ಮಡಿಕೇರಿ ಏ.26 : ಕರ್ನಾಟಕ ರಾಜ್ಯ ಕಾನೂನು ಹಾಗೂ ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಪಶ್ಚಿಮವಲಯ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಘಟಕಗಳ ಚುನಾವಣಾ ಪೂರ್ವ ಸಿದ್ದತೆಯ ಪ್ರಗತಿಯ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾದ ಡಾ|| ಚಂದ್ರಗುಪ್ತ ಐ.ಪಿ.ಎಸ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾಕೆ ಅಕ್ಷಯ್ ಮಚ್ಚಿಂದ್ರ ಐ.ಪಿ.ಎಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ವಿಕ್ರಮ್ ಅಮಟೆ ಐ.ಪಿ.ಎಸ್ ಹಾಗೂ ಜಿಲ್ಲೆಯ ಇತರ ಅಧಿಕಾರಿಗಳು ಹಾಜರಿದ್ದರು.








