Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪೊನ್ನಂಪೇಟೆಯಲ್ಲಿ ಕಾಂಗ್ರೆಸ್ ಮಹಿಳಾ ಸಮಾವೇಶ : ಬಿಜೆಪಿಯನ್ನು ನಂಬಿ ಮೂರ್ಖರಾಗಬೇಡಿ : ಪುಷ್ಪಾ ಅಮರನಾಥ್*
ಇತ್ತೀಚಿನ ಸುದ್ದಿಗಳು

*ಪೊನ್ನಂಪೇಟೆಯಲ್ಲಿ ಕಾಂಗ್ರೆಸ್ ಮಹಿಳಾ ಸಮಾವೇಶ : ಬಿಜೆಪಿಯನ್ನು ನಂಬಿ ಮೂರ್ಖರಾಗಬೇಡಿ : ಪುಷ್ಪಾ ಅಮರನಾಥ್*

March 24, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.24 : ಬಿಜೆಪಿಯ ಪೊಳ್ಳು ಭರವಸೆಗಳನ್ನು ನಂಬಿದ ಪರಿಣಾಮವಾಗಿ ಮಹಿಳೆಯರು ಇಂದು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಈ ಬಾರಿ ಬಿಜೆಪಿಯನ್ನು ನಂಬಿ ಮೂರ್ಖರಾಗದೆ ಸಂಕಷ್ಟಗಳಿಗೆ ಸ್ಪಂದಿಸುವ ಕಾಂಗ್ರೆಸ್ ನ್ನು ಬೆಂಬಲಿಸಿ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಕರೆ ನೀಡಿದ್ದಾರೆ.
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಪೊನ್ನಂಪೇಟೆ, ವಿರಾಜಪೇಟೆ ಮತ್ತು ನಾಪೋಕ್ಲು ಮಹಿಳಾ ಕಾಂಗ್ರೆಸ್‌ನಿAದ ನಡೆದ ‘ಕಾಂಗ್ರೆಸ್ ಮಹಿಳಾ ಸಮಾವೇಶ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯ ಸುಳ್ಳು ಆಶ್ವಾಸನೆ, ಭರವಸೆಗಳನ್ನು ನಂಬಿದಲ್ಲಿ ನಮಗಿಂತ ಮೂರ್ಖರು ಮತ್ತೊಬ್ಬರಿಲ್ಲವೆಂದು ಹೇಳಿದರು.
ಬಿಜೆಪಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಷ್ಟು ಮಹಿಳೆಯರಿಗೆ ಸ್ಥಾನಮಾನ ನೀಡಿದೆ, ಇಂತಹ ವಿಚಾರಗಳ ಬಗ್ಗೆ ಮಹಿಳೆೆಯರು ಪ್ರಶ್ನೆ ಮಾಡಬೇಕು. ಪ್ರಸ್ತುತ ನಮ್ಮ ಜೀವನಕ್ಕಾಗಿ ಬೀದಿಗೆ ಬಂದು ಹೋರಾಟ ಮಾಡುವಂತಹ ಅನಿವಾರ್ಯತೆಯನ್ನು ಬಿಜೆಪಿ ಸೃಷ್ಟಿಸಿದೆಯೆಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ‘ಅನ್ನ ಭಾಗ್ಯ’ ನೀಡಿದ ಕಾರಣ ಕೋವಿಡ್ ಸಂದರ್ಭ ಜನರ ಹೊಟ್ಟೆ ತುಂಬುವಂತಾಯಿತು. ಕೊಡಗಿನ ಇಬ್ಬರು ಬಿಜೆಪಿ ಶಾಸಕರು ಕಳೆದ ಎರಡು ದಶಕಗಳ ಅವಧಿಯಲ್ಲಿ ಎಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪುಷ್ಪ ಅಮರನಾಥ್ ಪ್ರಶ್ನಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮಾತನಾಡಿ, ಕೊಡಗಿನಲ್ಲಿ ಕಾಂಗ್ರೆಸ್ ಅಲೆ ಇದೆ. ಅತ್ಯಧಿಕ ಮತಗಳ ಅಂತರದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಮಹಿಳೆಯರಿಗೆ ಸೂಕ್ತ ಸ್ಥಾನಮಾನವನ್ನು ಕಾಂಗ್ರೆಸ್ ಪಕ್ಷ ನೀಡುತ್ತಲೆ ಬಂದಿದೆ. ವಿಧಾನಸಭಾ ಚುನಾವಣೆ ಬಳಿಕ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲೂ ಮಹಿಳೆಯರು ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಳ್ಳ್ಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವಂತೆ ಕರೆ ನೀಡಿದರು.
ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಮಾತನಾಡಿ, ಕಾಂಗ್ರೆಸ್ ಮಹಿಳೆಯರಿಗೆ ಗೌರವದ ಸ್ಥಾನ ನೀಡಿದೆ. ಚುನಾವಣೆಯಲ್ಲಿಯೂ ಪ್ರಾತಿನಿಧ್ಯ ನೀಡಲಿದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಶೇ.50 ರಷ್ಟು ಮೀಸಲಾತಿ ನೀಡಲೂ ಕಾಂಗ್ರೆಸ್ ಕಾರಣ. ಕಾಂಗ್ರೆಸ್‌ನಿಂದ ಸಚಿವ ಸ್ಥಾನ, ಎಂಎಲ್‌ಸಿ, ರಾಜ್ಯಸಭಾ ಸದಸ್ಯ ಸ್ಥಾನ ಸೇರಿದಂತೆ ಜಿಲ್ಲಾಧ್ಯಕ್ಷ ಸ್ಥಾನವನ್ನು ಮಹಿಳೆಯರಿಗೆ ನೀಡಲಾಗಿದೆ. ಮಹಿಳೆಯರಿಗೆ ಕೊಡಗಿನಲ್ಲಿ ಬಿಜೆಪಿ ಯಾವ ಪ್ರಮುಖ ಸ್ಥಾನ ನೀಡಿದೆಯೆಂದು ಪ್ರಶ್ನಿಸಿದರು.
::: ಮಹಿಳೆಯರ ಕಣ್ಣೀರು :::
ಕೋಮು ಭಾವನೆಗಳನ್ನು ಕೆರಳಿಸಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಇಂತಹ ಭಾಷಣ ಮಾಡಿದವರು ಊರು ಬಿಟ್ಟು ಹೋಗುತ್ತಾರೆ. ಕೇಸ್ ಹಾಕಿಸಿಕೊಂಡವರು ಕೋರ್ಟ್ಗೆ ಅಲೆಯುತ್ತಾರೆ, ಮಹಿಳೆಯರು ಮನೆಯಲ್ಲಿ ಕಣ್ಣೀರು ಹಾಕುತ್ತಿರುತ್ತಾರೆ ಎಂದು ಪೊನ್ನಣ್ಣ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಪ್ರತೀ ಮಹಿಳೆಯರ ಬ್ಯಾಂಕ್ ಖಾತೆಗೆ ವಾರ್ಷಿಕ 24 ಸಾವಿರ ರೂ. ಸಂದಾಯವಾಗಲಿದೆ. ಹೀಗಾಗಿ ಮಹಿಳೆಯರು ಕಡ್ಡಾಯವಾಗಿ ಬ್ಯಾಂಕ್ ಖಾತೆ ತೆರೆಯಿರಿ ಎಂದು ಸಲಹೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಮಾತನಾಡಿ, ಮಹಿಳೆಯರಿಗೆ ರಾಜಕೀಯ ಮೀಸಲಾತಿ ಒದಗಿಸಿರುವ ಕೀರ್ತಿ ಕಾಂಗ್ರೆಸ್‌ನದ್ದು. ಪಕ್ಷದ ಬೆಳವಣಿಗೆಗೆ ಮಹಿಳೆಯರ ಕೊಡುಗೆ ಅತ್ಯಂತ ಪ್ರಮುಖವಾದುದು ಎಂದರು.
ಕೊಡಗಿನಲ್ಲಿ ಮಹಿಳೆಯರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ. ಎ.ಎಸ್.ಪೊನ್ನಣ್ಣ ಗೆಲವು ಖಂಚಿತವೆAದು ವಿಶ್ವಾಸ ವ್ಯಕ್ತಪಡಿಸಿದ ಅವರು ಭಯ ಮುಕ್ತ ಕೊಡಗಿಗಾಗಿ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಗೆಲ್ಲುವುದು ಅಗತ್ಯವೆಂದು ಹೇಳಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಅಧ್ಯಕ್ಷ ಶಿವುಮಾದಪ್ಪ, ಎಂ.ನವೀನ್, ಭವಾನಿ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಿನಾಝ್ ಪ್ರವೀಣ್ ಸೇರಿದಂತೆ ಹಲ ಪ್ರಮುಖರು ಭಾಗವಹಿಸಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಈಶ್ವರಪ್ಪ ಹೇಳಿಕೆಗೆ ಮಡಿಕೇರಿ ಬದ್ರಿಯಾ ಜಮಾಅತ್ ಖಂಡನೆ*
Next Article *ಪ್ರಚೋದನಾಕಾರಿ ಭಾಷಣ ಮಾಡಿದವರು ಊರು ಬಿಡುತ್ತಾರೆ, ಕೇಸ್ ಹಾಕಿಸಿಕೊಂಡವರ ಮನೆಯ ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಾರೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.