Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಶಿಕ್ಷಣದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು : ಪ್ರೋ. ಅಶೋಕ ಸಂಗಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶಿಕ್ಷಣದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು : ಪ್ರೋ. ಅಶೋಕ ಸಂಗಪ್ಪ

ಮಾರ್ಚ್ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮಾ.28 :  ಉನ್ನತ ಗುಣಮಟ್ಟದ ಶಿಕ್ಷಣವನ್ನು  ಪ್ರತಿಯೊಬ್ಬರಿಗೆ ನೀಡುವ ಉದ್ದೇಶದೊಂದಿಗೆ ರಾಜ್ಯದಲ್ಲಿ 9 ನೂತನ ವಿಶ್ವವಿದ್ಯಾಲಯಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಬೆಂಗಳೂರಿನ ಜ್ಞಾನ ಜ್ಯೊತಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನೂತನ ವಿಶ್ವವಿದ್ಯಾಯಾಲಯಗಳಿಗೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು.

ಅಭಿವೃದ್ಧಿ ಮತ್ತು ಕೌಶಲ್ಯ ಆಧಾರಿತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಹೆಚ್ಚುವರಿ ವಿಶ್ವ ವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಮಾತನಾಡಿದ ಉನ್ನತ ಶಿಕ್ಷಣ ಸಚಿವ  ಡಾ. ಸಿಎನ್ ಅಶ್ವಥ್ ನಾರಾಯಣ್ , ಪ್ರತಿ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ಸ್ಥಾಪನೆ ಸರಕಾರದ ಚಿಂತನೆಯಾಗಿದ್ದು, ಶೈಕ್ಷಣಿಕ ಅಸಮತೋಲನ ನಿರ್ಮೂಲನೆ ಮಾಡುವುದು ಸರಕಾರದ ಉದ್ದೇಶವಾಗಿದೆ ಎಂದರು.

ಈ ಮೂಲಕ ಕೊಡಗು ಜಿಲ್ಲೆಯ ಬಹುಕಾಲದ ಕನಸಾದ ಕೊಡಗು ವಿಶ್ವವಿದ್ಯಾಲಯದ ಸರ್ವತೋಮುಖ ಶೈಕ್ಷಣಿಕ ಅಭಿವೃದ್ದಿಗೆ ಶುಭ ಹರಸಿದರು.

ಇದೇ ಸಂದರ್ಭ ಅಳುವಾರ ಕೊಡಗು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನೂತನ ಕುಲಪತಿಗಳಾದ ಪ್ರೋ ಅಶೋಕ ಸಂಗಪ್ಪ ಆಲೂರ  ಮಾತನಾಡಿ, ಕೊಡಗು ವಿಶ್ವವಿದ್ಯಾಲಯವನ್ನು ಮಾದರಿ ವಿಶ್ವವಿದ್ಯಾಲಯವನ್ನಾಗಿ ಮಾಡುವ ಭರವಸೆ ವ್ಯಕ್ತಪಡಿಸಿದರು.

ಶಿಕ್ಷಣದಲ್ಲಿ ಹೆಚ್ಚಿನ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು, ಸರಕಾರದ ಸಹಾಯ ಮತ್ತು ಜನಪ್ರತಿನಿಧಿಗಳ ನೆರವಿನೊಂದಿಗೆ ಮೂಲಸೌಕರ್ಯವನ್ನು ಅಭಿವೃದ್ಧಿ ಪಡಿಸುವ  ಭರವಸೆ ವ್ಯಕ್ತಪಡಿಸಿದರು.

ಸಂಸ್ಥೆಯಲ್ಲಿ ಹೆಚ್ಚಿನ ಸಂಶೋಧನೆಯನ್ನು ಮಾಡಲು ಸರಕಾರದ ಅನುದಾನ ಪಡೆಯುವುದು, ಸಂಘ ಸಂಸ್ಥೆಗಳ ಸಹಾಯ ಪಡೆಯುವ ಮೂಲಕ ವಿಶ್ವವಿದ್ಯಾಲಯದ ಉನ್ನತೀಕರಣ ಸಾದ್ಯ ಎಂದರು. ಸಮಯದ ಪರಿಪಾಲನೆ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು. 

ತನ್ನ ಅಧಿಕಾರ ಅವಧಿಯಲ್ಲಿ ಯಾವುದೇ ರೀತಿಯ ಬೇದಭಾವ ಮಾಡದೆ ಎಲ್ಲರೂ ಒಂದೇ ಎಂದು ಜವಾಬ್ದಾರಿ ನಿಭಾಯಿಸುವುದಾಗಿ ಹೇಳಿದರು.

ಸ್ನಾತಕೋತ್ತರ ಕೇಂದ್ರದ ನಿರ್ದೆಶಕರಾಗಿದ್ದ ಪ್ರೋ ಧರ್ಮಪ್ಪ  ಮಾತನಾಡಿ, ಹಲವು ವರ್ಷಗಳಿಂದ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ ಸರ್ವರಿಗೂ ಕೃತಜ್ಷತೆ ಸಲ್ಲಿಸಿದರು.

ಇದೇ ಸಂದರ್ಭ ನೂತನ ಕುಲಪತಿಗಳಿಗೆ ತೊರೆನೂರು ಗ್ರಾಮ ಪಂಚಾಯಿತಿ ಜನಪ್ರತಿನಿದಿಗಳು ಅಭಿನಂದನೆ ಸಲ್ಲಿಸಿದರು.
ಸಮಾರಂಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಕೊಡಗು ವಿಶ್ವವಿದ್ಯಾಲಯ ಕಾಲೇಜುಗಳ ಮುಖ್ಯಸ್ಥರು ಉಪನ್ಯಾಸಕ ವರ್ಗ, ಆಡಳಿತ ವರ್ಗ ಉಪಸ್ಥಿತರಿದ್ದರು.

ಇದೇ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಕೊಡಗು ವಿಶ್ವವಿದ್ಯಾಲಯದ ನೂತನ ಕುಲಪತಿಗಳಾದ ಪ್ರೋ. ಅಶೋಕ್ ಸಂಗಪ್ಪ ಆಲೂರ ಅವರು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾಲೇಜು ಸೇರಿದಂತೆ ಮಂಗಳೂರು ವಿಶ್ವವಿದ್ಯಾಲದ 24 ಕಾಲೇಜುಗಳು, ಮೈಸೂರು ವಿಶ್ವವಿದ್ಯಾಲಯದ 10 ಕಾಲೇಜುಗಳು ಕೊಡಗು ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳಿಸುವ ಪ್ರಸ್ತಾವನೆಯಿದೆ ಎಂದು ಮಾಹಿತಿ ನೀಡಿದರು.

ಸರ್ಕಾರ ನೂತನ ವಿಶ್ವವಿದ್ಯಾಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ಮೂಲಕ ಎಲ್ಲಾ ಸಹಕಾರ ನೀಡಲಿದೆ.  ಸಂಶೋದನೆಗೆ ಬಾಹ್ಯ ಮೂಲಗಳಿಂದ ಹೆಚ್ಚಿನ ಸಹಾಯ ಪಡೆಯುವ ಆಶಯ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದ ಮತ್ತು ಬಡ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವುದು ವಿದ್ಯಾಲಯದ ಪ್ರಥಮ ಆದ್ಯತೆ ಮತ್ತು ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಶ್ರಮಿಸುವುದಾಗಿ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲಿಬೆಟ್ಟ, NEWS DESK ಸೆ.21: ಶ್ರೀ ಗೌರಿ-ಗಣೇಶೋತ್ಸವದ ಪ್ರಯುಕ್ತ 36ನೇ ವರ್ಷದ ಕಾವೇರಿ ಗಣೇಶೋತ್ಸವ ಸಮಿತಿಯ ವತಿಯಿಂದ ಸೆಪ್ಟೆಂಬರ್ 18ರಂದು…

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.