Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಅಪ್ಪಚೆಟ್ಟೋಳಂಡ ಹಾಕಿ ಉತ್ಸವ’ : ಫೈನಲ್‍ ಗೆ ಪ್ರವೇಶಿಸಿದ ಕುಲ್ಲೇಟಿರ ಮತ್ತು ಕುಪ್ಪಂಡ ತಂಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಅಪ್ಪಚೆಟ್ಟೋಳಂಡ ಹಾಕಿ ಉತ್ಸವ’ : ಫೈನಲ್‍ ಗೆ ಪ್ರವೇಶಿಸಿದ ಕುಲ್ಲೇಟಿರ ಮತ್ತು ಕುಪ್ಪಂಡ ತಂಡ*

ಏಪ್ರಿಲ್ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.7 :  ನಾಪೋಕ್ಲುವಿನಲ್ಲಿ ಆಯೋಜಿತ 23ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ನಮ್ಮೆ ‘ಅಪ್ಪಚೆಟ್ಟೋಳಂಡ ಹಾಕಿ ಉತ್ಸವ’ದ ಸೆಮಿಫೈನಲ್‍ಗಳಲ್ಲಿ ವೀರೋಚಿತ ಗೆಲುವು ಸಾಧಿಸಿದ ಕುಲ್ಲೇಟಿರ ಮತ್ತು ಕುಪ್ಪಂಡ (ಕೈಕೇರಿ) ತಂಡಗಳು ಏ.9 ರಂದು ಪ್ರಶಸ್ತಿಗಾಗಿ ಸೆಣಸಲಿವೆ.

ಕಿಕ್ಕಿರಿದು ನೆರೆದ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕುಲ್ಲೇಟಿರ ತಂಡ ಟೈ ಬ್ರೇಕರ್ ಮೂಲಕ ಬಲಿಷ್ಠ ನೆಲ್ಲಮಕ್ಕಡ ತಂಡವನ್ನು 4-3 ಗೋಲುಗಳ ಅಂತರದಿಂದ ಮಣಿಸುವ ಮೂಲಕ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿತು.

ಅತ್ಯಂತ ಕುತೂಹಲಕಾರಿಯಾಗಿ ನಡೆದ ಪಂದ್ಯದ ಮೊದಲಾರ್ಧದ 24 ನೇ ನಿಮಿಷ ಕುಲ್ಲೇಟಿರ ತಂಡಕ್ಕೆ ದೊರೆತ ಪೆನಾಲ್ಟಿ ಕಾರ್ನರ್‍ನ್ನು ತಂಡದ ಯಾಶಿಕ್ ಅವರು ಗೋಲಾಗಿ ಪರಿವರ್ತಿಸಿ ತಂಡಕ್ಕೆ 1-0 ಗೋಲಿನ ಮುನ್ನಡೆಯನ್ನು ದೊರಕಿಸಿಕೊಟ್ಟರು. ದ್ವಿತೀಯಾರ್ಧದ 52ನೇ ನಿಮಿಷ ನೆಲ್ಲಮಕ್ಕಡ ತಂಡದ ಮೊಣ್ಣಪ್ಪ ಅವರು ಸೊಗಸಾದ ಗೋಲು ಬಾರಿಸುವ ಮೂಲಕ ಪಂದ್ಯ 1-1 ಗೋಲಿನಿಂದ ಡ್ರಾಗೊಂಡಿತು.

ನಂತರ ವಿಜೇತ ತಂಡವನ್ನು ನಿರ್ಧರಿಸಲು ನಡೆದ ಟೈಬ್ರೇಕರ್‍ನಲ್ಲಿ ಕುಲ್ಲೇಟಿರ ತಂಡದ ನಾಚಪ್ಪ, ಯತಿನ್, ಚಿಟ್ಟಿಯಪ್ಪ ಅವರು ಗೋಲು ಗಳಿಸಿದರೆ, ನೆಲ್ಲಮಕ್ಕಡ ತಂಡದ ಪರವಾಗಿ ಆಶಿಕ್ ಮತ್ತು ಪೂವಣ್ಣ ಮಾತ್ರ ಗೋಲು ಗಳಿಸಲು ಶಕ್ತವಾಗುವ ಮೂಲಕ ಕುಲ್ಲೇಟಿರ ತಂಡ ರೋಚಕ ಗೆಲುವು ದಾಖಲಿಸಿತು.

ಕುಪ್ಪಂಡ ತಂಡಕ್ಕೆ ಗೆಲುವು- ದ್ವಿತೀಯ ಸೆಮಿಫೈನಲ್‍ನಲ್ಲಿ ಕುಪ್ಪಂಡ (ಕೈಕೇರಿ) ತಂಡವು ಕೊಡವ ಹಾಕಿ ಉತ್ಸವದಲ್ಲಿ ಈ ಹಿಂದೆ ಚಾಂಪಿಯನ್ ಪಟ್ಟಕ್ಕೇರಿರುವ ಬಲಿಷ್ಠ ಪಳಂಗಂಡ ತಂಡಕ್ಕೆ ಸೋಲಿನ ಕಹಿಯುಣಿಸಿ ಫೈನಲ್ ಪ್ರವೇಶಿಸುವ ಮೂಲಕ ಮಹತ್ತರ ಸಾಧನೆ ಮಾಡಿತು. ಕುಪ್ಪಂಡ ತಂಡ ಟೈಬ್ರೇಕರ್ ಮೂಲಕ ಪಳಂಗಂಡ ತಂಡವನ್ನು 4-2 ಗೋಲುಗಳ ಅಂತರದಿಂದ ಸೋಲಿಸಿತು.

ನಿಗದಿತ ಅವಧಿಯಲ್ಲಿ ಇತ್ತಂಡಗಳು ಪ್ರಬಲ ಪೈಪೋಟಿ ನೀಡಿ ಗೋಲಿಗಾಗಿ ಸಾಕಷ್ಟು ಪ್ರಯತ್ನ ನಡೆಸಿದರು, ಅದರಲ್ಲಿ ಯಶ ಕಾಣದೆ ಪಂದ್ಯ ಡ್ರಾನಲ್ಲಿ ಮುಕ್ತಾಯವಾಯಿತು. ವಿಜೇತ ತಂಡವನ್ನು ನಿರ್ಧರಿಸುವ ಟೈಬ್ರೇಕರ್‍ನಲ್ಲಿ ಕುಪ್ಪಂಡ ತಂಡದ ಸೋಮಯ್ಯ, ಜಗತ್, ನಾಚಪ್ಪ ಮತ್ತು ಮಂದಣ್ಣ ಗೋಲು ಗಳಿಸಿದರೆ, ಪಳಂಗಂಡ ಪರವಾಗಿ ಅಜಯ್ ಮತ್ತು ಪ್ರಜ್ವಲ್ ಮಾತ್ರ ಗೋಲು ಗಳಿಸಲು ಶಕ್ತರಾಗುವುದರೊಂದಿಗೆ ಕುಪ್ಪಂಡ ಪೈನಲ್‍ಗೆ ನೆಗೆದೇರಿತು. 3 ಮತ್ತು 4ನೇ ಸ್ಥಾನಕ್ಕಾಗಿ ಭಾನುವಾರ ನೆಲ್ಲಮಕ್ಕಡ ಮತ್ತು ಪಳಂಗಂಡ ತಂಡಗಳ ನಡುವೆ ಪೈಪೋಟಿ ನಡೆಯಲಿದೆ.

ಉದ್ಘಾಟನೆ :  ಕುತೂಹಲಕಾರಿ ಸೆಮಿಫೈನಲ್ ಪಂದ್ಯವನ್ನು ಭಾರತ ಹಾಕಿ ತಂಡದ ಮಾಜಿ ನಾಯಕ ಮನೆಯಪಂಡ ಎಂ. ಸೋಮಯ್ಯ ಉದ್ಘಾಟಿಸಿದರು. ಈ ಸಂದರ್ಭ ಯುಕೋ ಸಂಘಟನೆಯ ಅಧ್ಯಕ್ಷ  ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪೂಮಾಲೆ ಕೊಡವ ಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮೊದಲಾದ ಗಣ್ಯರು ಹಾಜರಿದ್ದರು.

ಸನ್ಮಾನ ; ಸಮಾರಂಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪಾಲೇಕಂಡ ಬೋಪಯ್ಯ, ಪಾಲೇಕಂಡ ಬೆಳ್ಳಿಯಪ್ಪ ಮತ್ತು ಮಾರಮಾಡ ಮಾಚಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಉತ್ಸವ ಸಮಿತಿಯ ಪ್ರಮುಖರಾದ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಪಟ್ಟೆದಾರ ಅಪ್ಪಚೆಟ್ಟೋಳಮಡ ಮಿಟ್ಟು ಈರಪ್ಪ , ಅತಿಥಿ ಗಣ್ಯರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು…

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.