಳುವವರೆಗೂ ಆ ಪಟ್ಟಿಯಲ್ಲಿ ಯಾವುದೇ ಹೆಚ್ಚುವರಿ ಸೇರ್ಪಡೆ ಅಥವಾ ತೆಗೆದುಹಾಕುವಿಕೆ ಮಾಡುವುದಿಲ್ಲ ಎಂದರು.
ಕೋವಿಡ್-19 ಪ್ರವರ್ಗಕ್ಕೆ ಸೇರಿದ ಗೈರು ಹಾಜರಿ ಮತದಾರರ ಸಂದರ್ಭದಲ್ಲಿ ಅಂಚೆ ಮತದಾನಕ್ಕಾಗಿ ನಮೂನೆ-12 ಡಿ ಯನ್ನು ಅನುಮೋದಿಸುವ ಮುಂಚೆ ಚುನಾವಣಾಧಿಕಾರಿಯು ಸಕ್ಷಮ ಪ್ರಾಧಿಕಾರವು ನೀಡಿದ ಪ್ರಮಾಣ ಪತ್ರ ಪರಿಶೀಲಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಚುನಾವಣಾಧಿಕಾರಿಯು ಮತದಾರರ ಪಟ್ಟಿ ಗುರುತು ಮಾಡಿದ ಪ್ರತಿಯನ್ನು ಅವರ ಹೆಸರಿನ ಮುಂದೆ ‘ಪಿಬಿ’ (ಪೊಸ್ಟಲ್ ಬ್ಯಾಲೆಟ್) ಎಂದು ನಮೂದಿಸುತ್ತಾರೆ. ಅಂಚೆ ಮತಪತ್ರವನ್ನು ನೀಡಲಾದ ಮತದಾರನಿಗೆ ಮತದಾನ ಕೇಂದ್ರದಲ್ಲಿ ಮತ ಹಾಕಲು ಅನುಮತಿ ನೀಡುವುದಿಲ್ಲ ಎಂದರು.
ಕಾಂಗ್ರೆಸ್ ಪಕ್ಷದ ತೆನ್ನಿರಾ ಮೈನಾ ಮತ್ತು ಬಿಜೆಪಿಯ ಸತೀಶ್ ಅವರು ಮತದಾನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಹಲವು ಹೊಸ ಹೊಸ ಯೋಜನೆಗಳನ್ನು ಕೈಗೊಳ್ಳುತ್ತಿದೆ. ಆ ನಿಟ್ಟಿನಲ್ಲಿ ಚುನಾವಣಾ ಆಯೋಗಕ್ಕೆ ಕೈಜೋಡಿಸಲಾಗುವುದು. 80 ವರ್ಷ ಮೇಲ್ಪಟ್ಟವರು ಹಾಗೂ ಇತರರನ್ನು ಸಂಪರ್ಕಿಸಿ ಮತಗಟ್ಟೆಗೆ ತೆರಳಲು ಅಸಾಧ್ಯವಾಗಿರುವವರಿಗೆ ಅಂಚೆ ಮತಪತ್ರ ಪಡೆದು ಮತದಾನ ಮಾಡಲು ಉತ್ತೇಜಿಸಲಾಗುವುದು ಎಂದು ಅವರು ಹೇಳಿದರು.
ಕೊಡಗು ಜಿಲ್ಲೆಯ ಹಲವು ಹಾಡಿಯ ಕುಟುಂಬಗಳು ಇನ್ನೂ ಸಹ ಮತದಾರರ ಗುರುತಿನ ಚೀಟಿ ಪಡೆದಿಲ್ಲ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ ಎಂದು ತೆನ್ನಿರ ಮೈನಾ ಅವರು ಕೋರಿದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಎರಡು ಬಾರಿ ಮನೆ ಮನೆ ಸಮೀಕ್ಷೆ ಮಾಡಲಾಗಿದೆ. ಈ ಹಿಂದೆ ನವೆಂಬರ್ ತಿಂಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸಂಬಂಧ ಅಭಿಯಾನ ನಡೆದಿತ್ತು. ಈಗಲೂ ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡದಿರುವವರು, ಹೆಸರು ಸೇರ್ಪಡೆ ಮಾಡಬೇಕು ಎಂದು ತಿಳಿಸಿದರು.
ಹಾಡಿಗಳಲ್ಲಿ ಈಗಾಗಲೇ ಎರಡು ಬಾರಿ ಮನೆ ಮನೆಗೆ ಭೇಟಿ ನೀಡಿ 1002 ಕ್ಕೂ ಹೆಚ್ಚು ಮಂದಿಯ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಇನ್ನೂ ಯಾರಾದರೂ 18 ವರ್ಷ ಮೇಲ್ಪಟ್ಟವರು ಬಿಟ್ಟು ಹೋಗಿದ್ದಲ್ಲಿ ಹತ್ತಿರದ ಬಿಎಲ್‍ಒಗಳನ್ನು ಅಥವಾ ವೋಟರ್ ಹೆಲ್ಫ್‍ಲೈನ್ ಆ್ಯಪ್ ಮೂಲಕ ಹೆಸರು ನೋಂದಾಯಿಸಬಹುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸತೀಶ್(ಬಿಜೆಪಿ), ಗುಲಾಬಿ(ಜೆಡಿಎಸ್), ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಕ್, ಚುನಾವಣಾ ತಹಶೀಲ್ದಾರ್ ರವಿಶಂಕರ ಇತರರು ಇದ್ದರು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.