ಮಡಿಕೇರಿ ಏ.18 : ಆಮ್ ಆದ್ಮಿ ಪಾರ್ಟಿಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ದಕ್ಷಿಣ ಕೊಡಗಿನ ಕೆ.ಪಿ.ಬೋಪಣ್ಣ ಅವರು ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆಮ್ ಆದ್ಮಿ ಪಾರ್ಟಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬೋಪಣ್ಣ ಅವರು ಏ.20 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಪಕ್ಷದ ಇಬ್ಬರು ಅಭ್ಯರ್ಥಿಗಳನ್ನು ಮತದಾರರು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೋಪಣ್ಣ ಅವರು ಆಮ್ ಆದ್ಮಿ ಪಾರ್ಟಿಯಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದು, ಕೋವಿಡ್ ಸಂದರ್ಭ ಮಾಸ್ಕ್, ನೊಂದವರಿಗೆ ಹಾಲು ಮತ್ತು ಆಹಾರ ವಿತರಣೆ ಮಾಡಿ ಸಮಾಜ ಸೇವೆ ಸಲ್ಲಿಸಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಸಹಿ ಸಂಗ್ರಹ ಅಭಿಯಾನ ಮತ್ತು ಬೆಂಗಳೂರಿನಲ್ಲಿ ಪಕ್ಷ ನಡೆಸಿದ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಇವರು ವೃತ್ತಿಯಲ್ಲಿ ವಾಹನದ ಬಿಡಿಭಾಗಗಳ ತಯಾರಕರು ಆಗಿದ್ದಾರೆ ಎಂದು ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.







