Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಕ್ಷೇತ್ರ : ಅಮೀನ್ ಮೊಹಿಸಿನ್ ನಾಮಪತ್ರ ಸಲ್ಲಿಕೆ : ಕಾಂಗ್ರೆಸ್ ವಿರುದ್ಧ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಕ್ಷೇತ್ರ : ಅಮೀನ್ ಮೊಹಿಸಿನ್ ನಾಮಪತ್ರ ಸಲ್ಲಿಕೆ : ಕಾಂಗ್ರೆಸ್ ವಿರುದ್ಧ ಅಸಮಾಧಾನ*

ಏಪ್ರಿಲ್ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.13 : ವಿಧಾನಸಭಾ ಚುನಾವಣಾ ಅಧಿಸೂಚನೆ ಇಂದು ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆಯ ಆರಂಭಿಕ ದಿನದಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಮಿನ್ ಮೊಹಿಸಿನ್ ಅವರು ಮಡಿಕೇರಿ ಕ್ಷೇತ್ರಕ್ಕೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿಗಳಾದ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರಿಗೆ ಅಮೀನ್ ಮೊಹಿಸಿನ್ ನಾಮಪತ್ರವನ್ನು ಸಲ್ಲಿಸಿದರು.
::: ಮೆರವಣಿಗೆ :::
ನಾಮಪತ್ರ ಸಲ್ಲಿಸುವುದಕ್ಕು ಮೊದಲು ಎಸ್‍ಡಿಪಿಐ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.
::: ಬ್ಯಾಲೆಟ್ ಹೋರಾಟ :::
ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅಮಿನ್ ಮೊಹಿಸಿನ್, ಕಳೆದ ಒಂದೂವರೆ ದಶಕಗಳಿಂದ ಜನಪರವಾಗಿ ಎಸ್‍ಡಿಪಿಐ ಸಾಕಷ್ಟು ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಇದೀಗ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷವಾಗಿ ‘ಬ್ಯಾಲೆಟ್ ಹೋರಾಟ’ಕ್ಕೆ ಮುಂದಾಗಿರುವುದಾಗಿ ತಿಳಿಸಿದರು.
ಇತರೆ ಯಾವುದೇ ರಾಜಕೀಯ ಪಕ್ಷಗಳ ಲಾಭ, ನಷ್ಟಗಳು ಎಸ್‍ಡಿಪಿಐ ಪಕ್ಷಕ್ಕೆ ಸಂಬಂಧಪಡುವುದಿಲ್ಲ. ಒಂದು ರಾಷ್ಟ್ರೀಯ ಪಕ್ಷವಾಗಿರುವ ಎಸ್‍ಡಿಪಿಐ ಮೂಲಕ ಜನಪರ ಕಾಳಜಿಯೊಂದಿಗೆ ಚುನಾವಣಾ ಸ್ಪರ್ಧೆಗೆ ಇಳಿಯಲಾಗಿದೆ. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದರು. ಎಸ್‍ಡಿಪಿಐನಿಂದ ರಾಜ್ಯದ 19 ವಿವಿಧ ಕ್ಷೇತ್ರಗಳಲ್ಲಿ ಇಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿರುವುದಾಗಿ ತಿಳಿಸಿದರು.
::: ಮಾರಾಟದ ಪಕ್ಷ :::
ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ಕುಟುಂಬ ರಾಜಕಾರಣ ಕೊನೆಯಾಗಬೇಕು ಎನ್ನುವ ಚಿಂತನೆಗಳಿದೆಯಾದರೆ, ಸೈದ್ಧಾಂತಿಕ ನಿಲುವು ಹೊಂದಿರುವ ಪಕ್ಷಗಳು ಇಂತಹ ವಿಚಾರಗಳಿಂದ ದೂರ ಉಳಿದಿವೆ. ಕಾಂಗ್ರೆಸ್‍ನಂತಹ ಪಕ್ಷ ಇಂದು ‘ಮಾರಾಟ’ದ ಸರಕಾಗಿದೆಯೆಂದು ಎಂದು ಅಮೀನ್ ಮೊಹಿಸಿನ್ ಲೇವಡಿ ಮಾಡಿದರು.
ಸಾಕಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್‍ನಿಂದ ಆಯ್ಕೆಯಾಗಿ ಬಂದು ಪಕ್ಷ ತೊರೆದು ಬಿಜೆಪಿಗೆ ದೊಡ್ಡ ಸಂಖ್ಯೆಯಲ್ಲಿ, ಅಂದರೆ ಪಕ್ಷಾಂತರ ನಿಷೇಧ ಕಾಯ್ದೆಯೂ ಅನ್ವಯವಾಗದಷ್ಟು ಮಂದಿ ಬಿಜೆಪಿಗೆ ಸೇರ್ಪಡೆಯಾಗಿರುವುದನ್ನು ಕಾಣುತ್ತಿದ್ದೇವೆಂದು ವ್ಯಂಗ್ಯವಾಡಿದರು.
::: ಎಸ್‍ಡಿಪಿಐ ನಿರ್ಣಾಯಕ ಪಾತ್ರ :::
ಎಸ್‍ಡಿಪಿಐ ಪಕ್ಷ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಸಮುದಾಯಗಳನ್ನು ಒಳಗೊಂಡಂತಹ ಪಕ್ಷವಾಗಿದ್ದು, ಜಿಲ್ಲೆಯಲ್ಲಿ ಶೋಷಿತ ಸಮುದಾಯದ ವಸತಿ ಸಮಸ್ಯೆ, ಪರಿಶಿಷ್ಟ ಸಮೂಹಗಳ ಸಂಕಷ್ಟಗಳ ಬಗ್ಗೆ ಸಾಕಷ್ಟು ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಈ ಹಿನ್ನೆಲೆಯೊಳಗೆ ಎಸ್‍ಡಿಪಿಐನ್ನು ಕೇವಲ ಒಂದು ಸಮೂಹವಷ್ಟೆ ಬೆಂಬಲಿಸುತ್ತದೆ ಎನ್ನುವ ಕಾಂಗ್ರೆಸ್ ಚಿಂತನೆಗಳು ಚುನಾವಣೆಯಲ್ಲಿ ಹುಸಿಯಾಗಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಸ್‍ಡಿಪಿಐಯನ್ನು ಎಲ್ಲಾ ವರ್ಗದ ಜನ ಬೆಂಬಲಿಸಲಿದ್ದು, ಆಡಳಿತದಲ್ಲಿ ಪಕ್ಷ ನಿರ್ಣಾಯಕ ಪಾತ್ರ ವಹಿಸಲಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದೀರ್ಘ ಆಡಳಿತದ ಅವಧಿಯಲ್ಲಿ ಜಿಲ್ಲೆಯ ಜನರ ಬೇಡಿಕೆಗಳು ಈಡೇರಿಲ್ಲ. ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯ ಸೌಲಭ್ಯ ಮತ್ತು ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದನೆ ದೊರೆತ್ತಿಲ್ಲ. ಈ ಹಿನ್ನೆಲೆಯಲ್ಲಿ ಪರ್ಯಾಯ ಅಭ್ಯರ್ಥಿಯನ್ನು ಗೆಲ್ಲಿಸುವ ನಿರೀಕ್ಷೆಗಳು ಜನರಲ್ಲಿದೆ. ಎಸ್‍ಡಿಪಿಐ ನಿರೀಕ್ಷೆಗಳಿಗೆ ಸ್ಪಂದಿಸಲಿದ್ದು, ಈ ಬಾರಿ ಜನರು ನಮ್ಮನ್ನು ಆಶೀರ್ವದಿಸುವ ದೃಢ ವಿಶ್ವಾಸವಿದೆ ಎಂದು ಅಮೀನ್ ಮೊಹಿಸಿನ್ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.