Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚುನಾವಣೆ ನೀತಿ ಸಂಹಿತೆ ಜಾರಿ : ಚುನಾವಣಾ ಆಯೋಗದ ನಿರ್ದೇಶನವನ್ನು ಎಲ್ಲರೂ ಪಾಲಿಸಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚುನಾವಣೆ ನೀತಿ ಸಂಹಿತೆ ಜಾರಿ : ಚುನಾವಣಾ ಆಯೋಗದ ನಿರ್ದೇಶನವನ್ನು ಎಲ್ಲರೂ ಪಾಲಿಸಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್*

ಮಾರ್ಚ್ 29, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.29 : ಭಾರತ ಚುನಾವಣಾ ಆಯೋಗವು ವಿಧಾನಸಭಾ ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದು, ಆ ನಿಟ್ಟಿನಲ್ಲಿ ಮಾರ್ಚ್, 29 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ವಿಧಾನಸಭಾ ಚುನಾವಣೆಯು ಮೇ, 10 ರಂದು ಮತದಾನ ನಡೆಯಲಿದೆ. ಮೇ, 13 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಏಪ್ರಿಲ್, 13 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏಪ್ರಿಲ್, 20 ಕೊನೆಯ ದಿನವಾಗಿದೆ. ಏಪ್ರಿಲ್, 21 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಏಪ್ರಿಲ್, 24 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ವಿವಿಧ ತಂಡಗಳನ್ನು ನೇಮಕ ಮಾಡಲಾಗಿದೆ. ಎಂಸಿಸಿ ಇಬ್ಬರು ನೋಡಲ್ ಅಧಿಕಾರಿಗಳು, 41 ಸೆಕ್ಟರ್ ಅಧಿಕಾರಿಗಳು, 14 ಪ್ಲೈಯಿಂಗ್ ಸ್ಕ್ವಾಡ್, 42 ಸ್ಟಾಟಿಕ್ ಸರ್ವೆಲೆನ್ಸ್ ತಂಡ ರಚಿಸಲಾಗಿದೆ ಎಂದು ಡಾ.ಬಿ.ಸಿ.ಸತೀಶ ಅವರು ವಿವರಿಸಿದರು.
ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ 40 ಲಕ್ಷ ರೂ. ವರೆಗೆ ಖರ್ಚು ಮಾಡಬಹುದಾಗಿದೆ. ಈ ಹಿನ್ನೆಲೆ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾ ವಹಿಸಲು ವಿವಿಧ ವೆಚ್ಚ ತಂಡಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಬ್ಬರಂತೆ ಇಬ್ಬರು ಸಹಾಯಕ ವೆಚ್ಚ ವೀಕ್ಷಕರು, ಇಬ್ಬರು ಲೆಕ್ಕ ತಂಡದವರು, ನಾಲ್ಕು ಮಂದಿ ವೀಡಿಯೋ ಸರ್ವಿಲೆನ್ಸ್ ತಂಡ, ಹಾಗೆಯೇ ಇಬ್ಬರು ವಿಡಿಯೋ ವಿವಿಂಗ್ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಒಬ್ಬ ವ್ಯಕ್ತಿ 50 ಸಾವಿರ ಮೊತ್ತ ತೆಗೆದುಕೊಂಡು ತೆರಳಬಹುದು. ಆದರೆ ಪೂರಕ ದಾಖಲೆ ಇಟ್ಟುಕೊಂಡಿರಬೇಕು. ತಪ್ಪಿದ್ದಲ್ಲಿ ತಪಾಸಣಾ ಅವಧಿಯಲ್ಲಿ ಮುಟ್ಟುಗೋಲು ಹಾಕಲಾಗುತ್ತದೆ ಎಚ್ಚರಿಸಿದರು.
50 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ದಾಖಲೆಯೊಂದಿಗೆ ಇಟ್ಟುಕೊಂಡು ತೆರಳಿದ ಸಂದರ್ಭ ತಪಾಸಣಾ ಅವಧಿಯಲ್ಲಿ ಅನುಮಾನಾಸ್ಪದವಾಗಿ ಕಂಡುಬಂದಲ್ಲಿ ಮೊತ್ತವನ್ನು ಮುಟ್ಟುಗೋಲು ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
ವಾಹನಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ನಗದು ಇರುವುದು ತಪಾಸಣಾ ಅವಧಿಯಲ್ಲಿ ಕಂಡುಬಂದಲ್ಲಿ ಈ ಮೊತ್ತವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಲಾಗುವುದು. ವಾಹನಗಳಲ್ಲಿ ಅನುಮಾನಾಸ್ಪದ ಸಾಮಗ್ರಿಗಳಾದ ಗೃಹ ಉಪಯೋಗಿ ವಸ್ತುಗಳು, ಮದ್ಯ, ಮಾದಕ ದ್ರವ್ಯಗಳು ಮತ್ತು ಆಯುಧಗಳನ್ನು ಸಾಗಿಸುವುದು ತಪಾಸಣಾ ಅವಧಿಯಲ್ಲಿ ಕಂಡುಬಂದಲ್ಲಿ ಈ ವಸ್ತುಗಳನ್ನು ಮುಟ್ಟುಗೋಲು ಮಾಡಲಾಗುವುದು ಎಂದು ಡಾ.ಬಿ.ಸಿ.ಸತೀಶ ಅವರು ನುಡಿದರು.
ಜಿಲ್ಲೆಯಲ್ಲಿ ಒಟ್ಟು 542 ಮತಗಟ್ಟೆಗಳಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 269 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳು ಇವೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಒಟ್ಟು 4,52,642 ಮತದಾರರಿದ್ದು, 4,51,216 ಸಾಮಾನ್ಯ ಮತದಾರರು ಮತ್ತು 1,426 ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,30,359 ಮತದಾರರು ಇದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 2,22,283 ಮಂದಿ ಮತದಾರರಿದ್ದಾರೆ ಎಂದರು.
ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್‍ರಾದ ಕಿರಣ್ ಜಿ.ಗೌರಯ್ಯ (ಮಡಿಕೇರಿ), ಎಸ್.ಎನ್.ನರಗುಂದ(ಸೋಮವಾರಪೇಟೆ), ಟಿ.ಎಂ.ಪ್ರಕಾಶ್(ಕುಶಾಲನಗರ), ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದರು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಸಹಾಯಕ ಚುನಾವಣಾಧಿಕಾರಿಯಾಗಿ ಕಿರಣ್ ಜಿ.ಗೌರಯ್ಯ(ಮಡಿಕೇರಿ), ಎಚ್.ಎನ್.ರಾಮಚಂದ್ರ(ವಿರಾಜಪೇಟೆ), ಎಸ್.ಎನ್.ಪ್ರಶಾಂತ್(ಪೊನ್ನಂಪೇಟೆ) ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಮತದಾರರ ಸಹಾಯವಾಣಿ: ಚುನಾವಣೆಯ ಅಕ್ರಮಗಳ ಬಗ್ಗೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿರುವ ಬಗ್ಗೆ, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯಲು ಹಾಗೂ ಇತರೆ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕರೆ ಮಾಡಬಹುದಾಗಿದೆ. ವೋಟರ್ ಸಹಾಯವಾಣಿಯು 24*7 ಕಾರ್ಯನಿರ್ವಹಿಸುವುದು. (ಹೊರ ಜಿಲ್ಲೆಯಿಂದ ಕರೆ ಮಾಡುವವರು 08272-1950ಗೆ ಕರೆ ಮಾಡುವುದು) ಎಂದರು.
ವಿವಿಧ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಬಗ್ಗೆ. ನಿಶ್ಚಿತಾರ್ಥ, ಮದುವೆ, ನಾಮಕರಣ ಮತ್ತಿತರ ಖಾಸಗಿ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇಲ್ಲ, ಆದರೆ ಈ ಸಮಾರಂಭಗಳು ರಾಜಕೀಯ ಪ್ರೇರಿತವಾಗಿರಬಾರದು ಮತ್ತು ಯಾವುದೇ ಪಕ್ಷದ ಪ್ರಚಾರಕ್ಕೆ ವೇದಿಕೆಯಾಗಿರಬಾರದು. ಮೆರವಣಿಗೆ, ವಾರ್ಷಿಕೋತ್ಸವ, ಜಾತ್ರೆ, ಸಾಮೂಹಿಕ ವಿವಾಹ ಮತ್ತಿತರ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ಸಂಬಂಧಿಸಿದ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಅನುಮತಿ ಕಡ್ಡಾಯವಾಗಿದೆ. ಚುನಾವಣಾಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು 24 ಗಂಟೆಯೊಳಗೆ ಅನುಮತಿ ನೀಡಲಿದ್ದಾರೆ ಎಂದರು.
ಸಿ-ವಿಜಿಲ್: ಭಾರತ ಚುನಾವಣಾ ಆಯೋಗವು c-Vigil ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಅನುಷ್ಠಾನಗೊಳಿಸುತ್ತಿದೆ. ಈ ಅಪ್ಲಿಕೇಷನ್‍ನ್ನು ಗೂಗಲ್ ಪ್ಲೇ ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು, ಚುನಾವಣೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಣ, ಗೃಹ ಬಳಕೆ ಸಾಮಗ್ರಿಗಳನ್ನು, ಮದ್ಯವನ್ನು ಹಂಚಿಕೆ ಮಾಡುವ ಬಗ್ಗೆ ಹಾಗೂ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಅಪ್ಲಿಕೇಷನ್‍ನಲ್ಲಿ ವಿಡಿಯೋ ಮತ್ತು ಪೋಟೊಗಳ ಮೂಲಕ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಜಿಲ್ಲೆಯ 151 ಹಾಡಿಗಳಿಗೆ ಎರಡು ಬಾರಿ ಭೇಟಿ ನೀಡಿ ಸುಮಾರು 1002 ಮಂದಿ ಆದಿವಾಸಿಗಳ ಹೆಸರನ್ನು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಕ್ರಮವಹಿಸಲಾಗಿದೆ ಎಂದು ವಿವರಿಸಿದರು.
ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸಾರ್ವಜನಿಕ/ ಖಾಸಗಿ ಸ್ಥಳಗಳಲ್ಲಿ ಅಳವಡಿಸಲಾಗಿರುವ ಹೆದ್ದಾರಿ ಫಲಕಗಳ ಪ್ರಚಾರದ ಮಾಹಿತಿಯನ್ನು ತೆರವುಗೊಳಿಸಲು ಕ್ರಮವಹಿಸಲಾಗಿದೆ ಎಂದರು.
‘ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟ/ ಪ್ರಸಾರ ಸಂಬಂಧ ಪೂರ್ವಾನುಮತಿ ಪಡೆಯಬೇಕಿದ್ದು, ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದ ಮೂರನೇ ಮಹಡಿಯಲ್ಲಿ ‘ಎಂಸಿಎಂಸಿ’ ಕಚೇರಿ ಆರಂಭಿಸಲಾಗಿದ್ದು, ಪೂರ್ವಾನುಮತಿ ಪಡೆಯಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಚುನಾವಣೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ www.eci.nic.in  ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ www.ceokarnataka.kar.nic.in  ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್‍ಸೈಟ್: www.kodagu.nic.in ನಲ್ಲಿ ಮಾಹಿತಿಯನ್ನು ಪಡೆಯಬಹುದು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಕುಟ್ಟ, ಮಾಕುಟ,್ಟ ಕರಿಕೆ ಸೇರಿ 3 ಅಂತರ ರಾಜ್ಯ ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದೆ. ಹಾಗೆಯೇ 11 ಅಂತರ್ ಜಿಲ್ಲಾ ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗಿದೆ ಎಂದರು.
ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋ ಬಸ್ತ್ ನಿಯೋಜಿಸಲಾಗುತ್ತದೆ. ಶಾಂತಿಯುತ ಚುನಾವಣೆಗೆ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಕ್ರಮವಹಿಸಲಾಗಿದೆ ಎಂದರು.
ಸ್ವೀಪ್ ಹಾಗೂ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ.ಎಸ್.ಆಕಾಶ್ ಅವರು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಶಿಕ್ಷಣ ಮತ್ತು ಜಾಗೃತಿ ಸಮಿತಿ ವತಿಯಿಂದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಡಿಮೆ ಮತದಾನವಾಗಿದ್ದ 65 ಮತಗಟ್ಟೆಗಳಲ್ಲಿ ಹೆಚ್ಚಿನ ಮತದಾನಕ್ಕೆ ಶ್ರಮಿಸಲಾಗಿದೆ. ವೋಟರ್ ಹೆಲ್ಫ್‍ಲೈನ್ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಅಬಕಾರಿ ಇಲಾಖೆಯ ಜಿಲ್ಲಾ ಆಯುಕ್ತರಾದ ಜಗದೀಶ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.