Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*2.60 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*2.60 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹ*

ಮಾರ್ಚ್ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.28 : ಜನ ಕಲ್ಯಾಣಕ್ಕಾಗಿ ಹತ್ತು ಹಲ ಕಾರ್ಯಕ್ರಮಗಳನ್ನು ರೂಪಿಸುವ ಸರ್ಕಾರ, ಇವುಗಳ ಅನುಷ್ಠಾನಕ್ಕೆ ಪೂರಕವಾಗಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.60 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಕೇಂದ್ರ ಸಮಿತಿಯ ರಾಜ್ಯಾಧ್ಯಕ್ಷ ಡಿ.ಶಿವಶಂಕರ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಮಂಜೂರಾತಿಯ 7.73 ಲಕ್ಷ ಹುದ್ದೆಗಳಿವೆ. ಇದರಲ್ಲಿ 5.20 ಲಕ್ಷ ಹುದ್ದೆಗಳು ಭರ್ತಿಯಾಗಿವೆ. ಸುಮಾರು 80 ಸಾವಿರ ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು 25 ಸಾವಿರ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಮುಖವಾಗಿ ಸರ್ಕಾರದ ಯೋಜನೆಗಳ ಅನುಷ್ಟಾನ ಕಾರ್ಯಕ್ಕೆ ಇವರುಗಳ ಅಗತ್ಯತೆ ಹೆಚ್ಚಾಗಿದೆ. ಹೀಗಿದ್ದೂ, ಪ್ರಸ್ತುತ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆಯೇ ಹೊರತು, ಅವುಗಳ ಅನುಷ್ಟಾನಕ್ಕೆ ಪೂರಕವಾಗಿ ಖಾಲಿ ಹುದ್ದೆಗಳ ಭರ್ತಿಯಾಗುತ್ತಿಲ್ಲವೆಂದು ಟೀಕಿಸಿದರು.
ರಾಜ್ಯದ ವಿವಿಧ ಇಲಾಖೆಗಳಲ್ಲಿ 2001 ರಿಂದಲೇ 20 ಸಾವಿರಕ್ಕೂ ಹೆಚ್ಚಿನ ‘ಬ್ಯಾಕ್ ಲಾಗ್’ ಹುದ್ದೆಗಳು ಭರ್ತಿಯಾಗದೆ ಹಾಗೆಯೇ ಉಳಿದಿದೆ. ಇಂದು ಖಾಲಿ ಇರುವ ಹುದ್ದೆಗಳ ಭರ್ತಿಗೆ ಬದಲಾಗಿ ಹೊರ ಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಂಡು ಅವರನ್ನು ಶೋಷಣೆಗೆ ಒಳಪಡಿಸಲಾಗುತ್ತಿದೆಯೆಂದು ಆರೋಪಿಸಿದ ಶಿವಶಂಕರ, ಹೊರ ಗುತ್ತಿಗೆ ನೌಕರರನ್ನು ಖಾಯಂ ಗೊಳಿಸಬೇಕೆಂದು ಒತ್ತಾಯಿಸಿದರು.
ಜೇಷ್ಠತಾ ಪಟ್ಟಿಗೆ ಒತ್ತಾಯ- ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರು ಮುಂಬಡ್ತಿ ಇಲ್ಲದೆ ಶೋಷಣೆೆಗೆ ಒಳಗಾಗಿದ್ದಾರೆ. ಯಾವುದೇ ಇಲಾಖೆಯಲ್ಲಿ ನೌಕರರ ಜೇಷ್ಠತಾ ಪಟ್ಟಿ ಇಲ್ಲದಿರುವುದು ಮುಂಬಡ್ತಿಗೆ ತೊಡಕನ್ನುಂಟು ಮಾಡುತ್ತಿದೆಯೆಂದು ಆರೋಪಿಸಿ, ತಕ್ಷಣ ಎಲ್ಲಾ ಇಲಾಖೆಗಳಲ್ಲು ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿ ಮುಂಬಡ್ತಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಗೌರವ ನೀಡುವಲ್ಲಿ ಜಾತಿ ಅಡ್ಡ- ಪ್ರಸ್ತುತ ರಾಜ್ಯದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸುವ ಯೋಗ್ಯತೆ, ಪ್ರತಿಭೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದಲ್ಲಿ ಇದ್ದಾರೆ. ಹೀಗಿದ್ದೂ ಅಂತಹ ಹುದ್ದೆಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವಲ್ಲಿ ಜಾತಿ ಕೆಲಸ ಮಾಡುವ ಮೂಲಕ ಅವರಿಗೆ ದೊರಕದಂತೆ ಮಾಡುತ್ತಿದೆ. ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಚಂದ್ರಕಾಂತ್ ಎಂಬ ಪ್ರಾಮಾಣಿಕ, ಅಣುಭವಿ ಇದ್ದರು ಆ ಹುದ್ದೆಯಿಂದ ಅವರನ್ನು ವಂಚಿಸಲಾಗಿದೆಯೆoದು ಶಿವಶಂಕರ ಅವರು ಆರೋಪಿಸಿದರು.
ಮೂಗಿಗೆ ತುಪ್ಪ ಸವರಿದ ಸರ್ಕಾರ- ಮೀಸಲಾತಿಗಾಗಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳು ಸುದೀರ್ಘ ಧರಣಿ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೇ.17 ರ ಮೀಸಲಾತಿಗೆ ಮತ್ತೆ ಶೇ.7 ರಷ್ಟು ಮೀಸಲಾತಿ ಸೇರಿಸುವುದಾಗಿ ತಿಳಿಸಿ ಮೂಗಿಗೆ ತುಪ್ಪ ಸವರಿದೆ. ಮೀಸಲಾತಿಯ ಹೆಚ್ಚಳದ ಬಗ್ಗೆ ಲೋಕಸಭೆಯಲ್ಲಿ ಚರ್ಚಿತವಾಗಿ ರಾಷ್ಟ್ರಪತಿಗಳ ಅಂಕಿತ ಬೀಳುವುದು ಅವಶ್ಯ. ಆದರೆ, ರಾಜ್ಯ ಸರ್ಕಾರ ಇಂತಹ ಪ್ರಸ್ತಾವನೆಯನ್ನೆ ಕೇಂದ್ರಕ್ಕೆ ಕಳುಹಿಸಿಲ್ಲವೆಂದು ಗಂಭಿರ ಆರೋಪ ಮಾಡಿದರು.
ಸರ್ಕಾರಿ ನೌಕರರ ಬೇಡಿಕೆಯಂತೆ ಎನ್‌ಪಿಎಸ್ ಪಿಂಚಣಿ ಯೋಜನೆಯ ಬದಲು ಹಳೆಯ ಪಿಂಚಣಿ ಯೋಜನೆಯನ್ನೆ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದರು.
ನೂತನ ಸಮಿತಿ- ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಕೊಡಗು ಜಿಲ್ಲಾ ಘಟಕವನ್ನು ಮರು ರಚಿಸಲಾಗಿದ್ದು, ಅಧ್ಯಕ್ಷರಾಗಿ ಎಂ.ಎಸ್.ಮಹೇoದ್ರ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಸ.ಚಂದ್ರಮೌಳಿ, ಕೋಶಾಧ್ಯಕ್ಷರಾಗಿ ಜಿ. ಮಂಜುನಾಥ್, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾಗಿ ನಂದೀಶ್ ಕುಮಾರ್, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಟಿ.ಎಸ್.ಮಹೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಎಂ.ಎನ್. ಜನಾರ್ಧನ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಬಿ.ಎಸ್. ದಿನೇಶ್ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಎಸ್.ಕೆ. ರಾಣಿ ಅವರು ಕಾರ್ಯನಿರ್ವಹಿಸಲಿದ್ದಾರೆಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಕೆಂಪ ಸಿದ್ದಯ್ಯ, ಪದಾಧಿಕಾರಿಗಳಾದ ಸಿದ್ದರಾಜು, ಅರುಣ್, ಸತೀಶ್ ಹಾಗೂ ಮುತ್ತಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*

ಏಪ್ರಿಲ್ 19, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.18 NEWS DESK :  ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗುವಲ್ಲಿ ಯುಕೊ ಸಂಘಟನೆಯ ಪಾತ್ರವನ್ನು ಪರಿಗಣಿಸಿ ಪೊನ್ನಂಪೇಟೆಯ ವಸಂತನಗರದ…

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.