Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ*

ಏಪ್ರಿಲ್ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.28 : ಕಳೆದ ಐದು ವರ್ಷಗಳ ಅವಧಿಯಲ್ಲಿ ಶಾಸಕರುಗಳಾಗಿ ಜನರ ಸಂಕಷ್ಟಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿರುವ ಕಾರಣ ಈ ಬಾರಿಯ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಮತ್ತೆ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರ್ರೆಸ್ ಹೊರಗಿನ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದ್ದು, ಇಂತಹ ‘ಪಿಕ್ನಿಕ್’ ರಾಜಕಾರಣಿಗಳಿಂದ ಯಾವುದೇ ಅಭಿವೃದ್ಧಿ ಕಾರ್ಯ ಸಾಧ್ಯವಿಲ್ಲ. ಹಣ ಬಲದ ರಾಜಕಾರಣದ ಎದುರು ನಾವು ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿರುವುದಾಗಿ ಹೇಳಿದರು.

ವಿಶ್ವ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮಾತಿನಂತೆ ತಮ್ಮ ಆಡಳಿತದ ಅವಧಿಯಲ್ಲಿ ‘ಸೇವೆಯೊಂದಿಗೆ ಸಂಘಟನೆ’ ಮಾಡಲಾಗಿದೆ. ಈ ಬಾರಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದ ಗೆಲುವನ್ನು ದಾಖಲಿಸಲಿದೆ ಎಂದರು.

ಪ್ರಾಕೃತಿಕ ವಿಕೋಪ ಮತ್ತು ಕೋವಿಡ್ ಸಂದರ್ಭ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಕಾಂಗ್ರೆಸ್ ಮಾಡಿಲ್ಲ ಎಂದು  ಟೀಕಿಸಿದರು. ಬಿಜೆಪಿಯಿಂದ ಶೀಘ್ರವೇ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ ಅವರು, ಕೊಡಗಿನ ಪ್ರವಾಸೋದ್ಯಮದ ಅಭಿವೃದ್ಧಿಗೆ 18 ಗ್ರಾಮಗಳನ್ನು ಒಳಗೊಂಡ ‘ಟೂರಿಸ್ಟ್ ಕಾರಿಡಾರ್’ ಮಾಡುವ ಚಿಂತನೆ ತಮ್ಮದಾಗಿದೆ. ಈ ಯೋಜನೆಯ ಮೂಲಕ ಗ್ರಾಮಗಳನ್ನು ಸಂಪರ್ಕಿಸುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನವನ್ನು ನೀಡಲಾಗುವುದೆಂದು ತಿಳಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‍ಸಿ-ಎಸ್‍ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಿಸಲಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಎಲ್ಲಾ ಸಂದರ್ಭದಲ್ಲೂ ಎಸ್‍ಸಿ, ಎಸ್.ಟಿ ಜನಾಂಗದವರನ್ನು ಮತ ಪಡೆಯುವುದಕ್ಕಷ್ಟೆ ಸೀಮಿತಗೊಳಿಸಿದೆ ಎಂದು ಅಪ್ಪಚ್ಚುರಂಜನ್ ಆರೋಪಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏ.29 ರಂದು ಜಿಲ್ಲೆಗೆ ಆಗಮಿಸಲಿದ್ದು, ಬೆಳಗ್ಗೆ 10.30 ಗಂಟೆಗೆ ನಗರದ ಚೌಡೇಶ್ವರಿ ದೇವಾಲಯದಿಂದ ಜನರಲ್ ತಿಮ್ಮಯ್ಯ ವೃತ್ತದ ವರೆಗೆ ರೋಡ್ ಶೋ ನಡೆಯಲಿದೆ ಎಂದರು.

ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಮಾತನಾಡಿ, ಅಪ್ಪಚ್ಚು ರಂಜನ್ ಅವರು ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಅರಿತು ಕಾಂಗ್ರೆಸ್ಸಿಗರು ಹತಾಶರಾಗಿ ಜಾತಿ ರಾಜಕಾರಣ ಮಾಡುವ ಮೂಲಕ ಸಮಾಜವನ್ನು ಒಡೆದು ಮತ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಕಾಂಗೀರ ಸತೀಶ್ ಹಾಗೂ ನಗರ ಮಂಡಲದ ಅಧ್ಯಕ್ಷ ಮನು ಮಂಜುನಾಥ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.