ವಿರಾಜಪೇಟೆ ಏ.26 : ವಿರಾಜಪೇಟೆಯ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಚಿಣ್ಣರ ಬೇಸಿಗೆ ‘ಸಂಭ್ರಮ’ ಶಿಬಿರವನ್ನು ಏ.28 ರಿಂದ 30 ರವರೆಗೆ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೂರು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶಿಬಿರ ನಡೆಯಲಿದ್ದು, 10 ರಿಂದ 16 ವರ್ಷದೊಳಗಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ, ಆಲೋಚನೆಯ ನೆಲೆ, ಏಕಾಗ್ರತೆಯ ಕಲೆ, ಪರೀಕ್ಷಾ ಭಯದ ನಿವಾರಣೆ, ಧ್ಯಾನದ ಮಹತ್ವಿಕೆ, ಕ್ರಿಯೆಯಲ್ಲಿ ಆಲೋಚನೆಗಳು, ಮೌಲ್ಯಗಳುಗುಂಪು ಚಟುವಟಿಕೆಗಳು, ಒಳಾಂಗಣ ಹೊರಾಂಗಣ ಆಟೋಟಗಳು ಸೇರಿದಂತೆ ಇತರ ಚಟುವಟಿಕೆಗಳು ನಡೆಯಲಿದೆ.
ಶಿಬಿರವು ಉಚಿತವಾಗಿ ನಡೆಯಲಿದ್ದು, ಹೆಚ್ಚಿನ ಮಕ್ಕಳು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ, ಹೆಚ್ಚಿನ ವಿವರ ಹಾಗೂ ನೋಂದಾವಣೆಗಾಗಿ ಮೊ. 8105419822 ಹಾಗೂ 08274-256834 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.







