ಮಡಿಕೇರಿ ಏ.26 : ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಹಿನ್ನೆಲೆ 208 ಮಡಿಕೇರಿ ವಿಧಾನಸಭಾಕ್ಷೇತ್ರ ಹಾಗೂ 209 ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿ ವೀಕ್ಷಕರನ್ನು ನೇಮಕ ಮಾಡಲಾಗಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಡಿಸಿಸಿಯ ಉಪಾಧ್ಯಕ್ಷ ಕೆ.ಎಂ.ಲೋಕೇಶ್ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಸದಸ್ಯರಾದ, ಡಿಸಿಸಿ ಮಾಜಿ ಅಧ್ಯಕ್ಷ ಮುಕ್ಕಾಟ್ಟೀರ ಬಿ.ಶಿವು ಮಾದಪ್ಪ ಅವರನ್ನು ಕೆಪಿಸಿಸಿಯ ಸೂಚನೆ ಮೇರೆಗೆ ನೇಮಿಸಿ ಆದೇಶಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







