Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ*

ಏಪ್ರಿಲ್ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.24 : ಡಾ.ರಾಜ್ ಕುಮಾರ್ ಅವರು ಪೌರಾಣಿಕ, ಸಾಮಾಜಿಕ, ಹಾಡುಗಾರಿಕೆ ಹೀಗೆ ಚಿತ್ರರಂಗದ ವಿವಿಧ ಕೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. 200 ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಕರ್ನಾಟಕ ರತ್ನ ಹೀಗೆ ಹತ್ತು ಹಲವು ಪ್ರಶಸ್ತಿಗಳು ಡಾ.ರಾಜ್‍ಕುಮಾರ್ ಅವರಿಗೆ ಹುಡುಕಿ ಬಂದವು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಡಾ.ರಾಜ್‍ಕುಮಾರ್ ಅವರ 95ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ.ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಡಾ.ರಾಜ್‍ಕುಮಾರ್ ಅವರ ಸರಳತೆ, ಕಲಾಪ್ರತಿಭೆ ಮತ್ತು ಜೀವನ ಶೈಲಿಯಿಂದ ಚಿತ್ರರಂಗದಲ್ಲಿ ಅತ್ಯುನ್ನತ ಸ್ಥಾನಕ್ಕೆ ಬೆಳೆದರು ಎಂದು ವಿವರಿಸಿದರು.
1959 ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಡಾ.ರಾಜ್‍ಕುಮಾರ್ ಕನ್ನಡ ಚಲನಚಿತ್ರ ರಂಗದಲ್ಲಿ ಸಾರ್ವಕಾಲಿಕ, ಚಲನಚಿತ್ರ ರಂಗದಲ್ಲಿ ಉತ್ತುಂಗಕ್ಕೆ ಏರಿದರೂ ಸಹ ಸರಳ ವ್ಯಕ್ತಿತ್ವವನ್ನು ಅಳವಡಿಸಿಕೊಂಡಿದ್ದರು. ಸಾಮಾಜಿಕ ಸಂದೇಶಗಳನ್ನು ನೀಡುವ ಚಿತ್ರಗಳನ್ನು ನೀಡಿದ ಹೆಗ್ಗಳಿಕೆ ಡಾ.ರಾಜ್‍ಕುಮಾರ್ ಅವರಿಗೆ ಸಲ್ಲುತ್ತದೆ ಎಂದರು.
ಮುತ್ತುರಾಜ್ ಆಗಿ ಚಾಮರಾಜನಗರ ಜಿಲ್ಲೆಯ ಸಿಂಗನಲ್ಲೂರಿನಲ್ಲಿ 1929 ರಲ್ಲಿ ಜನಿಸಿ. ಚಲನಚಿತ್ರ ರಂಗದಲ್ಲಿ ದೊಡ್ಡ ಮಟ್ಟಕ್ಕೆ ಬೆಳೆದರು. ಮೇರು ವ್ಯಕ್ತಿತ್ವ ಕಲಾ ಪ್ರತಿಭೆಯಿಂದ ಡಾ.ರಾಜ್‍ಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ಉನ್ನತ ಸ್ಥಾನಕ್ಕೇರಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ನಾಡು-ನುಡಿ ವಿಷಯದಲ್ಲಿ ಸದಾ ಮುಂದಿರುತ್ತಿದ್ದ ಡಾ.ರಾಜ್‍ಕುಮಾರ್ ಅವರು ಗೋಕಾಕ್ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದರು.
ಡಾ.ರಾಜ್‍ಕುಮಾರ್ ಬೇಡರ ಕಣ್ಣಪ್ಪ, ಭಕ್ತ ಕನಕದಾಸ, ರಣಧೀರ ಕಂಠೀರವ, ಸತ್ಯ ಹರಿಶ್ಚಂದ್ರ, ಇಮ್ಮಡಿ ಪುಲಿಕೇಶಿ, ಶ್ರೀಕೃಷ್ಣ ದೇವರಾಯ, ಭಕ್ತ ಕುಂಬಾರ, ಮಯೂರ, ಬಬ್ರುವಾಹನ, ಭಕ್ತ ಪ್ರಹ್ಲಾದ ಹೀಗೆ ಹಲವು ಐತಿಹಾಸಿಕ, ಪೌರಾಣಿಕ ಮತ್ತು ಸಾಮಾಜಿಕ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಸ್ಸಿನಲ್ಲಿ ಸದಾ ಇದ್ದಾರೆ ಎಂದು ವರ್ಣಿಸಿದರು.
ಡಾ.ರಾಜ್‍ಕುಮಾರ್ ಅವರು ಗಾಯಕರಾಗಿ, ಯಾರೇ ಕೂಗಾಡಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಹೇ.. ದಿನಕರ, ಹೃದಯ ಸಮುದ್ರ, ನಾದಮಯ ಹೀಗೆ ಹಲವು ಹಾಡುಗಳನ್ನು ಹಾಡಿ ರಾಷ್ಟ್ರೀಯ ಸಿನೆಮಾ ಪ್ರಶಸ್ತಿ ಪಡೆದಿದ್ದಾರೆ ಎಂದರು.
ಕನ್ನಡ ನಾಡು ನುಡಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಡಾ.ರಾಜ್ ಕುಮಾರ್ ಅವರು, ನಾಡಿನಲ್ಲಿ ಅಣ್ಣಾವ್ರು, ರಾಜಣ್ಣ ಎಂದು ಮನೆ ಮಾತಾಗಿದ್ದಾರೆ. ನಟ ಸಾರ್ವಭೌಮ, ಬಂಗಾರದ ಮನುಷ್ಯ, ವರನಟ ಎಂಬ ಬಿರುದನ್ನು ಪಡೆದಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ನುಡಿದರು.
ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಬಾಲರಾಜ್ ರಂಗರಾವ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.