Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೆಎಫ್‍ಸಿ ಟ್ರೋಫಿ ಸಿಜಾನ್-2 : ಮಾ.30 ರಂದು ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೆಎಫ್‍ಸಿ ಟ್ರೋಫಿ ಸಿಜಾನ್-2 : ಮಾ.30 ರಂದು ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ*

ಮಾರ್ಚ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.27 : ಜೋಡುಪಾಲ ಗೆಳೆಯರ ಬಳಗ ಹಾಗೂ ಕೊಡಗು ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ನ ಸಂಯುಕ್ತಾಶ್ರಯದಲ್ಲಿ ಮಾ.30 ರಂದು ಹೊನಲು ಬೆಳಕಿನ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿ “ಜೆಎಫ್‍ಸಿ ಟ್ರೋಫಿ ಸಿಜಾನ್-2” ನಡೆಯಲಿದೆ.
ಅಂದು ಸಂಜೆ 7 ಗಂಟೆಗೆ ಮದೆ ಗ್ರಾ.ಪಂ ವ್ಯಾಪ್ತಿಯ ಜೋಡುಪಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತ ಬಿ.ಸಿ.ರಮೇಶ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಜಂಟಿ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾಧ್ಯಕ್ಷ ಉತ್ತಪ್ಪ ಹೊಸೊಕ್ಲು ಕಬಡ್ಡಿ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ.
ಮದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಅಗೋಳಿಕಜೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಕೀಲರು ಹಾಗೂ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಪಿಲ್ ಕುಮಾರ್ ದುಗ್ಗಳ, ಕಬಡ್ಡಿ ಪಂದ್ಯಾವಳಿಯ ಅಧ್ಯಕ್ಷ ಕೆ.ಆರ್.ರಾಜು, ಮದೆ ಗ್ರಾ.ಪಂ ಅಧ್ಯಕ್ಷ ನಡುಗಲ್ಲು ರಾಮಯ್ಯ, ಸದಸ್ಯರಾದ ಸಹೀದಲವಿ, ವಿಮಲಾಕ್ಷಿ, ಜೋಡುಪಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ದಮಯಂತಿ, ಎಸ್‍ಡಿಎಂಸಿ ಅಧ್ಯಕ್ಷ ಎ.ಬಿ.ಮಾಧವ ಪಾಲ್ಗೊಳ್ಳಲಿದ್ದಾರೆ.
ಪ್ರಥಮ ಬಹುಮಾನವಾಗಿ ದಾನಿಗಳಾದ ಕೆ.ಜೆ.ಆಶಾ ಹಾಗೂ ಸಂಜಯ್ ಕುಮಾರ್ ಅವರು ನೀಡಿರುವ ರೂ.23,333 ನಗದು ಮತ್ತು ಶಾಶ್ವತ ಫಲಕ, ದ್ವಿತೀಯ ಸಿಂಚನ ಕಾಫಿ ಲಿಂಕ್ಸ್‍ನ ಬಿ.ಸಿ.ಕೀರ್ತಿಕುಮಾರ್ ಹಾಗೂ ಸೀತಾರಾಮ್ ಕಳಗಿ ನೀಡಿರುವ ರೂ.15,555 ನಗದು ಹಾಗೂ ಶಾಶ್ವತ ಫಲಕ, ತೃತೀಯ ಮದೆಮಹೇಶ್ವರ ಲಿಂಕ್ಸ್‍ನ ಮಾಲೀಕರಾದ ಕೆ.ಟಿ.ಸತೀಶ್ ನೀಡಿರುವ ರೂ.10,111 ಹಾಗೂ ಶಾಶ್ವತ ಫಲಕ, ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ಜೋಡುಪಾಲ ಮಾರುತಿ ಟ್ರಾನ್ಸ್‍ಫೋರ್ಟ್‍ನ ಮಾಲೀಕರಾದ ನಂಗಾರು ದೀಕ್ಷಿತ್ ನೀಡಿರುವ ರೂ. 7,777 ಹಾಗೂ ಶಾಶ್ವತ ಫಲಕವನ್ನು  ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಅಲ್ಲದೆ ವೈಯಕ್ತಿಕ ಬೆಸ್ಟ್ ಡೆಫೆಂಡರ್, ಬೆಸ್ಟ್ ಆಲ್‍ರೌಂಡರ್, ಬೆಸ್ಟ್ ರೈಡರ್ ವಿಜೇತರಿಗೆ ಬಹುಮಾನವಾಗಿ 2ನೇ ಮೊಣ್ಣಂಗೇರಿಯ ಮನೋಜ್ ಮೈಕಲ್ ನೀಡಿದ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಹಚ್ಚಹಸುರಿನ ಪಶ್ಚಿಮ ಘಟ್ಟದ ಸಾಲುಗಳ ನಡುವೆ ಹಾದು ಹೋಗುವ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿಯಿಂದ 14 ಕಿ.ಮೀ ದೂರದಲ್ಲಿ ರಸ್ತೆಯ ಎಡ ಮತ್ತು ಬಲ ಬದಿಯಲ್ಲಿ ಕಾಣ ಸಿಗುವ ಗ್ರಾಮಗಳೇ ಜೋಡುಪಾಲ ಮತ್ತು 2ನೇ ಮೊಣ್ಣಂಗೇರಿ ಗ್ರಾಮಗಳು.
ಪ್ರಕೃತಿಯ ಮಡಿಲಿನಲ್ಲಿ ನದಿ-ತೊರೆ, ಬೆಟ್ಟಗುಡ್ಡಗಳ ಮಧ್ಯೆ ಕೃಷಿ, ಮತ್ತಿತರ ಕೆಲಸಗಳ ನಡುವೆ ಜೀವನ ಸಾಗಿಸುತ್ತ ಆಧುನಿಕತೆಯ ಜಗತ್ತಿನತ್ತ ಮುನ್ನುಗ್ಗುತ್ತಿದ್ದ ಸಂದರ್ಭ, 2018 ನೇ ವರ್ಷದ ಆಗಸ್ಟ್ ತಿಂಗಳಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಜಲಸ್ಫೋಟ, ಭೂಕುಸಿತದ ಪರಿಣಾಮ ಸಾವು, ನೋವು ಉಂಟಾಗಿತ್ತು. ಮನೆ, ಆಸ್ತಿ ನಷ್ಟದಿಂದ ಗ್ರಾಮಸ್ಥರ ಚೈತನ್ಯ ಕುಂದಿತ್ತು.
ಇತ್ತೀಚಿನ ದಿನಗಳಲ್ಲಿ ಈ ಸಂಕಷ್ಟಗಳಿಂದ ಚೇತರಿಸಿಕೊಂಡ ಗ್ರಾಮಸ್ಥರು ಹಾಗೂ ಯುವಕರು ನವಗ್ರಾಮದ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ಜೊತೆಗೆ ಯುವಕ, ಯುವತಿಯರಲ್ಲಿ ಹೊಸ ಉತ್ಸಾಹವನ್ನು ತುಂಬಲು 2022 ರಲ್ಲಿ ಜೋಡುಪಾಲದ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಆಯೋಜಿಸಿ ಯಶಸ್ವಿಯಾಗಿದೆ.
ಈ ಬಾರಿ 2ನೇ ವರ್ಷದ ಕಬಡ್ಡಿ ಪಂದ್ಯಾವಳಿ ನಡೆಯುತ್ತಿದ್ದು, ಎಲ್ಲಾ ಕ್ರೀಡಾಭಿಮಾನಿಗಳು ಹಾಗೂ ಜೋಡುಪಾಲ ಶಾಲೆಯಲ್ಲಿ ಶಿಕ್ಷಣ ಪಡೆದ ಹಳೆಯ ವಿದ್ಯಾರ್ಥಿಗಳು ಇದರ ಯಶಸ್ಸಿಗೆ ಸಹಕರಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 9449402061 ನ್ನು ಸಂಪರ್ಕಿಸಬಹುದಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಮಾ.13 NEWS DESK : ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆ ಪ್ರಸ್ತುತ ವಿವಿಧ ಸಾಧನೆಗಳಿಗೆ ಆರು ಪ್ರಶಸ್ತಿಯ…

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.