Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ಬಂಟರ ಸಂಘದ ಕಚೇರಿ ಉದ್ಘಾಟನೆ : ಸಂಘಟನಾತ್ಮಕ ಬೆಳವಣಿಗೆಗೆ ಕೈಜೋಡಿಸಲು ಜಗದೀಶ್ ರೈ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ಬಂಟರ ಸಂಘದ ಕಚೇರಿ ಉದ್ಘಾಟನೆ : ಸಂಘಟನಾತ್ಮಕ ಬೆಳವಣಿಗೆಗೆ ಕೈಜೋಡಿಸಲು ಜಗದೀಶ್ ರೈ ಕರೆ*

ಏಪ್ರಿಲ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.15 : ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಹಂತಹಂತವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನಾಂಗದ ಪ್ರತಿಯೊಬ್ಬರು ಕೂಡಾ ಸಂಘದ ಜತೆಗೆ ಕೈಜೋಡಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್ ರೈ ಮನವಿ ಮಾಡಿದರು.
ನಗರದ ಗಾಂಧಿ ಮೈದಾನ ಬಳಿಯಿರುವ ಖಾಸಗಿ ಕಟ್ಟಡದಲ್ಲಿ ನಡೆದ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮುದಾಯ ಬಾಂಧವರಿಗಾಗಿ ಸಂಘದ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ತುಳು ಭಾಷಿಕರ ಹೊಸ ವರ್ಷವಾದ ಬಿಸು ಹಬ್ಬವನ್ನು ಮುಂದಿನ ವರ್ಷದಿಂದ ಸಂಘದ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸುವ ಉದ್ದೇಶವಿದೆ. ನಮ್ಮ ಸಂಸ್ಕøತಿ, ಸಂಪ್ರದಾಯವನ್ನು ಬಿಂಬಿಸುವ ಆಚರಣೆಯಾಗಿ ಎಲ್ಲರೂ ಸಂಭ್ರಮಿಸುವ ರೀತಿಯ ಕಾರ್ಯಕ್ರಮ ಮಾಡಲಾಗುವುದೆಂದರು.
ಜಿಲ್ಲಾ ಬಂಟರ ಸಂಘದ ಜತೆಗೆ ತಾಲೂಕು ಘಟಕ, ನಗರ ಮಹಿಳಾ ಘಟಕ, ಯುವ ಬಂಟ್ಸ್ ಅಸೋಸಿಯೇಷನ್ ಕಾರ್ಯಚಟುವಟಿಕೆಗಳಿಗೆ ಈ ಕಚೇರಿಯನ್ನು ಬಳಸಿಕೊಳ್ಳಬಹುದು. ಸಂಘದ ಕಾರ್ಯಚಟುವಟಿಕೆಗಳು ಜಿಲ್ಲಾ ಬಂಟರ ಭವನದಲ್ಲಿ ಆಗಬೇಕೆಂಬ ಕನಸು ಜನಾಂಗ ಬಾಂಧವರಲ್ಲಿದೆ. ಅದು ಈಡೇರಬೇಕಾದರೆ ಎಲ್ಲರ ಸಹಕಾರ ಅಗತ್ಯ ಎಂದರು.
ಕಾರ್ಯದರ್ಶಿ ರವೀಂದ್ರ ವಿ. ರೈ ಮಾತನಾಡಿ, ನೂತನ ಕಚೇರಿ ಕಾರ್ಯಾರಂಭದೊಂದಿಗೆ ಬಂಟರ ಸಂಘದಲ್ಲಿ ಸುವರ್ಣ ಯುಗ ಶುರುವಾಗಿದೆ. ಮುಂದಿನ ಪೀಳಿಗೆಗೆ ಒಳ್ಳೆಯ ಅಡಿಪಾಯವನ್ನು ನಾವು ಹಾಕಿಕೊಡಬೇಕು. ಹಳೆಯ ವಿಚಾರಗಳನ್ನೇ ಕೆದಕುತ್ತಾ ಹೋಗುವ ಬದಲು ಭವಿಷ್ಯದ ಬಗ್ಗೆ ಉತ್ತಮ ಯೋಜನೆಗಳನ್ನು ಹಾಕಿಕೊಂಡು ಸಂಘ ಮುನ್ನಡೆಯಬೇಕೆಂದರು.
ಸಂಘವನ್ನು ಒಡೆಯುವ ಉದ್ದೇಶದಿಂದ ಬೆರಳೆಣಿಕೆಯ ಮಂದಿ ಸೇರಿಕೊಂಡು ಪರ್ಯಾಯ ಸಂಘ ಮಾಡಿಕೊಂಡು ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ. ಸಮುದಾಯ ಬಾಂಧವರು ಇದಕ್ಕೆ ಮನ್ನಣೆ ನೀಡಬಾರದು. ಮೂಲ ಸಂಘದ ಜತೆಗೆ ಎಲ್ಲರೂ ಕೈಜೋಡಿಸಿಕೊಂಡು ಸಮುದಾಯದ ಏಳಿಗೆಗೆ ಸಹಕರಿಸುವಂತೆ ಮನವಿ ಮಾಡಿದರು.
ಸಂಘದ ಗೌರವಾಧ್ಯಕ್ಷ ಬಿ.ಬಿ. ಐತಪ್ಪ ರೈ ನೂತನ ಕಚೇರಿ ಉದ್ಘಾಟನೆ ಮಾಡಿ ಶುಭಕೋರಿದರು. ಕಚೇರಿ ಉದ್ಘಾಟನೆ ಅಂಗವಾಗಿ ಗಣಪತಿ ಹೋಮ, ಹಬ್ಬದ ಪ್ರಯುಕ್ತ ಬಿಸು ಕಣಿ ಪೂಜೆ ನೆರವೇರಿತು.
ಮಡಿಕೇರಿ ತಾಲೂಕು ಅಧ್ಯಕ್ಷ ರಮೇಶ್ ರೈ, ವಿರಾಜಪೇಟೆ ತಾಲೂಕು ಅಧ್ಯಕ್ಷ ಲೀಲಾಧರ ರೈ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಜನಾರ್ದನ ಶೆಟ್ಟಿ, ನಗರ ಮಹಿಳಾ ಘಟಕ ಅಧ್ಯಕ್ಷೆ ಸೌಮ್ಯ ಶೆಟ್ಟಿ, ಹಿರಿಯರಾದ ಕೊರಗಪ್ಪ ರೈ, ಸಂಘದ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭ ಇದ್ದರು.

ಮಾಸಿಕ ಸಭೆ :: ಕಚೇರಿ ಉದ್ಘಾಟನೆ ಬಳಿಕ ಸಂಘದ ಮಾಸಿಕ ಸಭೆ ಅಧ್ಯಕ್ಷ ಜಗದೀಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ನಾಲ್ಕೈದು ಮಂದಿ ಸಂಘ ವಿರೋಧಿ ಚಟುವಟಿಕೆ ನಡೆಸುತ್ತಿದ್ದು, ಅಂಥವರನ್ನು ತಕ್ಷಣವೇ ಸಂಘದಿಂದ ಉಚ್ಚಾಟನೆ ಮಾಡಬೇಕೆಂದು ಸಭೆಯಲ್ಲಿ ಆಗ್ರಹ ವ್ಯಕ್ತವಾಯಿತು. ವಿರಾಜಪೇಟೆ ತಾಲೂಕು ಅಧ್ಯಕ್ಷ ಲೀಲಾಧರ ರೈ ಮಾತನಾಡಿ, ವಿರಾಜಪೇಟೆಯಲ್ಲಿ ಹೊಸದಾಗಿ ಆರಂಭವಾಗಿರುವ ತಾಲೂಕು ಘಟಕಕ್ಕೆ ಪರ್ಯಾಯವಾಗಿ ಕೆಲವರು ಸೇರಿಕೊಂಡು ಮತ್ತೊಂದು ಸಂಘಟನೆ ಮಾಡಿ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಇದು ಖಂಡನೀಯ. ಸಂಘಟನೆಯನ್ನು ಒಡೆಯುವ ಅವರ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಇಂಥವರ ಬಗ್ಗೆ ಜನಾಂಗ ಬಾಂಧವರು ಎಚ್ಚರಿಕೆಯಿಂದ ಇರಬೇಕೆಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.