ಮಡಿಕೇರಿ ಏ.23 : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಪರವಾಗಿ ಅವರ ಪತ್ನಿ ದಿವ್ಯಾ ಮಂತರ್‌ಗೌಡ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಜೆಗುಂಡಿ ಗ್ರಾಮದಲ್ಲಿ ಬಿರುಸಿನ ಮತಯಾಚನೆ ಮಾಡಿದರು. ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರ ನೀಡುವಂತೆ ಕೋರಿದರು.









