Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ನಿಮ್ಮ ಮಡಿಲಿಗೆ ಹಾಕಿದ್ದೇವೆ : ಡಿ.ಕೆ.ಶಿವಕುಮಾರ್
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ : ನಿಮ್ಮ ಮಡಿಲಿಗೆ ಹಾಕಿದ್ದೇವೆ : ಡಿ.ಕೆ.ಶಿವಕುಮಾರ್

ಏಪ್ರಿಲ್ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.17 : ರಾಜ್ಯದಲ್ಲಿ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆೆ ಮತದಾನದ ಪವಿತ್ರ ದಿನ ಮಾತ್ರವಲ್ಲ ಶೇ.40ರ ಕಮಿಷನ್ ದಂಧೆ, ಮೇರೆ ಮೀರಿರುವ ಭ್ರಷ್ಟಾಚಾರವನ್ನು ಓಡಿಸುವ ಮತ್ತು ಡಬಲ್ ಇಂಜಿನ್ ಸರ್ಕಾರಕ್ಕೆ ಉತ್ತರ ನೀಡುವ ಮಹತ್ವದ ದಿನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಗಾಂಧಿ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಅಜ್ಜಿಕುಟ್ಟೀರ ಪೊನ್ನಣ್ಣ ಅವರ ಗೆಲುವಿಗಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು.
ರಾಜ್ಯದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿತ್ಯೋಪಯೋಗಿ ವಸ್ತಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಕೊಡುವುದಾಗಿ ಡಬಲ್ ಇಂಜಿನ್ ಸರ್ಕಾರ ನೀಡಿದ್ದ ಭರವಸೆಗಳು ಹುಸಿಯಾಗಿದೆ. ಇದಕ್ಕೆ ಮೇ 10 ರಂದು ಜನರೇ ಉತ್ತರ ನೀಡಬೇಕು ಮತ್ತು ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನಿಡಿದರು.
::: 150 ಸ್ಥಾನ :::
ರಾಜ್ಯದಲ್ಲಿ ರಾಜಕೀಯ ಬದಲಾವಣೆಯ ಪರ್ವಕಾಲ ಆರಂಭವಾಗಿದ್ದು, ಬದಲಾವಣೆಯ ಬಲವಾದ ಗಾಳಿ ಬೀಸಲಾರಂಭಿಸಿದೆ. ಪ್ರಸ್ತುತ ವಿವಿಧ ಪಕ್ಷಗಳ ಪ್ರಮುಖರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಜಗದೀಶ್ ಶೆಟ್ಟರ್ ಹಾಗೂ ಉಪ ಮುಖ್ಯಮಂತ್ರಿಯಾಗಿದ್ದ ಸವದಿ ಅವರ ಸೇರ್ಪಡೆಯಿಂದ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 150 ಕ್ಕೂ ಹೆಚ್ಚಿನ ಸ್ಥಾನಗಳನ್ನು ಪಡೆಯುವುದು ನಿಶ್ಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
::: ನಿಮ್ಮ ಮಡಿಲಿಗೆ ಹಾಕಿದ್ದೇವೆ :::
ಮಡಿಕೇರಿ ಕ್ಷೇತ್ರದ ಸ್ಪರ್ಧೆಗೆ ಕಾಂಗ್ರೆಸ್ ನಿಂದ ಡಾ.ಮಂತರ್ ಗೌಡ ಅವರಿಗೆ ಅವಕಾಶ ನೀಡುವ ಮೂಲಕ, ಕ್ಷೇತ್ರದ ಜನತೆಯ ಮಡಿಲಿಗೆ ಅವರನ್ನು ಹಾಕಿದ್ದೇನೆ. ಡಾ.ಮಂತರ್ ಹಾಗೂ ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಅವರ ಗೆಲುವಿಗೆ ಪಕ್ಷದ ಎಲ್ಲಾ ಪ್ರಮುಖರು, ಕಾರ್ಯಕರ್ತರು ಕಟಿಬದ್ಧರಾಗಿದ್ದು, ಕೊಡಗಿನಲ್ಲು ಬದಲಾವಣೆಯ ಗಾಳಿ ಬೀಸುತ್ತಿದೆಯೆಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿಗೆ ಬುನಾದಿ ಹಾಕಿದ್ದ ಎ.ಕೆ.ಸುಬ್ಬಯ್ಯ ಅವರು ಆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡoರು. ಇವರ ಸುಪುತ್ರ ಎ.ಎಸ್.ಪೊನ್ನಣ್ಣ ಹಾಗೂ ಕೊಡಗಿನವರೇ ಆಗಿರುವ ಡಾ.ಮಂಥರ್ ಗೌಡ ಯುವಶಕ್ತಿಯಾಗಿದ್ದಾರೆ. ಪ್ರಜ್ಞಾವಂತ, ಬುದ್ಧಿವಂತ, ಕ್ರಿಯಾಶೀಲ ಅಭ್ಯರ್ಥಿಗಳನ್ನು ಕೊಡಗಿಗೆ ನೀಡಿದ್ದೇವೆ. ಇವರಿಗೆ ಎಲ್ಲಾ ಕಾರ್ಯಕರ್ತರು ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
::: ಭರವಸೆ ಈಡೇರಲಿದೆ :::
ಪ್ರಜಾಧ್ವನಿ ಯಾತ್ರೆಯ ಮೂಲಕ 200 ಯೂನಿಟ್ ಉಚಿತ ವಿದ್ಯುತ್, ಪ್ರತೀ ತಿಂಗಳು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಯೋಜನೆಯನ್ನೂ ಕಾಂಗ್ರೆಸ್ ಘೋಷಿಸಿದೆ. ನಾವು ಕೊಟ್ಟ ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ಈಡೇರಿಸದೇ ಇದ್ದಲ್ಲಿ ಮತ್ತೆ ಕಾಂಗ್ರೆಸ್‌ಗೆ ಎಂದಿಗೂ ಮತ ಕೇಳುವುದಿಲ್ಲವೆಂದು ಸ್ಪಷ್ಟಪಡಿಸಿದರು.
ಸಮಾವೇಶದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚಂದ್ರಮೌಳಿ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಸಿ.ಎಸ್.ಅರುಣ್ ಮಾಚಯ್ಯ, ಮಾಜಿ ಸಚಿವೆ ಸುಮಾವಸಂತ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಹರಪಳ್ಳಿ ರವೀಂದ್ರ, ಕೆ.ಪಿ.ಚಂದ್ರಕಲಾ, ಕೆ.ಎಂ.ಲೋಕೇಶ್, ತೆನ್ನಿರ ಮೈನಾ, ಬಿ.ವೈ.ರಾಜೇಶ್, ಸುರಯ್ಯಾ ಅಬ್ರಾರ್, ಪ್ರಕಾಶ್ ಆಚಾರ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK, ಅ. 15: ಕೊಡವಲ್ಯಾಂಡ್‌ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಗುರಿ ಸಾಧಿಸಲು 100 ದಿನಗಳು…

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಎಸ್.ಐ.ಆರ್. ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 15, 2026

ಸುಂಟಿಕೊಪ್ಪ ಮಲಯಾಳಿ ಸಮಾಜದ 19ನೇ ವರ್ಷದ ಓಣಂ ಆಚರಣೆ; ಸಮಾಜದ ಒಗ್ಗಟ್ಟು ಮತ್ತು ಸಂಘಟನೆ ಎಲ್ಲರಿಗೂ ಮಾದರಿ: ಶಾಸಕ ಡಾ. ಮಂತರ್ ಗೌಡ

ಅಕ್ಟೋಬರ್ 15, 2026

ಸುಂಟಿಕೊಪ್ಪದಲ್ಲಿ ಮಲಯಾಳಿ ಸಮಾಜದಿಂದ 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 15, 2026

ಹೊಸತೋಟದಲ್ಲಿ ರಕ್ತದಾನ ಶಿಬಿರ: 30 ಮಂದಿ ರಕ್ತದಾನ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.