ಮಡಿಕೇರಿ ಏ.3 : ಕುಶಾಲನಗರದ ಸರ್ಕಾರಿ ಶಾಲೆಯಲ್ಲಿ ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದ ಮೂಲಕ ಕಂಪ್ಯೂಟರ್ ಕೊಠಡಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸರ್ಕಾರಿ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿ ಇಲ್ಲದೇ ಸಮಸ್ಯೆ ಎದುರಿಸುತ್ತಿದ್ದ ವಿದ್ಯಾರ್ಥಿಗಳು ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದಲ್ಲಿ ಶಾಲೆ ಕೊಠಡಿಯ ಸಮಸ್ಯೆ ಬಗ್ಗೆ ಹೇಳಿಕೊಂಡಿ ಹೇಳಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಹೆಚ್.ಆರ್.ರಂಗನಾಥ್ ಪಬ್ಲಿಕ್ ಟಿವಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.
ಅದರಂತೆ ಇಂದು ಕುಶಾಲನಗರದಲ್ಲಿ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಮಲ್ಲಿಕಾರ್ಜುನ್, ಸೋಮವಾರಪೇಟೆ ತಾಲೂಕಿನ ಬಿಈಓ ಸುರೇಶ್ ರೂ. 8 ಲಕ್ಷ ವೆಚ್ಚದ ನೂತನ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿದರು.
ಪಬ್ಲಿಕ್ ಟಿವಿ ಕಾರ್ಯಕ್ಕೆ ಕುಶಾಲನಗರ ಜನರ ಹರ್ಷ ವ್ಯಕ್ತಪಡಿಸಿದ್ದಾರೆ.

















