Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ*
ಇತ್ತೀಚಿನ ಸುದ್ದಿಗಳು

*ಕೊಡಗು : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ*

March 30, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.30 : ಕೊಡಗು ಜಿಲ್ಲೆಯಲ್ಲಿ ಮಾರ್ಚ್, 31 ರಿಂದ ಏಪ್ರಿಲ್, 15 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರ ಸೇರಿದಂತೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.
ಎಸ್‍ಎಸ್‍ಎಲ್‍ಸಿ  ಪರೀಕ್ಷಾ ಕೇಂದ್ರಗಳ ವಿವರ:- ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲ್ಲರ ಪ್ರೌಢ ಶಾಲೆ, ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆ, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಮೂರ್ನಾಡು, ಸಿದ್ದಾಪುರ, ಸಂಪಾಜೆ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢ ಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಓ.ಎಲ್.ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕುಶಾಲನಗರ ಫಾತಿಮಾ ಕಾನ್ವೆಂಟ್ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು ಮತ್ತು ಸೆಕ್ರೆಡ್ ಹಾರ್ಟ್ ಪ್ರೌಢಶಾಲೆ, ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸಂತ ಮೇರೀಸ್ ಪ್ರೌಢ ಶಾಲೆ, ಹೆಬ್ಬಾಲೆ ಮತ್ತು ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ನೆಲ್ಲಿಹುದಿಕೇರಿ ಸರ್ಕಾರಿ ಪ್ರೌಢ ಶಾಲೆ, ಕೂಡಿಗೆ ಅಂಜೆಲಾ ವಿದ್ಯಾನಿಕೇತನ, ಬಳಗುಂದ ಸಂತ ಜೋಸೇಫರ ಪ್ರೌಢ ಶಾಲೆ, ಆಲೂರು ಸಿದ್ದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ), ಮಾದಾಪುರ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಸ.ಪ.ಪೂ.ಕಾಲೇಜು ಮತ್ತು ಸಂತ ಅನ್ನಮ್ಮ ಪ್ರೌಢ ಶಾಲೆ, ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ, ಗೋಣಿಕೊಪ್ಪ ಸರ್ಕಾರಿ ಪ್ರೌಢ ಶಾಲೆ, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಪಾಲಿಬೆಟ್ಟ ಮತ್ತು ತಿತಿಮತಿ ಸರ್ಕಾರಿ ಪ್ರೌಢ ಶಾಲೆ ಹಾಗೂ ಗೋಣಿಕೊಪ್ಪಲು ಪ್ರೌಢ ಶಾಲೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷೆ ಆರಂಭದ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಕ್ತಾಯದ ಒಂದು ಗಂಟೆ ನಂತರದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಏ.9ರಂದು ಉದ್ಭವಃ ಉತ್ಸವ: ಹಳ್ಳಿಗಾಡಿನ ಆಟಗಳು ಮತ್ತು ಸಾಂಪ್ರದಾಯಿಕ ಕಲೆಗಳ ಪರಿಪೂರ್ಣ ಅನುಭವ*
Next Article *ಚುನಾವಣಾ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸುವಂತಿಲ್ಲ*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.