Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*
  • *ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*
  • *ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*
  • *ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*
  • *ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಿರಿಯರ ಅಣತಿಯಂತೆ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿರುವೆ : ತೇಲಪಂಡ ಶಿವಕುಮಾರ್ ನಾಣಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಿರಿಯರ ಅಣತಿಯಂತೆ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿರುವೆ : ತೇಲಪಂಡ ಶಿವಕುಮಾರ್ ನಾಣಯ್ಯ*

ಏಪ್ರಿಲ್ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಟಿಕೆಟ್ ಲಭಿಸದೆ ಇರುವುದರಿಂದ ನಾನು ಮತ್ತಷ್ಟು ಪ್ರಬುದ್ಧನಾಗಿದ್ದು, ಪಕ್ಷದ ಹಿರಿಯ ನಾಯಕರ ಅಣತಿಯಂತೆ ಸಕ್ರಿಯ ಕಾರ್ಯಕರ್ತನಾಗಿರುವೆ ಎಂದು ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿರಾಜಪೇಟೆ ಕ್ಷೇತ್ರದ ಮೇಲೆ ನನಗಿದ್ದ ಅಭಿಮಾನದಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಮತ್ತು ಅಭಿವೃದ್ಧಿ ಕಾರ್ಯಗಳ ಮೂಲಕ ಹೊಸ ಮನ್ವಂತರ ಆರಂಭಿಸಬೇಕು ಎನ್ನುವ ಅಭಿಲಾಷೆ ಇತ್ತು. ಅಪಾರ ಪ್ರಮಾಣದ ಅಭಿಮಾನಿಗಳು ಹಾಗೂ ಹಿತೈಷಿಗಳು ನನ್ನನ್ನು ಚುನಾವಣೆಗೆ ಸ್ಪರ್ಧಿಸಿ ಎಂದು ಮಾಡಿದ ಒತ್ತಾಯ ಮತ್ತು ಪ್ರೋತ್ಸಾಹದಿಂದ ನನ್ನ ಹೆಸರು ರಾಜ್ಯ ಮಾತ್ರವಲ್ಲ ದೆಹಲಿಯ ಭಾರತೀಯ ಜನತಾ ಪಕ್ಷದ ವರಿಷ್ಠರ ಮುಂದೆಯೂ ಪರಿಗಣಿತವಾಗುವಂತೆ ಮಾಡಿತು. ನನಗೆ ವೈಯಕ್ತಿಕವಾಗಿ ರಾಜಕೀಯ ಆಸಕ್ತಿಗಿಂತ ಕ್ಷೇತ್ರದ ಮೇಲಿನ ಹಿತಾಸಕ್ತಿ ಮುಖ್ಯವಾಗಿತ್ತು.
ವಿಶೇಷವಾಗಿ ವಿರಾಜಪೇಟೆ ಕ್ಷೇತ್ರದ ಜನತೆಗೆ ನಾನೋರ್ವ ಶಿಸ್ತಿನ ಸಿಪಾಯಿಯಾಗಲು, ನಮ್ಮ ದೇಶದ ಹೆಮ್ಮೆಯ ಪ್ರಧಾನಿಯಂತೆ ನಾನು ಕೂಡ ಕೆಲಸಗಾರನಾಗಬೇಕೆಂದು ನನ್ನನ್ನು ಪ್ರೇರೇಪಿಸಿತು. ಕೊಡಗು ಜಿಲ್ಲೆ ಅನೇಕ ವೈವಿಧಗಳನ್ನು ಒಳಗೊಂಡ ಖನಿಜ. ಕ್ರೀಡೆ, ಸಂಸ್ಕೃತಿ, ಸಂಪ್ರದಾಯ, ಪ್ರಕೃತಿ, ದೈವೀ ಕ್ಷೇತ್ರ, ದೇವರ ಕಾಡು, ಕಾನನ ಸೇರಿದಂತೆ ಮಂದ್ ನಿಂದ ಕುಂದ್ ವರೆಗೂ, ಯೋಧ ಕ್ಷಾತ್ರ ಸಂಪನ್ನತೆಯ ವೀರ ಜವಾನ್ ನಿಂದ ಅನ್ನ ನೀಡುವ ಕಿಸಾನ್ ವರೆಗೂ ಸಂಪನ್ನ ಖನಿಜಗಳ ಬೀಡು ಕೊಡಗು. ಇಂತಹ ಕ್ಷೇತ್ರದಲ್ಲಿ ಉತ್ಸವ ಮೂರ್ತಿಯಾಗಲು ನಾನು ಬಯಸಲಿಲ್ಲ. ಬದಲಿಗೆ ಕ್ಷೇತ್ರ ಪಾಲಕನಾಗಿ ಜನಸೇವೆ, ಜನ್ಮಭೂಮಿ ಸೇವೆಗೆ ನಿಮ್ಮ ಆಶೀರ್ವಾದ ಬಯಸಿದವನು ನಾನು.
ಜಾತಿ, ಜನಾಂಗ, ಸಮುದಾಯ ಮೀರಿ ನನ್ನಲ್ಲಿರುವ ಯೋಗ್ಯತೆಯನ್ನು ಮನಗಂಡು ಶಾಸಕ ಸ್ಥಾನದ ಪೈಪೋಟಿಗೆ ಅಣಿಗೊಳಿಸಿದವರು ನೀವು ಎಂಬ ಹೆಮ್ಮೆ ನನ್ನಲ್ಲಿ ಚಿರಸ್ಥಾಯಿಯಾಗಿ ಇರಲಿದೆ. ಇನ್ನು ರಾಜಕೀಯ ಎಂದಾಕ್ಷಣ ಅಲ್ಲಿ ಹಲವು ಮಾನದಂಡಗಳು ಚಲಾವಣೆಗೆ ಬರಲಿದೆ. ನಾನು ಪ್ರಸ್ತಾಪಿಸಿದಕ್ಕಿಂತ ನೀವೆಲ್ಲರೂ ಉಲ್ಲೇಖಿಸಿದ ಎಲ್ಲಾ ಮಾನದಂಡಗಳು ನನ್ನಲಿದ್ದರೂ ಅಂತಿಮ ಕ್ಷಣದಲ್ಲಿ ಪ್ರಕಟಗೊಂಡ ವರಿಷ್ಟರ ಪ್ರಕಟಣೆ ನನ್ನನ್ನು ಇನ್ನಷ್ಟು ಪ್ರಬುದ್ಧಗೊಳಿಸಿದೆ ಎನ್ನಬಹುದು. ಸಂಘದ ಒಡನಾಟ, ಮೋದಿ ಬ್ರಿಗೇಡ್ ನಲ್ಲಿ ಅರ್ಪಣೆ, ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯನಾಗಿ ಸೇವೆಯ ನಡುವೆ ಕ್ಷೇತ್ರದ ಕೇಂದ್ರ ಬಿಂದುವಾಗಿಸಲು ಜನ ತೋರಿದ ಉತ್ಸಾಹ, ಪ್ರೀತಿ, ಶ್ರಮ ನಾನೆಂದೂ ಕಳೆದುಕೊಳ್ಳಲಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಿದ್ದಾಂತದಂತೆ ವ್ಯಕ್ತಿ ನಿರ್ಮಾಣ, ರಾಷ್ಟ್ರ ನಿರ್ಮಾಣ, ಧರ್ಮ ರಕ್ಷಣೆ, ನಮ್ಮ ನಿತ್ಯದ ಕಾಯಕ. ಪಕ್ಷದ ಹಿರಿಯ ನಾಯಕರ ಅಣತಿಯಂತೆ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಪಕ್ಷವನ್ನು ಕಟ್ಟಿ ಬೆಳೆಸಲು ನನ್ನ ಪ್ರಯತ್ನ ಸದಾ ಮುಂದುವರಿಯಲಿದೆ ಎಂದು ಶಿವಕುಮಾರ್ ನಾಣಯ್ಯ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*

ಜುಲೈ 25, 2026

*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*

ಜುಲೈ 25, 2026

*ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*

ಜುಲೈ 25, 2026

*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*

ಜುಲೈ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.25 NEWS DESK : “ನೀಟ್” ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಯುವ ಸಮೂಹ ನಡೆಸುತ್ತಿರುವ ಹೋರಾಟವನ್ನು…

*ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*

ಜುಲೈ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*

ಜುಲೈ 25, 2026

*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*

ಜುಲೈ 25, 2026

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 2026

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.