Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಅಪ್ಪಚೆಟ್ಟೋಳಂಡ ಹಾಕಿ ಉತ್ಸವ’ : ಏ.9 ರಂದು ಅಂತಿಮ ಪಂದ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಅಪ್ಪಚೆಟ್ಟೋಳಂಡ ಹಾಕಿ ಉತ್ಸವ’ : ಏ.9 ರಂದು ಅಂತಿಮ ಪಂದ್ಯ*

ಏಪ್ರಿಲ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.6 :  ನಾಪೋಕ್ಲುವಿನಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ‘ಅಪ್ಪಚೆಟ್ಟೋಳಂಡ ಹಾಕಿ ಉತ್ಸವ’ ಕೊನೆಯ ಘಟ್ಟವನ್ನು ಪ್ರವೇಶಿಸುತ್ತಿದ್ದು, ಪಂದ್ಯಾವಳಿಯ ಸೆಮಿ ಫೈನಲ್ಸ್ ಏ.7 (ಇಂದು) ಮತ್ತು ಅಂತಿಮ ಪಂದ್ಯ ಏ.9 ರಂದು ನಡೆಯಲಿದೆಯೆಂದು ಪಂದ್ಯಾವಳಿ ಆಯೋಜನಾ ಸಮಿತಿಯ ಸಂಚಾಲಕ  ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಇಪ್ಪತ್ತು ದಿನಗಳಿಂದ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ನೋಂದಾಯಿಸಿಕೊಂಡ 336 ತಂಡಗಳ ಪೈಕಿ 329 ತಂಡಗಳು ಪಾಲ್ಗೊಂಡಿದ್ದು, ವಿವಿಧ ಕುಟುಂಬಗಳ 5 ಸಾವಿರ ಆಟಗಾರರು ಪಾಲ್ಗೊಂಡಿದ್ದಾರೆ. ಇಲ್ಲಿಯವರೆಗೆ ಒಟ್ಟು 957 ಗೋಲುಗಳು ವಿವಿಧ ಪಂದ್ಯಗಳಲ್ಲಿ ದಾಖಲಾಗಿದೆ. 49 ಪಂದ್ಯಗಳಲ್ಲಿ ವಿಜೇತ ತಂಡಗಳನ್ನು ಟೈಬ್ರೇಕರ್ ಮೂಲಕ ನಿರ್ಧರಿಸಲಾಗಿದೆ. ಒರಟಾಟಕ್ಕಾಗಿ 67 ಹಸಿರು, 11 ಹಳದಿ ಕಾರ್ಡ್‍ಗಳನ್ನು ತೋರಿಸಲಾಗಿದೆ. ತಾಂತ್ರಿಕ ತಂಡದಲ್ಲಿ 27 ಮಂದಿ ಕಾರ್ಯನಿರ್ವಹಿಸುತ್ತಿರುವುದಾಗಿ ಮಾಹಿತಿಯನ್ನಿತ್ತರು.

ಯುವಕರನ್ನು ನಾಚಿಸಿದ ವೃದ್ಧರು- ಪಂದ್ಯಾವಳಿಯಲ್ಲಿ ನಾಪನೆರವಂಡ ಕುಟುಂಬ ತಂಡದಲ್ಲಿ 87ರ ಪ್ರಾಯದ ಪೊನ್ನಪ್ಪ, ಚೀಯಕಪೂವಂಡ ತಂಡದಲ್ಲಿ 84 ರ ಪ್ರಾಯದ ಉತ್ತಪ್ಪ ಅವರು ಪಾಲ್ಗೊಂಡು ಯುವಕರನ್ನು ನಾಚಿಸುವಂತೆ ಆಟವಾಡಿ ಗಮನ ಸೆಳೆದಿದ್ದಾರೆಂದು ಪಂದ್ಯಾವಳಿಯಲ್ಲಿ ಕಂಡು ಬಂದ ಕುತೂಹಲಕಾರಿ ಅಂಶಗಳನ್ನು ತೆರೆದಿಟ್ಟರು.

ಪಂದ್ಯಾವಳಿಯಲ್ಲಿ 3 ರ ಪ್ರಾಯದ ಅಚ್ಚಾಂಡಿರ ತನು ತಿಮ್ಮಯ್ಯ ಪಾಲ್ಗೊಂಡು ಕುತೂಹಲ ಮೂಡಿಸಿದರೆ, ಕೇತಿರ ಕುಟುಂಬ ತಂಡ ಪ್ರಥಮ ಬಾರಿಗೆ ಪಂದ್ಯಾಳಿಯಲ್ಲಿ ಪಾಲ್ಗೊಂಡುದಲ್ಲದೆ, ಈ ತಂಡದ ಅರ್ಧದಷ್ಟು ಅಂದರೆ ಐವರು ಮಹಿಳಾ ಆಟಗಾರರು ಮೈದಾನಕ್ಕಿಳಿದು ಮೊದಲ ಸುತ್ತಿನ ಪಂದ್ಯದಲ್ಲಿ ಗೆಲುವು ಸಾಧಿಸಿದ್ದನ್ನು ಮನು ಮುತ್ತಪ್ಪ ತಿಳಿಸಿ, ಬಾಚಿಮಂಡ ತಂಡದಲ್ಲಿ ತಂದೆ, ತಾಯಿ, ಮಗ, ಮಗನ ಪತ್ನಿ ಹೀಗೆ ಒಂದೇ ಕುಟುಂಬದ ನಾಲ್ವರು ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾಗಿ ತಿಳಿಸಿದರು.

ಇಂದು ಸೆಮಿಫೈನಲ್- ಏ.7 ರಂದು ಪಂದ್ಯಾವಳಿಯ ಮೊದಲ ಸೆಮಿಫೈನಲ್‍ನ್ನು ಭಾರತ ಹಾಕಿ ತಂಡದ ಮಾಜಿ ನಾಯಕ, ಒಲಂಪಿಯನ್ ಮನೆಯಪಂಡ ಸೋಮಯ್ಯ ಉದ್ಘಾಟಿಸಲಿಸಲಿದ್ದಾರೆ. ದ್ವಿತೀಯ ಸೆಮಿಫೈನಲ್ ಪಂದ್ಯವನ್ನು ಅಂತರಾಷ್ಟ್ರೀಯ ಹಾಕಿ ತೀರ್ಪುಗಾರರಾದ ಅಚ್ಚಕಾಳಿರ ಪಳಂಗಪ್ಪ ಮತ್ತು ಅಯ್ಯುಡ ವೇಣು ಉತ್ತಪ್ಪ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭ ಪಾಲೆಕಂಡ ಬೋಪಯ್ಯ, ಪಾ¯ಕಂಡ ಬೆಳ್ಯಪ್ಪ, ಮಾರಮಾಡ ಮಾಚಮ್ಮ ಅವರನ್ನು ಅವರ ಕ್ರೀಡಾ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಗುವುದೆಂದರು.

ಅಂತಿಮ ಪಂದ್ಯ- ಅಂತಿಮ ಪಂದ್ಯ ಏ.9 ರಂದು ನಡೆಯಲಿದ್ದು, ಪಂದ್ಯವನ್ನು ಹಾಕಿ ಉತ್ಸವದ ಸ್ಥಾಪಕ ಪಾಂಡಂಡ ಕುಟ್ಟಪ್ಪ ಅವರ ಪತ್ನಿ ಪಾಂಡಂಡ ಲೀಲಾ ಕುಟ್ಟಪ್ಪ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಏರ್ ಮಾರ್ಷಲ್ ಬಲ್ಟಿಕಾಳಂಡ ಯು.ಚೆಂಗಪ್ಪ, ಗಾರ್ಡನ್ ಸಿಟಿ ಯೂನಿವರ್ಸಿಟಿಯ ಕುಲಪತಿ ಡಾ. ಜೋಸೆಫ್ ವಿ.ಜಿ., ಕೈಗ್ ಸಂಸ್ಥೆಯ ಕುಟ್ಟಂಡ ಸುದಿನ್ ಮಂದಣ್ಣ, ಭಾರತ ಹಾಕಿ ತಂಡದ ಮಾಜಿ ನಾಯಕರುಗಳಾದ ಜಫರ್ ಇಕ್ಬಾಲ್, ಧನರಾಜ್ ಪಿಳ್ಳೆ, ಒಲಂಪಿಯನ್ ಅಂಜಪರವಂಡ ಸುಬ್ಬಯ್ಯ, ಒಲಂಪಿಯನ್ ಚೆಪ್ಪುಡಿರ ಎಸ್ ಪೂಣಚ್ಚ, ಒಲಂಪಿಯನ್ ಎಸ್.ವಿ. ಸುನಿಲ್ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.

ಬಹುಮಾನ- ಪಂದ್ಯಾವಳಿ ವಿಜೇತ ತಂಡಕ್ಕೆ 3 ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ 2 ಲಕ್ಷ ರೂ. ಮತ್ತು ಟ್ರೋಫಿ, ತೃತೀಯ 1.50 ಲಕ್ಷ ನಗದು ಮತ್ತು ಟ್ರೋಫಿ, ನಾಲ್ಕನೇ 50 ಸಾವಿರ ರೂ. ಮತ್ತು ಟ್ರೋಫಿ ನೀಡಲಾಗುವುದೆಂದರು. ಪಂದ್ಯಾವಳಿ ಪುರುಷೋತ್ತಮರಿಗೆ 1 ಲಕ್ಷ , ಅಂತಿಮ ಪಂದ್ಯ ಪುರುಷೋತ್ತಮರಿಗೆ 50 ಸಾವಿರ ನಗದು ಬಹುಮಾನ ನೀಡಲಾಗುತ್ತದೆಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಪಂದ್ಯಾವಳಿ ಆಯೋಜನಾ ಸಮಿತಿಯ ಗೌರವ ಕಾರ್ಯದರ್ಶಿ ಮಿಥುನ್ ಮಾಚಯ್ಯ, ಸದಸ್ಯರುಗಳಾದ ಮನು ಮಾದಪ್ಪ, ಸೋಮಣ್ಣ, ರಾಧಿಕಾ ಮಾದಪ್ಪ, ಶಶಿ ಜನತ್ ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು…

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.