ವಿರಾಜಪೇಟೆ ಏ.19 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಸಿ.ಎಸ್. ರವೀಂದ್ರ ಇಂದು ನಾಮಪತ್ರ ಸಲ್ಲಿಸಿದರು.
ಪಕ್ಷದ ಪ್ರಮುಖರೊಂದಿಗೆ ವಿರಾಜಪೇಟೆ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಶಬನಾ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಪಕ್ಷದ ಪ್ರಮುಖರಾದ ಪೃಥ್ವಿ ಹಾಗೂ ಅಪ್ಪಯ್ಯ ಹಾಜರಿದ್ದರು.
2011ರಲ್ಲಿ ದೇಶದಲ್ಲಿ ಅಣ್ಣಾ ಹಜಾರೆ ನಡೆಸಿದ ಜನಾಂದೋಲನದಿಂದ ಸ್ಫೂರ್ತಿಗೊಂಡು ನಂತರ ಸ್ಥಾಪನೆಯಾದ ಆಮ್ ಆದ್ಮಿ ಪಕ್ಷದಲ್ಲಿ ಸೇರ್ಪಡೆಗೊಂಡ ರವೀಂದ್ರ ಅಂದಿನಿಂದ ಇಂದಿನವರೆಗೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಜನರ ಸಮಸ್ಯೆಗಳಿಗೆ ಸುಲಭವಾಗಿ ಸ್ಪಂದಿಸುವ ಇಚ್ಛಾಶಕ್ತಿಯನ್ನು ಹೊಂದಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದರು.







