Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಸ್‌ಡಿಪಿಐ ಸಮಾಲೋಚನಾ ಸಭೆ : ಮಡಿಕೇರಿಯಲ್ಲಿ ಪ್ರಬಲ ಪೈಪೋಟಿ ನೀಡುವ ವಿಶ್ವಾಸ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಸ್‌ಡಿಪಿಐ ಸಮಾಲೋಚನಾ ಸಭೆ : ಮಡಿಕೇರಿಯಲ್ಲಿ ಪ್ರಬಲ ಪೈಪೋಟಿ ನೀಡುವ ವಿಶ್ವಾಸ

ಏಪ್ರಿಲ್ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಏ.30 : ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐ ಪಕ್ಷ  ಸ್ಪರ್ಧೆ ಮಾಡುತ್ತಿದೆ. ವಿರಾಜಪೇಟೆ ಕ್ಷೇತ್ರದಲ್ಲಿ  ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಇರುವ ಕಾರಣ ಪಕ್ಷದ ನಿಲುವು ಕುರಿತು ಮಡಿಕೇರಿಯ ಜಿಲ್ಲಾ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಅವರ ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಮತ್ತು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ನಾಯಕರುಗಳೊಂದಿಗೆ ಚರ್ಚಿಸಲಾಯಿತು.
 ಜನಪರ ಹೋರಾಟಗಾರ ಅಮೀನ್ ಮೊಹಿಸಿನ್ ಅವರು ಮಡಿಕೇರಿ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ನೀಡಲಿದ್ದು, ಕ್ಷೇತ್ರದಲ್ಲಿ ಬಿರುಸಿನ ಮತ ಪ್ರಚಾರ ನಡೆಸುತ್ತಿದ್ದಾರೆ‌. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಜೆಸಿಬಿ ಪಕ್ಷಗಳಾಗಿದ್ದು, ಬೇಸತ್ತಿರುವ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಮಡಿಕೇರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಸ್‌ಡಿಪಿಐ ಅಭ್ಯರ್ಥಿ ಅಮೀನ್ ಮೊಹಿಸಿನ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ಅಫ್ಸರ್ ಕೊಡ್ಲಿಪೇಟೆ ವಿಶ್ವಾಸ ವ್ಯಕ್ತಪಡಿಸಿದರು.
ವಿರಾಜಪೇಟೆ ಕ್ಷೇತ್ರದಲ್ಲಿ  ಪಕ್ಷದ ಅಭ್ಯರ್ಥಿ ಕಣಕ್ಕೆ ಇಳಿಸದ ಕಾರಣ ಫ್ಯಾಸಿಸ್ಟ್ ಮನೋಭಾವನೆ ಇರುವ ಅಭ್ಯರ್ಥಿಗಳನ್ನು ಸೋಲಿಸುವ ಮತ್ತು ಜನಪರ ಕಾಳಜಿ ಹೊಂದಿರುವ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಕುರಿತು ಸುದೀರ್ಘ ಚರ್ಚೆ ನಡೆದಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ 16 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಹೊರತು ಪಡಿಸಿ ಜಾತ್ಯಾತೀತ ಮನೋಭಾವವುಳ್ಳ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದೇವೆ. ಇದರ ಸಲುವಾಗಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದ್ದು, ರಾಜ್ಯ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತಿಳಿಸಲಾಗುವುದೆಂದು ಸ್ಪಷ್ಟಪಡಿಸಿದರು.
ಎಸ್ ಡಿ ಪಿ ಐ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಜನರ ಬಳಿ ಹೋಗಿ ಮತ ಕೇಳುವ ಪಕ್ಷವಲ್ಲ. ವರ್ಷದ 365 ದಿನಗಳು ಕೂಡ ನಮ್ಮ ಕಾರ್ಯಕರ್ತರು ಜನರ ಸಮಸ್ಯೆಯನ್ನು ಬಗೆಹರಿಸಲು ಹೋರಾಟ ಮಾಡುತ್ತಿದ್ದಾರೆ. ಜನರು ಎಸ್ ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದು ಪಕ್ಷದ 16 ಶಾಸಕರು ವಿಧಾನಸಭೆ ಪ್ರವೇಶಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭ ರಾಜ್ಯ ಸಮಿತಿ ಸದಸ್ಯರಾದ ಸಿದ್ದೀಕ್ ಆನೆಮಹಲ್, ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮಡಿಕೇರಿ ಚುನಾವಣಾ ಉಸ್ತುವಾರಿ ಬಷೀರ್ ಅಹ್ಮದ್,  ಜಿಲ್ಲಾ ಕಾರ್ಯದರ್ಶಿ ಮೇರಿ ವೇಗಸ್, ತೈಸೀರ್, ವಿರಾಜಪೇಟೆ ವಿಧಾನಸಭಾ ಅಧ್ಯಕ್ಷರಾದ ಹನೀಫ್, ಮಡಿಕೇರಿ ವಿಧಾನಸಭಾ ಅಧ್ಯಕ್ಷರಾದ ಉಸ್ಮಾನ್ ಸುಂಟಿಕೊಪ್ಪ , ಅಭ್ಯರ್ಥಿ ಅಮೀನ್ ಮೊಹಿಸಿನ್ , ಮನ್ಸೂರ್, ಸಲಾಂ ಕೂಡಿಗೆ, ಜಲೀಲ್  ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಿರಾಜಪೇಟೆಯ…

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.