Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಾಣೆ ಜಮೀನಿಗೆ ಕಂದಾಯ ನಿಗದಿ : ಸಂಪೂರ್ಣ ಮಾಹಿತಿ ಒದಗಿಸಿ ಚುನಾವಣೆ ನಂತರ ಪ್ರಕ್ರಿಯೆ ಆರಂಭಿಸಿ : ಸೇವ್ ಕೊಡಗು ವೇದಿಕೆ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಾಣೆ ಜಮೀನಿಗೆ ಕಂದಾಯ ನಿಗದಿ : ಸಂಪೂರ್ಣ ಮಾಹಿತಿ ಒದಗಿಸಿ ಚುನಾವಣೆ ನಂತರ ಪ್ರಕ್ರಿಯೆ ಆರಂಭಿಸಿ : ಸೇವ್ ಕೊಡಗು ವೇದಿಕೆ ಒತ್ತಾಯ*

ಏಪ್ರಿಲ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.10 : ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಬೇಂಗೂರು ಗ್ರಾಮದಲ್ಲಿ ಪ್ರಾಯೋಗಿಕವಾಗಿ ಬಾಣೆ ಜಮೀನುಗಳಿಗೆ ಕಂದಾಯ ನಿಗದಿ ಮಾಡಲು ಸರ್ವೆ ಕಾರ್ಯ ನಡೆಸುವಂತೆ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಹೊರಡಿಸಲಾಗಿರುವ ಆದೇಶಕ್ಕೆ ಸೇವ್ ಕೊಡಗು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪದಾಧಿಕಾರಿ ಕೆ.ಬಿ.ಬೋಪಣ್ಣ, ಜನರನ್ನು ಕತ್ತಲೆಯಲ್ಲಿಟ್ಟು ಸರ್ವೆ ಕಾರ್ಯ ನಡೆಸಿದರೆ ತಡೆಯೊಡ್ಡುವುದಾಗಿ ಎಚ್ಚರಿಕೆ ನೀಡಿದರು.
ಬಾಣೆ ಜಮೀನಿಗೆ ಕಂದಾಯ ನಿಗದಿ ಮಾಡುವ ಕ್ರಮ ಸ್ವಾಗತಾರ್ಹ, ಆದರೆ ಜಿಲ್ಲೆಯ ಜನರಿಗೆ ಯಾವುದೇ ಮಾಹಿತಿಯನ್ನು ನೀಡದೆ ಮತ್ತು ಸರ್ವೆ ಪ್ರಕ್ರಿಯೆ ಬಗ್ಗೆ ವಿವರಿಸದೆ ಏಕಾಏಕಿ ಚುನಾವಣೆ ಸಂದರ್ಭದಲ್ಲಿ ಏ.1 ರಿಂದಲೇ ಸರ್ವೆ ಕಾರ್ಯ ಆರಂಭಿಸಬೇಕೆಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಆದೇಶ ಮಾಡಿರುವುದು ಸರಿಯಲ್ಲ. ಇದರ ಹಿಂದೆ ಡೋಂಗಿ ಪರಿಸರವಾದಿಗಳ ಒತ್ತಡವಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು.
ಕಂದಾಯ ಇಲಾಖೆ ಕಂದಾಯ ಅದಾಲತ್ ನಡೆಸುವ ಮೂಲಕ ಕಂದಾಯ ನಿಗದಿ ಮತ್ತು ಸರ್ವೆ ಕಾರ್ಯದ ಬಗ್ಗೆ ಬಾಣೆ ಜಮೀನು ಹೊಂದಿರುವವರಿಗೆ ಸಂಪೂರ್ಣ ಮಾಹಿತಿ ಒದಗಿಸಬೇಕು. ಸರ್ವೆ ಸಂದರ್ಭ ಸಂಬಂಧಿಸಿದ ಕುಟುಂಬದ ಎಲ್ಲಾ ಸದಸ್ಯರನ್ನು ಆಹ್ವಾನಿಸಬೇಕು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ವೆ ಕಾರ್ಯಕ್ಕೆ ಮುಂದಾದರೆ ತಡೆಯೊಡ್ಡುವುದಾಗಿ ತಿಳಿಸಿದರು.
ಯಾರ ಹೆಸರಿನಲ್ಲಿ ಬಾಣೆ ಜಾಗ ಇದೆಯೋ ಅವರ ಹೆಸರಿನಲ್ಲಿ ಕಂದಾಯ ನಿಗದಿಯಾಗಬೇಕು. ಆದರೆ ಈಗ ಪಟ್ಟೆದಾರನ ಹೆಸರಿಗೆ ಕಂದಾಯ ನಿಗದಿಯಾಗುತ್ತದೆ. ಇದರಿಂದ ಬಾಣೆ ಜಾಗದ ಪಾಲು ಹೊಂದಿರುವ ಕುಟುಂಬದ ಇತರ ಸದಸ್ಯರಿಗೆ ಅನ್ಯಾಯವಾಗುತ್ತದೆ. ಪಟ್ಟೆದಾರ ಒಬ್ಬನ ಹೆಸರಿಗೆ ಮಾತ್ರ ಕಂದಾಯ ನಿಗದಿಯಾದರೆ ದುರುಪಯೋಗವಾಗುವ ಸಾಧ್ಯತೆಗಳೇ ಹೆಚ್ಚು. ಮೊದಲು ಆರ್‌ಟಿಸಿಯಲ್ಲಿ ಕುಟುಂಬದ ಸದಸ್ಯರುಗಳ ಹೆಸರು ಬರುತ್ತಿತ್ತು. ಆದರೆ ಈಗ ಪಟ್ಟೆದಾರನ ಹೆಸರು ಮಾತ್ರ ಬರುತ್ತಿದ್ದು, ಇತರ ಸದಸ್ಯರ ಹೆಸರಿಗೆ ಕಂದಾಯ ನಿಗದಿ ಮಾಡುತ್ತಿಲ್ಲ. ಅಧಿಕಾರಿಗಳು ಯಾರದ್ದೋ ಒತ್ತಡಕ್ಕೆ ಮಣಿದು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕೆ.ಬಿ.ಬೋಪಣ್ಣ ಆರೋಪಿಸಿದರು.
2013 ರಲ್ಲಿ ಬಾಣೆ ಜಾಗಕ್ಕೆ ಕಂದಾಯ ನಿಗದಿ ಮಾಡಲು ರಾಷ್ಟ್ರಪತಿಗಳು ಅಂಕಿತ ಹಾಕಿದರು. ಇಲ್ಲಿಯವರೆಗೆ ಕಂದಾಯ ನಿಗದಿಯಾಗದೆ ಇದ್ದ ಪ್ರಕರಣಕ್ಕೆ ಚುನಾವಣೆ ಸಂದರ್ಭದಲ್ಲಿ ಚಾಲನೆ ನೀಡಿದ ಉದ್ದೇಶವಾದರು ಏನು ಎಂದು ಪ್ರಶ್ನಿಸಿದ ಅವರು, ಸರ್ವಾಧಿಕಾರಿ ಧೋರಣೆಯ ಮೂಲಕ ಜನರನ್ನು ಮೂರ್ಖರನ್ನಾಗಿ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ಭಾಗಮಂಡಲ ಹೋಬಳಿಯ ಬೇಂಗೂರು ಗ್ರಾಮದಲ್ಲಿ ಸರ್ವೆ ಕಾರ್ಯ ನಡೆಸಲು ಉಪವಿಭಾಗಾಧಿಕಾರಿಗಳು ನೀಡಿರುವ ಆದೇಶವನ್ನು ವಾಪಾಸ್ಸು ಪಡೆಯಬೇಕು. ಚುನಾವಣೆ ಕಳೆದ ನಂತರ ಜನರಿಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಿ ಕಂದಾಯ ನಿಗದಿ ಮತ್ತು ಸರ್ವೆ ಕಾರ್ಯ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪದಾಧಿಕಾರಿಗಳಾದ ಬಿ.ಟಿ.ದಿನೇಶ್, ಜಿನ್ನು ನಾಣಯ್ಯ, ಉದಯ ಶಂಕರ್, ಬೇಂಗೂರು ಗ್ರಾಮಸ್ಥರಾದ ಸತೀಶ್ ಬೆಳ್ಯಪ್ಪ ಹಾಗೂ ಸಂತೋಷ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.